ವಿರೋಧ ಪಕ್ಷದ ಮುಂದೆ ಮಂಡಿಯೂರಿದ ರಾಜ್ಯ ಸರ್ಕಾರ: ಬಿಜೆಪಿ ಪಕ್ಷಕ್ಕೆ ಮತ್ತೊಂದು ಗೆಲುವು.

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತಲ್ಲಣವನ್ನು ಸೃಷ್ಟಿಸಿದ ಸುದ್ದಿಗೆ ಇದೀಗ ಬ್ರೇಕ್ ಬಿದ್ದಿದೆ. ಇತ್ತ ಮೈತ್ರಿ ಸರ್ಕಾರ ತನ್ನ ಸರ್ಕಾರವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿರುವಾಗ ದೋಸ್ತಿ ಗಳಿಗೆ ಹೊಸ ತಲೆನೋವಾಗಿದ್ದು, ಮೊದಲೇ ಮಾಡಿಕೊಳ್ಳಲಾಗಿದೆ ಎಂದಿದ್ದ ಜಿಂದಾಲ್ ಕಂಪನಿಗೆ ಭೂಮಿ ನೀಡುವ ಒಪ್ಪಂದ. ಈ ಒಪ್ಪಂದವು ಕಳೆದ ಕೆಲವು ದಿನಗಳಿಂದ ಇಡೀ ದೇಶದೆಲ್ಲೆಡೆ ಸದ್ದು ಮಾಡುತ್ತಿತ್ತು, ಇತ್ತ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ಜಿಂದಾಲ್ ಕಂಪನಿ ಭೂಮಿ ನೀಡಲು ಒಪ್ಪಿಗೆ ನೀಡಿ ಸಂಪುಟ ಸಭೆಯ ಅಧಿಕೃತ ಘೋಷಣೆಯೊಂದೆ ಬಾಕಿ ಉಳಿದಿತ್ತು. ಸಚಿವರಾಗಿರುವ ಕೆಜೆ ಜಾರ್ಜ್ ಅವರು ರಾಜ್ಯ ಸರ್ಕಾರದ ಮೇಲೆ ಒತ್ತಡ ಏರಿ ಭೂಮಿ ಜಿಂದಾಲ್ ಕಂಪನಿಗೆ ಮಾರಿಯೇ ತೀರುತ್ತೇನೆ ಎಂದು ಪಟ್ಟು ಹಿಡಿದಿದ್ದರು.

ಆದರೆ ಈ ನಿರ್ಣಯಕ್ಕೆ ಬಿಜೆಪಿ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಕೆಲವು ಹಿರಿಯ ನಾಯಕರು ಒಪ್ಪಿಗೆ ನೀಡಿರಲಿಲ್ಲ. ನೂರಕ್ಕೂ ಹೆಚ್ಚು ಸ್ಥಾನಗಳನ್ನು ಸ್ವತಂತ್ರವಾಗಿ ಗಳಿಸಿ ವಿರೋಧ ಪಕ್ಷ ಸ್ಥಾನದಲ್ಲಿ ಕುಳಿತಿರುವ ಬಿಜೆಪಿ ಪಕ್ಷವು ಯಾವುದೇ ಕಾರಣಕ್ಕೂ ಜಿಂದಾಲ್ ಕಂಪನಿಗೆ ಭೂಮಿ ನೀಡಬಾರದು ಎಂದು ಪಟ್ಟು ಹಿಡಿದು ಕುಳಿತಿತ್ತು. ಕುಮಾರಸ್ವಾಮಿ ರವರ ಮೇಲೆ ಕಿಕ್ಬ್ಯಾಕ್ ಆರೋಪ ಸಹ ಕೇಳಿ ಬಂದಿತ್ತು, ಇಷ್ಟು ಸಾಲದು ಎಂಬಂತೆ ಒಂದು ವೇಳೆ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಜಿಂದಾಲ್ ಕಂಪನಿಗೆ ಭೂಮಿ ನೀಡಲು ಮುಂದಾದರೆ ಇಡೀ ರಾಜ್ಯದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ನೀಡಿದ್ದರು. ಆದರೆ ಇದೀಗ ರಾಜ್ಯ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ, ಇನ್ನು ಕೆಲವೇ ಕೆಲವು ದಿನಗಳಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ಒಟ್ಟಿನಲ್ಲಿ ಭಾರೀ ವಿವಾದವನ್ನು ಸೃಷ್ಟಿಸಿದ್ದ ಜಿಂದಾಲ್ ಕಂಪನಿಯ ಭೂ ವಿವಾದ ಕೊನೆಗೂ ಅಂತ್ಯಗೊಂಡಿದೆ.