ಸಂಚಲನ- ಪ್ರೀತಂ ಗೌಡ ನೀಡಿದ ಗುದ್ದಿಗೆ ತತ್ತರಿಸಿದ ಜೆಡಿಎಸ್, ಮತ್ತಷ್ಟು ಕೇಸರಿಮಯ ವಾದ ಹಾಸನ

ಸಂಚಲನ- ಪ್ರೀತಂ ಗೌಡ ನೀಡಿದ ಗುದ್ದಿಗೆ ತತ್ತರಿಸಿದ ಜೆಡಿಎಸ್, ಮತ್ತಷ್ಟು ಕೇಸರಿಮಯ ವಾದ ಹಾಸನ

ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕೆಲವೇ ಕೆಲವು ದಿನಗಳ ಹಿಂದಷ್ಟೇ ಪ್ರೀತಮ್ ಗೌಡ ರವರು ಮಾತನಾಡಿದ ಆಡಿಯೋ ವೈರಲ್ ಆಗಿತ್ತು. ಎ ಮಂಜುರವರ ಪರವಾಗಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡ ರನ್ನು ಉದ್ದೇಶಿಸಿ ಮಾತನಾಡಿದ ಹಾಸನದ ಬಿಜೆಪಿ ಶಾಸಕರಾಗಿರುವ ಪ್ರೀತಮ್ ಗೌಡ ರವರು ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸುವಂತೆ ಕರೆ ನೀಡಿದ್ದರು. ಕೇವಲ ಎರಡು ದಿನಗಳ ಹಿಂದಷ್ಟೇ ಈ ಹೇಳಿಕೆ ಹಾಸನದ ರಾಜಕಾರಣದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿದೆ. ಇದರಿಂದ ಜೆಡಿಎಸ್ ಪಕ್ಷದ ಕಣ್ಣು ಕೆಂಪಗಾಗಿದ್ದವು, ಇದೀಗ ಚುನಾವಣೆ ಹೊಸ್ತಿಲಲ್ಲಿ ದೊಡ್ಡ ಶಾಕ್ ಎದುರಾಗಿದೆ.

ಹೌದು ಪ್ರೀತಂ ಗೌಡ ರವರು ಹೇಳಿಕೆ ನೀಡಿದ ಕೇವಲ ಎರಡು ದಿನಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮತ್ತಷ್ಟು ಕಗ್ಗಂಟಾಗಿದೆ, ಬುಧವಾರ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಯಡಿಯೂರಪ್ಪನವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯಿತಿ ಸದಸ್ಯರು ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಹಾಗೂ ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎನಿಸಿಕೊಂಡಿದ್ದ ಕಡೂರು ಕ್ಷೇತ್ರದ ಮುಖಂಡರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಜೆಡಿಎಸ್ ಪಕ್ಷಕ್ಕೆ ದೊಡ್ಡ ಶಾಕ್ ನೀಡಿದ್ದಾರೆ.

ಜಿಲ್ಲಾ ಪಂಚಾಯಿತಿ ನ ಸದಸ್ಯರಾಗಿರುವ ಮಹೇಶ್ ಒಡೆಯರ್ ಹಾಗೂ ಅವರ ಸಂಪೂರ್ಣ ಬೆಂಬಲಿಗರು ಸೇರಿದಂತೆ ಇನ್ನೂ ಹತ್ತು ಹಲವಾರು ಮುಖಂಡರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಯಾಗಿರುವ ಎ ಮಂಜು ರವರಿಗೆ ಬೆಂಬಲ ನೀಡಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸುವುದು ಹಾಗೂ ನರೇಂದ್ರ ಮೋದಿಯವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡುವುದು ನಮ್ಮ ಗುರಿ ಎಂದು ಬಂಡಾಯ ನಾಯಕರು ಹೇಳಿಕೆ ನೀಡಿದ್ದಾರೆ.

ಈ ಮೂಲಕ ಜೆಡಿಎಸ್ ಪಕ್ಷದ ಭದ್ರಕೋಟೆ ಎನಿಸಿಕೊಂಡಿದ್ದ ಹಾಸನ ಜಿಲ್ಲೆಯಿಂದ ಗೆದ್ದು ಬಂದಿದ್ದ ಪ್ರೀತಮ್ ಗೌಡ ರವರು ಇದೀಗ ಇಡೀ ಹಾಸನ ಜಿಲ್ಲೆಯನ್ನು ಕೇಸರಿಮಯ ಮಾಡುವತ್ತ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಇನ್ನೂ ಪ್ರೀತಂ ಗೌಡ ರವರ ವರ್ಚಸ್ಸು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಒಂದು ವೇಳೆ ಇದೇ ಮುಂದುವರೆದಲ್ಲಿ ಹಾಸನ ಲೋಕಸಭಾ ಕ್ಷೇತ್ರ ಬಿಜೆಪಿ ಪಕ್ಷದ ಭದ್ರಕೋಟೆ ಎನಿಸಿಕೊಂಡರು ಯಾವುದೇ ಅನುಮಾನವಿಲ್ಲ. ಯಾಕೆಂದರೆ ಪ್ರೀತಮ್ ಗೌಡ ರವರ ನೇತೃತ್ವದಲ್ಲಿ ಹಾಸನ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ನೆಲೆಯೂರಲು ಸಾಧ್ಯವಾಗುತ್ತಿದೆ.