ದಕ್ಷಿಣ ಆಫ್ರಿಕಾದ ವಿರುದ್ಧ ಟಿ20 ಸರಣಿಗೆ ಭಾರತ ತಂಡ ಪ್ರಕಟ ! ಅಚ್ಚರಿಯಾಗಿ ಆಯ್ಕೆಯಾದ ಆಟಗಾರರು ಯಾರು ಗೊತ್ತಾ??

ಇದೀಗ ವೆಸ್ಟ್ ಇಂಡೀಸ್ ನೆಲದಲ್ಲಿ ತನ್ನ ಪಾರುಪತ್ಯ ಮೆರೆದಿರುವ ಭಾರತ ಕ್ರಿಕೆಟ್ ತಂಡವು ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ವಿಶ್ವದ ಬಲಾಢ್ಯ ತಂಡಗಳಲ್ಲಿ ಒಂದಾಗಿರುವ ಸೌತ್ ಆಫ್ರಿಕಾ ತಂಡವನ್ನು ಎದುರಿಸಲಿದೆ. ಈಗಾಗಲೇ ಐಪಿಎಲ್ ಮಾದರಿಯ ಕ್ರಿಕೆಟ್ ಗೆ ಚೆನ್ನಾಗಿ ಹೊಂದಿಕೊಂಡಿರುವ ಭಾರತ ತಂಡವು ಇದೇ ಹುಮ್ಮಸ್ಸಿನಲ್ಲಿ ಸೌತ್ ಆಫ್ರಿಕಾ ತಂಡವನ್ನು ಎದುರಿಸಿ ಗೆಲ್ಲುವ ವಿಶ್ವಾಸದೊಂದಿಗೆ ಕಣಕ್ಕೆ ಇಳಿಯಲು ಸಿದ್ದವಾಗಿದೆ. ಇದೀಗ ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ನಡೆಯುವ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಕೆಲವರು ಅಚ್ಚರಿಯ ರೀತಿಯಲ್ಲಿ ಆಯ್ಕೆಯಾಗಿದ್ದಾರೆ. ಧೋನಿ ರವರ ಮನವಿಯ ಮೇರೆಗೆ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

ಇನ್ನುಳಿದಂತೆ ಇದೀಗ ವೆಸ್ಟ್ ಇಂಡೀಸ್ ತಂಡಕ್ಕೆ ಮಾರಕವಾಗಿ ಕಾಡುತ್ತಿರುವ ಜಸ್ಮಿತ್ ಬುಮ್ರಾ ರವರನ್ನು ವಿಶ್ರಾಂತಿ ಪಡೆಯಲು ಸೂಚನೆ ನೀಡಲಾಗಿದ್ದು, ತಂಡ ಇಂತಿದೆ. ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆ.ಎಲ್. ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕ್ರುಣಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ರಾಹುಲ್ ಚಹರ್, ಖಲೀಲ್ ಅಹ್ಮದ್, ದೀಪಕ್ ಚಹರ್ ಮತ್ತು ನವದೀಪ್ ಸೈನಿ. ಇದೇ ತಿಂಗಳ ಅಂದರೆ ಸೆಪ್ಟೆಂಬರ್ 15 ರಿಂದ ಸೌತ್ ಆಫ್ರಿಕಾ ತಂಡದ ವಿರುದ್ದ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದ್ದು, ಮೊದಲನೇ ಪಂದ್ಯ ಸೆಪ್ಟೆಂಬರ್ 15ರಂದು ಧರ್ಮಶಾಲಾದಲ್ಲಿ ನಡೆಯಲ್ಲಿದ್ದು, ಸೆಪ್ಟೆಂಬರ್ 18 ಮತ್ತು 22ರಂದು ಉಳಿದ 2 ಪಂದ್ಯಗಳು ನಡೆಯಲಿವೆ.

Facebook Comments

Post Author: RAVI