ನೀವು ಭಾರತೀಯ ವಾಯುಪಡೆ ಸೇರಬೇಕಾ?? ಪಿಯುಸಿ ಪಾಸಾದವರಿಗೆ ಇಲ್ಲಿದೆ ಸುವರ್ಣಾವಕಾಶ

ನೀವು ಭಾರತೀಯ ವಾಯುಪಡೆ ಸೇರಬೇಕಾ?? ಪಿಯುಸಿ ಪಾಸಾದವರಿಗೆ ಇಲ್ಲಿದೆ ಸುವರ್ಣಾವಕಾಶ

ನರೇಂದ್ರ ಮೋದಿ ಅವರು ಮತ್ತೊಮ್ಮೆ ಅಧಿಕಾರಕ್ಕೆ ಏರಿದ ಬಳಿಕ ಎಲ್ಲರ ಲೆಕ್ಕಾಚಾರದಂತೆ ಭಾರತೀಯ ಸೇನೆಯಲ್ಲಿರುವ ಉದ್ಯೋಗಗಳನ್ನು ಭರ್ತಿ ಮಾಡಲು ಮುಂದಾಗಿದ್ದಾರೆ. ಮೊದಲಿಗೆ ಭಾರತೀಯ ವಾಯುಸೇನೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಲು ನಿರ್ಧಾರ ಮಾಡಲಾಗಿದ್ದು, ಪಿಯುಸಿಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ನೇಮಕಾತಿಗಳಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಯ ವಿದ್ಯಾರ್ಹತೆಯ ಮೂಲದ ನಾಲ್ಕು ಪ್ರತಿಗಳು, 30 ಭಾವಚಿತ್ರಗಳು ಮತ್ತು ವಿಳಾಸದ ಪುರಾವೆಗಾಗಿ ಆಧಾರ್ ಕಾರ್ಡ್ ಅಥವಾ ಇನ್ನಿತರ ಯಾವುದೇ ದಾಖಲೆಗಳೊಂದಿಗೆ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶ ಸೇವೆ ಮಾಡುವ ಭಾಗ್ಯ ಪಡೆಯಲಿದ್ದು ಕನಿಷ್ಠ 30 ಸಾವಿರ ರೂ ವೇತನ ಹಾಗೂ ಭತ್ಯೆ ಪಡೆಯಲಿದ್ದಾರೆ. ಕರ್ನಾಟಕ ರಾಜ್ಯವನ್ನು ಮೂರು ವಿಭಾಗಗಳನ್ನಾಗಿ ವಿಭಜನೆ ಮಾಡಿರುವ ಭಾರತೀಯ ವಾಯುಪಡೆಯು ಮೂರು ಹಂತಗಳಲ್ಲಿ ನೇಮಕಾತಿ ಮಾಡಲು ನಿರ್ಧಾರ ಮಾಡಿದೆ.

ಸಂಪೂರ್ಣ ಮಾಹಿತಿ ಈ ಕೆಳಗಿನಂತಿದ್ದು, ದಯವಿಟ್ಟು ಈ ಉಪಯುಕ್ತ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡುವ ಮೂಲಕ ತಲುಪಿಸಿ.ಈ ನೇಮಕಾತಿ ರ್ಯಾಲಿ ಯು ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿದ್ದು , ಮೊದಲ ಹಂತದಲ್ಲಿ ಜುಲೈ 17, 18 ರಂದು ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ರಾಯಚೂರು, ಯಾದಗಿರಿ, ಕಲಬುರ್ಗಿ, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅಭ್ಯರ್ಥಿಗಳು , ಎರಡನೇ ಹಂತದಲ್ಲಿ ಜುಲೈ 22 ಮತ್ತು 23 ರಂದು ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಮಡಿಕೇರಿ, ದಕ್ಷಿಣಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಗದಗ, ಕೊಪ್ಪಳ, ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಉಡುಪಿ ಜಿಲ್ಲೆಗಳ ಅಭ್ಯರ್ಥಿಗಳು ದೇಹದಾರ್ಢ್ಯ ಮತ್ತು ಲಿಖಿತ ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ. ಕೊನೆಯ ಹಂತದಲ್ಲಿ ಜುಲೈ 19 ಮತ್ತು 20 ರಂದು ರಾಜ್ಯದ ಎಲ್ಲಾ ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.