ಚುನಾವಣಾ ಸಮಯದಲ್ಲಿ ಬಿಜೆಪಿಗೆ ಮಹಾರಾಷ್ಟ್ರದಲ್ಲಿ ಭರ್ಜರಿ ಗುಡ್ ನ್ಯೂಸ್

ಚುನಾವಣಾ ಸಮಯದಲ್ಲಿ ಬಿಜೆಪಿಗೆ ಮಹಾರಾಷ್ಟ್ರದಲ್ಲಿ ಭರ್ಜರಿ ಗುಡ್ ನ್ಯೂಸ್

ಬಿಜೆಪಿ ಪಕ್ಷದ ಭದ್ರಕೋಟೆ ಗಳಲ್ಲಿ ಪ್ರಮುಖವಾದ ರಾಜ್ಯಗಳಲ್ಲಿ ಮೊದಲನೇ ಸಾಲಿನಲ್ಲಿ ಕಂಡುಬರುವ ಮಹಾರಾಷ್ಟ್ರದಲ್ಲಿ ಬಿಜೆಪಿ ಪಕ್ಷಕ್ಕೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಈಗಾಗಲೇ ಬಹುತೇಕ ಮಹಾರಾಷ್ಟ್ರ ಕೇಸರಿಮಯವಾಗಿದೆ, ಶಿವಸೇನಾ ಪಕ್ಷದೊಂದಿಗೆ ಚುನಾವಣಾ ಪೂರ್ವ ಮೈತ್ರಿ ಖಚಿತವಾದ ಮೇಲೆ ಬಿಜೆಪಿ ಪಕ್ಷದ ಅಲೆಯನ್ನು ಯಾವ ವಿರೋಧ ಪಕ್ಷವು ಮಹಾರಾಷ್ಟ್ರದಲ್ಲಿ ತಡೆಯಲು ಸಾಧ್ಯವಾಗಿಲ್ಲ. ಅದರಲ್ಲಿಯೂ ದೇವೇಂದ್ರ ಫಡ್ನವಿಸ್ ರವರ ಕಾರ್ಯವೈಕರಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ರಾಜ್ಯವನ್ನು ಮಾದರಿ ರಾಜ್ಯ ಮಾಡುವತ್ತ ಮುನ್ನುಗ್ಗುತ್ತಿರುವ ದೇವೇಂದ್ರ ಫಡ್ನವಿಸ್ ರವರು ಇಂದಿಗೂ ಸಾಮಾನ್ಯರಂತೆ ಸಾಮಾನ್ಯ ಜೀವನ ನಡೆಸುತ್ತಾ ಹೆಸರು ಪಡೆದುಕೊಂಡಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದೆ.

ಈ ರೀತಿಯ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಇತ್ತೀಚೆಗೆ ವಿರೋಧ ಪಕ್ಷದ ನಾಯಕನೇ ತೊರೆದು ಬಿಜೆಪಿ ಪಕ್ಷಕ್ಕೆ ಸೇರಿಕೊಂಡು ಹತ್ತು-ಹಲವಾರು ಶಾಸಕರು ಹಾಗೂ ಕಾರ್ಯಕರ್ತರನ್ನು ಬಿಜೆಪಿ ಪಕ್ಷಕ್ಕೆ ತನ್ನ ಜೊತೆ ವಲಸೆ ಮಾಡಿಸಿದ್ದರು. ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಿಲಿಂದ್ ದಿಯೋರಾ ರವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಂಚೆ ಮೂಲಕ ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೆ ರಾಜೀನಾಮೆ ಸಲ್ಲಿಸಿದ ಬಳಿಕ ಮಾತನಾಡಿದ ಮಿಲಿಂದ್ ರವರು ಕಾಂಗ್ರೆಸ್ ಪಕ್ಷದ ಅಂದಿನ ಅಧ್ಯಕ್ಷ ರಾಹುಲ್ ಗಾಂಧಿ ರವರನ್ನು ಭೇಟಿ ಮಾಡಿ ತಾವು ಹುದ್ದೆ ತ್ಯಜಿಸುವ ನಿರ್ಧಾರಕ್ಕೆ ಬಂದಿದ್ದಾಗಿ ಹೇಳಿಕೊಂಡಿದ್ದಾರೆ. ಇನ್ನು ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಸಿ ವೇಣುಗೋಪಾಲ್ ರವರಿಗೆ ರಾಜಿನಾಮೆಯ ಬಗ್ಗೆ ಈಗಾಗಲೇ ತಿಳಿಸಿದ್ದೇನೆ ಎಂದು ಹೇಳಿ ನಿರ್ಗಮಿಸಿದ್ದಾರೆ. ಒಟ್ಟಿನಲ್ಲಿ ಇರುವ ಬೆರಳೆಣಿಕೆಯ ಸೀಟುಗಳನ್ನು ಉಳಿಸಿಕೊಳ್ಳುವ ಕನಸಿನಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ದಿನಕ್ಕೊಂದು ಹೊಡೆತಗಳು ಮಹಾರಾಷ್ಟ್ರದಲ್ಲಿ ಬೀಳುತ್ತಿದ್ದು ಮುಂದಿನ ಚುನಾವಣೆಯಲ್ಲಿ ಅಸ್ತಿತ್ವ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದೆ.