ಮಹಾ ಸಮೀಕ್ಷೆ ಕಂಡು ಬೆಚ್ಚಿಬಿದ್ದ ನಾಯ್ಡು- ನಾಳೆ ಮಾಡುವ ಹೈಡ್ರಾಮ ಯಾವುದು ಗೊತ್ತಾ??

ಮಹಾ ಸಮೀಕ್ಷೆ ಕಂಡು ಬೆಚ್ಚಿಬಿದ್ದ ನಾಯ್ಡು- ನಾಳೆ ಮಾಡುವ ಹೈಡ್ರಾಮ ಯಾವುದು ಗೊತ್ತಾ??

ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಈಗಾಗಲೇ ಹತ್ತು ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿದ್ದು ಸರಿಸುಮಾರು ಕೇವಲ ಒಂದು ಸಮೀಕ್ಷೆಯನ್ನು ಹೊರತುಪಡಿಸಿ ಉಳಿದ ಎಲ್ಲಾ ಸಮೀಕ್ಷೆಗಳಲ್ಲಿ ಬಿಜೆಪಿ ಪಕ್ಷವು ಅಧಿಕಾರದ ಗದ್ದುಗೆ ಏರುವುದು ಖಚಿತವಾಗಿದೆ. ಇದರಿಂದ ವಿರೋಧ ಪಕ್ಷಗಳಲ್ಲಿ ಆತಂಕ ಹೆಚ್ಚಾಗಿರುವುದು ಸುಳ್ಳಲ್ಲ. ಆದರೆ ಇಷ್ಟು ದಿವಸ ಫಲಿತಾಂಶ ಬಂದ ನಂತರ ಮತ ಯಂತ್ರಗಳನ್ನು ದೂಷಿಸುತ್ತಿದ್ದ ವಿರೋಧ ಪಕ್ಷದ ನಾಯಕರು ಇದೀಗ ಫಲಿತಾಂಶಕ್ಕೂ ಮುನ್ನವೇ ಬಹಳ ತಲೆಕೆಡಿಸಿಕೊಂಡಂತೆ ಕಾಣುತ್ತಿದೆ. ಇದರಲ್ಲಿ ಪ್ರಮುಖವಾಗಿ ಪ್ರಧಾನಿಯಾಗುವ ಕನಸು ಕಂಡು ಚುನಾವಣೆ ನಂತರ ಇರುವ ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಳ್ಳುವತ್ತ ಸಾಗಿರುವ ಚಂದ್ರಬಾಬು ನಾಯ್ಡು ಅವರು ಹೊರತಲ್ಲ.

ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು ಆಂಧ್ರಪ್ರದೇಶದಲ್ಲಿ ಅಧಿಕಾರವನ್ನು ಕಳೆದುಕೊಳ್ಳುವ ಭೀತಿಯನ್ನು ಎದುರಿಸುತ್ತಿರುವ ಚಂದ್ರಬಾಬು ನಾಯ್ಡು ಅವರು ಮತ್ತಷ್ಟು ರಾಜಕೀಯದಲ್ಲಿ ಸಕ್ರಿಯ ಗೊಂಡಿದ್ದು ನಾಳೆ ಚುನಾವಣಾ ಆಯೋಗದ ಮುಂದೆ ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗಕ್ಕೂ ಹಾಗೂ ಚುನಾವಣೋತ್ತರ ಸಮೀಕ್ಷೆ ಗಳಿಗೂ ಯಾವುದೇ ಸಂಬಂಧವಿಲ್ಲವಾದರೂ ಚುನಾವಣಾ ಆಯೋಗ ಬಿಜೆಪಿ ಪಕ್ಷದ ಕಡೆಯಿದೆ ಹಾಗೂ ಚುನಾವಣೋತ್ತರ ಸಮೀಕ್ಷೆ ಗಳಲ್ಲಿ ನರೇಂದ್ರ ಮೋದಿರವರು ಜನರ ದಾರಿ ತಪ್ಪಿಸಲು ಪ್ರಯತ್ನ ಪಡುತ್ತಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗದ ಮುಂದೆ ಧರಣಿ ಮಾಡಲು ನಿರ್ಧರಿಸಿದ್ದಾರೆ. ಕೆಲವು ಮೂಲಗಳ ಪ್ರಕಾರ ಕೆಲವು ಪ್ರಾದೇಶಿಕ ಪಕ್ಷಗಳ ನಾಯಕರು ಸಹ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಫಲಿತಾಂಶಕ್ಕೆ ಮುನ್ನವೇ ಸೋಲನ್ನು ಒಪ್ಪಿಕೊಂಡಂತೆ ಚಂದ್ರಬಾಬು ನಾಯ್ಡು ರವರು ಚುನಾವಣಾ ಆಯೋಗದ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿದ್ದಾರೆ.