ಸುಮಲತಾ ಗೆ ಬಿಗ್ ಶಾಕ್ ನೀಡಿದ ಬಿಜೆಪಿ, ಮಾಡಿದ್ದೇನು ಗೊತ್ತಾ?

ಸುಮಲತಾ ಗೆ ಬಿಗ್ ಶಾಕ್ ನೀಡಿದ ಬಿಜೆಪಿ, ಮಾಡಿದ್ದೇನು ಗೊತ್ತಾ?

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗುವ ಎಲ್ಲಾ ಸಾಧ್ಯತೆಗಳು ಕಾಣಸಿಗುತ್ತಿದ್ದವು ಇದಕ್ಕೆ ಕಾರಣವೆಂದರೆ ಸುಮಲತಾ ರವರ ಸ್ಪರ್ಧೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿಯನ್ನು ಮಾಡಿಕೊಂಡು ಚುನಾವಣಾ ಅಖಾಡಕ್ಕೆ ಇಳಿಯುತ್ತಿರುವ ಕಾರಣ ಮೈತ್ರಿ ಧರ್ಮದಂತೆ ಕಾಂಗ್ರೆಸ್ ಪಕ್ಷವು ಜೆಡಿಎಸ್ ಪಕ್ಷಕ್ಕೆ ಮಂಡ್ಯ ಜಿಲ್ಲೆಯನ್ನು ಬಿಟ್ಟುಕೊಡಲು ಸಿದ್ಧವಾಗಿತ್ತು ಆದರೆ ಇದು ಸುಮಲತಾ ಅವರ ಕೆಂಗಣ್ಣಿಗೆ ಗುರಿಯಾಗಿತ್ತು..

ಈಗಾಗಲೇ ಭಾರೀ ಜನ ಬೆಂಬಲ ವನ್ನು ಹೊಂದಿರುವ ಸುಮಲತಾ ರವರು ಯಾವುದೇ ಕಾರಣಕ್ಕೂ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಈಗಾಗಲೇ ಹಲವಾರು ಬಾರಿ ಖಚಿತಪಡಿಸಿದ್ದಾರೆ. ಇನ್ನು ಎರಡು ದಿನಗಳ ಹಿಂದಷ್ಟೇ ಮತಬೇಟೆ ಆರಂಭಿಸಿರುವ ಸುಮಲತಾ ರವರು ಮುಂದಿನ ಲೋಕಸಭಾ ಚುನಾವಣೆಯ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಈಗಾಗಲೇ ಬಿಜೆಪಿ ಪಕ್ಷವು ಹಲವಾರು ಬಾರಿ ಸುಮಲತಾ ರವರಿಗೆ ಟಿಕೆಟ್ ನೀಡುವುದಾಗಿ ಬಹಿರಂಗವಾಗಿ ಘೋಷಿಸಿತ್ತು. ಇಷ್ಟೇ ಅಲ್ಲದೆ ಸುಮಲತಾ ರವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ ಬೆಂಬಲ ನೀಡುವ ಸಾಧ್ಯತೆಗಳು ಹೆಚ್ಚಾಗಿದ್ದವು.

ಆದರೆ ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಕಡೆ ಒಲವು ತೋರಿದ ಸುಮಲತಾ ರವರು ಕಾಯುತ್ತಾ ಕಾಯುತ್ತಾ ಈಗ ಕಾಲ ಮುಗಿದು ಹೋದ ಮೇಲೆ ಎಚ್ಚೆತ್ತುಕೊಳ್ಳುವಂತಹ ಪರಿಸ್ಥಿತಿ ಎದುರಾಗಿದೆ. ಕಾಂಗ್ರೆಸ್ ಪಕ್ಷವು ಯಾವುದೇ ಕಾರಣಕ್ಕೂ ಟಿಕೆಟ್ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು ಸಹ ಸುಮಲತಾ ರವರು ಇನ್ನೆರಡು ದಿನ ಕಾಯುತ್ತೇನೆ, ಇನ್ನೆರಡು ದಿನ ಕಾಯುತ್ತೀನಿ, ಕೊನೆವರೆಗೂ ಕಾಯುತ್ತೇನೆ ಎಂಬ ಹೇಳಿಕೆಗಳ ಮೂಲಕ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಹೋರಾಡಿದರು. ಆದರೆ ಕಾಂಗ್ರೆಸ್ ಪಕ್ಷವು ಯಾವುದೇ ಕಾರಣಕ್ಕೂ ಟಿಕೆಟ್ ನೀಡುವುದಿಲ್ಲ ಎಂದು ಈಗಾಗಲೇ ಘೋಷಿಸಿದೆ.

ಇತ್ತ ಬಿಜೆಪಿ ನಾಯಕರು ಸಹ ಕಳೆದ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷವು ಗಣನೀಯ ಮತ ಗಳಿಸಿದ ಕಾರಣದಿಂದಾಗಿ ಗೆಲ್ಲುವ ಆಸೆಯನ್ನು ಮನದಲ್ಲಿಟ್ಟುಕೊಂಡು ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ನೀಡುವುದಾಗಿ ಹೇಳಿದ್ದರು, ಆದರೆ ಆಗ ಸುಮಲತಾ ಅಂಬರೀಶ್ ರವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ ಇದೀಗ ಅದಕ್ಕೆ ತಕ್ಕ ಬೆಲೆ ತೆರುವಂತಾಗಿದೆ, ಮಂಡ್ಯ ಜಿಲ್ಲೆಯಿಂದ ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಈ ಮೂಲಕ ಕಳೆದ ಬಾರಿಯ ಉಪ ಚುನಾವಣೆಯಲ್ಲಿ ಪಡೆದ ಮತಗಳನ್ನು ಪಡೆದರು ಸಾಕು ನಿಖಿಲ್ ಕುಮಾರಸ್ವಾಮಿ ಹಾಗೂ ಸುಮಲತಾ ಅಂಬರೀಶ್ ರವರ ನಡುವಿನ ಕಾದಾಟದಿಂದ ಬಿಜೆಪಿ ಪಕ್ಷಕ್ಕೆ ಗೆಲುವು ಸಾಧ್ಯವಾಗಬಹುದು ಎಂದು ರಾಜಕೀಯ ಪಂಡಿತರು ಅಭಿಪ್ರಾಯ ಪಟ್ಟಿದ್ದಾರೆ. ಇದೆ ಕಾರಣಕ್ಕಾಗಿ ಬಿಜೆಪಿ ಪಕ್ಷ ಇದೀಗ ಅಭ್ಯರ್ಥಿಯನ್ನೇ ಕಣಕ್ಕಿಳಿಸುವುದು ಖಚಿತವಾಗಿದೆ.