ನಿಖಿಲ್ ಗೆ ಬಿಗ್ ಶಾಕ್, ಉಪವಾಸ ಸತ್ಯಾಗ್ರಹ ಆರಂಭಿಸಿದ ಕಾಂಗ್ರೆಸ್ ಮುಖಂಡರು

ನಿಖಿಲ್ ಗೆ ಬಿಗ್ ಶಾಕ್, ಉಪವಾಸ ಸತ್ಯಾಗ್ರಹ ಆರಂಭಿಸಿದ ಕಾಂಗ್ರೆಸ್ ಮುಖಂಡರು

ಯಾಕೋ ನಿಖಿಲ್ ಕುಮಾರಸ್ವಾಮಿ ರವರ ಅದೃಷ್ಟ ಚೆನ್ನಾಗಿ ಇದ್ದಂತೆ ಕಾಣುತ್ತಿಲ್ಲ, ಮಂಡ್ಯ ಜಿಲ್ಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಾರೆ ಎಂಬ ಮಾತು ಕೇಳಿ ಬಂದ ಕ್ಷಣದಿಂದಲೂ ನಿಖಿಲ್ ಕುಮಾರಸ್ವಾಮಿ ರವರಿಗೆ ಬಾರಿ ಸವಾಲುಗಳು ಎದುರಾಗಿವೆ. ಮೊದಲು ಸುಮಲತಾ ರವರು ಮಂಡ್ಯ ಜಿಲ್ಲೆಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕೆಂದು ಪಟ್ಟು ಹಿಡಿದು ಕುಳಿತಿದ್ದರು. ಆದರೆ ಧರ್ಮವನ್ನು ಪಾಲಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ಸುಮಲತಾ ರವರಿಗೆ ಟಿಕೆಟ್ ನೀಡದೆ, ಮಂಡ್ಯ ಜಿಲ್ಲೆಯನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿತ್ತು. ತದನಂತರ ಹಲವಾರು ಜೆಡಿಎಸ್ ಕಾರ್ಯಕರ್ತರು ನಿಖಿಲ್ ಕುಮಾರಸ್ವಾಮಿ ಅವರ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಈ ವಿರೋಧ ಮತ್ತೊಂದು ಹಂತಕ್ಕೆ ಬಂದು ತಲುಪಿದೆ, ಒಂದು ವೇಳೆ ನಿಖಿಲ್ ಕುಮಾರಸ್ವಾಮಿ ಅವರು ಹಿಂದೆ ಸರಿಯದೆ ಇದ್ದಲ್ಲಿ ಖಂಡಿತವಾಗಲೂ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವು ಸೋಲನ್ನು ಕಾಣುತ್ತದೆ ಎಂಬ ಮಾತು ಕೇಳಿಬರುತ್ತಿದೆ.

ಹಲವಾರು ಕಾಂಗ್ರೆಸ್ ಮುಖಂಡರಿಗೆ ಸಹ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವುದು ಇಷ್ಟವಿಲ್ಲ,ಇಷ್ಟು ಸಾಲದು ಎಂಬಂತೆ ಇದಕ್ಕೆ ಸಚಿವರಾದ ಎಂಬಿ ಪಾಟೀಲ್ ಹಾಗೂ ಕಾಂಗ್ರೆಸ್ನ ಶಾಸಕ ಸುಧಾಕರ್ ಅವರು ಈಗಾಗಲೇ ಸ್ಪರ್ಧೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಹ ನಿಖಿಲ್ ಕುಮಾರಸ್ವಾಮಿ ರವರ ಅವರ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದ್ದರು. ಇನ್ನು ಈ ವಿರೋಧ ಮುಂದಿನ ಹಂತಕ್ಕೆ ತಲುಪಿದ್ದು ಹಿರಿಯ ಕಾಂಗ್ರೆಸ್ ಮುಖಂಡರಾಗಿರುವ ರವೀಂದ್ರ ರವರು ಇಂದು ನಿಖಿಲ್ ಕುಮಾರಸ್ವಾಮಿ ರವರ ಸ್ಪರ್ಧೆಯನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಕೇವಲ ಮುಖ್ಯಮಂತ್ರಿ ಅವರ ಪುತ್ರ ಎಂಬ ಕಾರಣಕ್ಕಾಗಿ ಅಭ್ಯರ್ಥಿ ಮಾಡುವುದು ಸರಿಯಲ್ಲ ಇದು ಜಿಲ್ಲೆಯ ಅಸ್ತಿತ್ವದ ಹಾಗೂ ಸ್ವಾಭಿಮಾನದ ಪ್ರಶ್ನೆ ಜೆಡಿಎಸ್ ಅಭ್ಯರ್ಥಿಯನ್ನು ಬದಲಿಸದೆ ಇದ್ದರೆ ತಾವು ಜನಜಾಗೃತಿ ಆರಂಭಿಸುವುದಾಗಿ ಕುಮಾರಸ್ವಾಮಿ ರವರಿಗೆ ಎಚ್ಚರಿಕೆ ನೀಡಿದ್ದಾರೆ. ಈ ಎಲ್ಲ ನಾಯಕರ ಬೆಂಬಲವಿಲ್ಲದೆ ನಿಖಿಲ್ ಕುಮಾರಸ್ವಾಮಿ ಮಂಡ್ಯದಲ್ಲಿ ಜಯಿಸುವುದು ಅಸಾಧ್ಯವಾದ ಮಾತು ಎಂಬುದು ರಾಜಕೀಯ ಪಂಡಿತರ ವಾದ.