ಹಿಟ್ ಮ್ಯಾನ್ ರೋಹಿತ್ ಹಿಂದಿಕ್ಕಿ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

ಯಾರು? ವಿರಾಟ್ ಕೊಹ್ಲಿನಾ? ಅವರು ಬಿಡಿ ಸ್ವಾಮಿ, ಈಗಾಗಲೇ ಹಲವಾರು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ. ಅವರ ದಾಖಲೆಗಳನ್ನು ಮುರಿಯಲು ಸಾಧ್ಯವೇ ಇಲ್ಲ ಎಂಬ ಮಾತುಗಳು ಸಾಮಾನ್ಯವಾಗಿ ಕೇಳಿಬರುತ್ತವೆ. ಅದೇ ರೀತಿ ಇದೀಗ ಮತ್ತೊಂದು ವಿಶ್ವ ದಾಖಲೆಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ. ಈ ಬಾರಿ ಅಗ್ರಸ್ಥಾನದಲ್ಲಿ ಮೆರೆಯುತ್ತಿದ್ದ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮ ರವರನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೆ ಏರುವ ಮೂಲಕ ಮತ್ತೊಮ್ಮೆ ತಾನು ಯಾವ ಕಾರಣಕ್ಕೆ ಬೆಸ್ಟ್ ಬ್ಯಾಟ್ಸಮನ್ ಎಂದು ನಿರೂಪಿಸಿದ್ದಾರೆ. ಅಷ್ಟಕ್ಕೂ ಅವರು ಮಾಡಿದ ದಾಖಲೆ ಏನು ಗೊತ್ತಾ?


ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ರವರು, ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡನೇ ಪಂದ್ಯದಲ್ಲಿ ಭರ್ಜರಿ ಅರ್ಧ ಶತಕದ ಮೂಲಕ ಮಿಂಚಿದರು. ಇದೇ ವೇಳೆಯಲ್ಲಿ ಟಿ-20 ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. ಉಪ ನಾಯಕ ರೋಹಿತ್ ಶರ್ಮ ಇಷ್ಟು ದಿವಸ ಟಿ-20 ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಖ್ಯಾತಿ ಪಡೆದುಕೊಂಡಿದ್ದರು. ಇನ್ನೂ ಮೂರನೇ ಸ್ಥಾನದಲ್ಲಿ ನ್ಯೂಜಿಲ್ಯಾಂಡ್ ತಂಡದ ಸ್ಪೋಟಕ ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್ ರವರು ಇದ್ದಾರೆ. ತದನಂತರದ ಸ್ಥಾನಗಳಲ್ಲಿ ಪಾಕಿಸ್ತಾನ ತಂಡದ ಆಟಗಾರ ಶೋಯೆಬ್ ಮಲ್ಲಿಕ್, ಹಾಗೂ ನ್ಯೂಜಿಲ್ಯಾಂಡ್ ತಂಡದ ಮತ್ತೊಬ್ಬ ಸ್ಪೋಟಕ ಆಟಗಾರ ಬ್ರೆಂಡನ್ ಮೆಕಲಮ್ ಸ್ಥಾನ ಪಡೆದುಕೊಂಡಿದ್ದಾರೆ.

Facebook Comments

Post Author: Ravi Yadav