ದೋಸ್ತಿಯಲ್ಲಿ ಭುಗಿಲೆದ್ದ ಭಿನ್ನಮತ, ಸಿಡಿದೆದ್ದ ಸಿದ್ದ- ಮೆತ್ತಗಾಗುವವರೇ ಜೆ ಡಿ ಎಸ್

  • 827
    Shares

ನರೇಂದ್ರ ಮೋದಿಯವರ ಅಲೆಯನ್ನು ತಡೆಯಲು ಕಾಂಗ್ರೆಸ್ ಪಕ್ಷವು ಈಗಾಗಲೇ ಹಲವಾರು ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಜೊತೆ ಮೈತ್ರಿಯನ್ನು ರಚಿಸಿಕೊಂಡು ಚುನಾವಣಾ ಕಣಕ್ಕೆ ಇಳಿಯಲು ಸಿದ್ಧವಾಗಿದೆ. ಪ್ರತಿಯೊಂದು ರಾಜ್ಯದಂತೆ ಕರ್ನಾಟಕದಲ್ಲೂ ಸಹ ಜೆಡಿಎಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಕೆಲವು ಮೂಲಗಳ ಪ್ರಕಾರ ಅಂದಾಜು 8 ಸೀಟುಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಲು ಕಾಂಗ್ರೆಸ್ ಪಕ್ಷವು ನಿರ್ಧರಿಸಿದೆ ಇದರಿಂದ ಕಾಂಗ್ರೆಸ್ ಗೆ ನಷ್ಟ ವಾಗುತ್ತದೆ ಎಂಬುದು ತಿಳಿದಿದ್ದರೂ ಸಹ ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವ ಮೈತ್ರಿ ಗೆ ನಿರ್ಧರಿಸಿದೆ.

ಆದರೆ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಬಹುದೊಡ್ಡ ಕಾದಾಟ ನಡೆಯುತ್ತಿದೆ ಎಂಬುದು ಹೊರಬಿದ್ದಿದೆ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಹಲವಾರು ನಾಯಕರು ಪ್ರತಿಯೊಂದು ಕ್ಷೇತ್ರಗಳನ್ನು ತಮ್ಮ ತಮ್ಮ ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿರುವ ಕಾರಣ ಯಾವ ಕ್ಷೇತ್ರಗಳನ್ನು ಸಹ ಸುಲಭವಾಗಿ ಬಿಟ್ಟು ಕೊಡಲು ಎರಡು ಪಕ್ಷಗಳು ಸಿದ್ಧವಿಲ್ಲ. ಟಿಕೆಟ್ ಗಾಗಿ ಈ ರೀತಿ ಕಾದಾಡುತ್ತಿರುವ ಎರಡು ಪಕ್ಷಗಳನ್ನು ನೋಡಿದ ಜನ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟೀಕೆ ಮಾಡುತ್ತಿದ್ದಾರೆ. ಸಂಪೂರ್ಣ ವಿವರಗಳಿಗಾಗಿ ಕೆಳಗಡೆ ಓದಿ.

ಕಾಂಗ್ರೆಸ್ ಪಕ್ಷವು ಯಾವುದೇ ಕಾರಣಕ್ಕೂ ತನ್ನ ಸಂಸದರು ಇರುವ ಕ್ಷೇತ್ರಗಳನ್ನು ಬಿಟ್ಟುಕೊಡಲು ತಯಾರಿಲ್ಲ ಆದರೆ ಜೆಡಿಎಸ್ ಪಕ್ಷವು ತುಮಕೂರು ಚಿಕ್ಕಬಳ್ಳಾಪುರ ಸೇರಿದಂತೆ ಕಾಂಗ್ರೆಸ್ ಸಂಸದರಿರುವ ಹಲವಾರು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದೆ ಆದರೆ ಕಾಂಗ್ರೆಸ್ ಪಕ್ಷವು ಇದಕ್ಕೆ ಒಪ್ಪುತ್ತಿಲ್ಲ ಬದಲಾಗಿ ತುಮಕೂರು ಕ್ಷೇತ್ರವನ್ನು ಜೆಡಿಎಸ್ ಪಕ್ಷ ಕೇಳಿದರೆ ಕಾಂಗ್ರೆಸ್ ಪಕ್ಷವು ಮಂಡ್ಯ ಜಿಲ್ಲೆಯನ್ನು ಕೇಳುವ ತವಕದಲ್ಲಿದೆ. ಆದರೆ ಮಗನ ರಾಜಕೀಯ ಭವಿಷ್ಯವನ್ನು ತಲೆಯಲ್ಲಿ ಇಟ್ಟುಕೊಂಡಿರುವ ಕುಮಾರಸ್ವಾಮಿ ರವರು ಮಂಡ್ಯ ಜಿಲ್ಲೆಯನ್ನು ಬಿಟ್ಟುಕೊಡಲು ಸಿದ್ಧವಿಲ್ಲ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಈಗಾಗಲೇ ಹಲವಾರು ಕಾಂಗ್ರೆಸ್ ನಾಯಕರು ಕುಮಾರಸ್ವಾಮಿ ರವರ ವಿರುದ್ಧ ತಿರುಗಿಬಿದ್ದಿದ್ದಾರೆ ಇಂತಹ ಸಮಯದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಲ್ಲಿ ಮತ್ತಷ್ಟು ಭಿನ್ನಮತಗಳು ಭುಗಿಲೇಳಲು ಇವೆ ಮತ್ತೊಂದು ಕಡೆ ಮೈಸೂರು ಹಾಗೂ ಕೊಡಗು ಕ್ಷೇತ್ರವನ್ನು ಜೆಡಿಎಸ್ ಪಕ್ಷ ಬೇಕು ಎಂದು ಪಟ್ಟು ಹಿಡಿದು ಕುಳಿತಿದೆ ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನು ಕಂಡಿರುವ ಸಿದ್ದರಾಮಯ್ಯರವರು ಈ ಬಾರಿ ತಮ್ಮ ಆಪ್ತ ವಿಜಯ್ ಶಂಕರ್ ರವರಿಗೆ ಟಿಕೆಟ್ ನೀಡಿ ಗೆಲ್ಲಿಸುತ್ತೇನೆ ಎಂದು ಪಟ್ಟು ಹಿಡಿದು ಕೂತಿದ್ದಾರೆ, ಈ ಎಲ್ಲಾ ಕಾರಣಗಳಿಂದ ಸೀಟು ಹಂಚಿಕೆಯ ಬಗ್ಗೆ ಹಲವಾರು ಸಭೆಗಳು ನಡೆದರೂ ಸಹ ಅಂತಿಮ ತೀರ್ಮಾನ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ, ಟಿಕೆಟ್ ಗಾಗಿ ಹೀಗೆ ಕಿತ್ತಾಡುವ ನಾಯಕರನ್ನು ನೋಡಿದರೆ ಜನರು ಅಭಿವೃದ್ಧಿಯನ್ನು ಹೇಗೆ ನಿರೀಕ್ಷಿಸಲು ಸಾಧ್ಯವಾಗುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟೀಕೆ ವ್ಯಕ್ತವಾಗಿದೆ.

Facebook Comments

Post Author: RAVI