ಸರ್ಕಾರ ರಚಿಸುತ್ತೇವೆ ಎಂದ ಶಿವಸೇನಾ ಪಕ್ಷಕ್ಕೆ ದೊಡ್ಡ ಶಾಕ್ ನೀಡಿದ ಮಲ್ಲಿಕಾರ್ಜುನ ಖರ್ಗೆ ! ಶಿವಸೇನಾ ಬದುಕು ಮತ್ತಷ್ಟು ಅತಂತ್ರ

ಸರ್ಕಾರ ರಚಿಸುತ್ತೇವೆ ಎಂದ ಶಿವಸೇನಾ ಪಕ್ಷಕ್ಕೆ ದೊಡ್ಡ ಶಾಕ್ ನೀಡಿದ ಮಲ್ಲಿಕಾರ್ಜುನ ಖರ್ಗೆ ! ಶಿವಸೇನಾ ಬದುಕು ಮತ್ತಷ್ಟು ಅತಂತ್ರ

ಶಿವಸೇನಾ ಪಕ್ಷವು ತಾನು ಎನ್ಡಿಎ ಮೈತ್ರಿಕೂಟ ಬಿಟ್ಟು ಹೊರ ಬಂದರೇ ತನ್ನ ಪಕ್ಷ ಅಸ್ತಿತ್ವ ಕಳೆದುಕೊಂಡರೂ ಆಶ್ಚರ್ಯ ಪಡಬೇಕಿಲ್ಲ ಎಂದು ತಿಳಿದಿದ್ದರೂ ಕೂಡ, ಮೈತ್ರಿ ಮಾಡಿಕೊಂಡು ಅಧಿಕಾರದ ಗದ್ದುಗೆ ಏರಿ ಐದು ವರ್ಷಗಳ ಉತ್ತಮ ಆಡಳಿತ ನೀಡಿದರೇ ಜನರು ಮೆಚ್ಚಿಕೊಳ್ಳಬಹುದು ಎಂದು ತನ್ನ ಮೂಲ ಸಿದ್ಧಾಂತಗಳನ್ನು ಪಕ್ಕಕ್ಕೆ ಇಟ್ಟು ಕಾಂಗ್ರೆಸ್ ಹಾಗೂ ಎನ್ಸಿಪಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ.

ಅದೇ ಕಾರಣಕ್ಕಾಗಿ ಈಗಾಗಲೇ ಕೆಲವು ಸಂಸದರು ಕೂಡ ರಾಜೀನಾಮೆ ನೀಡಿದ್ದಾರೆ ಹಾಗೂ ಅಧಿಕೃತವಾಗಿ ಎನ್ಡಿಎ ಮೈತ್ರಿಕೂಟದಿಂದ ಹೊರಬಂದಿದ್ದೇನೆ ಎಂದು ಶಿವಸೇನಾ ಪಕ್ಷ ಘೋಷಣೆ ಮಾಡಿದೆ. ಎನ್ಸಿಪಿ ಪಕ್ಷವು ಶಿವಸೇನಾ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆಗೆ ಸಹಕಾರ ನೀಡಬೇಕು ಎಂದರೇ ಕೇಂದ್ರ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆದು, ಎನ್ಡಿಎ ಮೈತ್ರಿಕೂಟದಿಂದ ಸಂಪೂರ್ಣವಾಗಿ ಹೊರ ಬರಬೇಕು ಎಂಬ ಷರತ್ತು ವಿಧಿಸಿತ್ತು. ಕಳೆದ ಸ್ಥಳೀಯ ಚುನಾವಣೆಯಲ್ಲಿ ಇದೇ ರೀತಿ ಬಿಜೆಪಿ ಪಕ್ಷದ ಸಕ್ಯ ತೊರೆದು ಚುನಾವಣೆಯಲ್ಲಿ ಸ್ಪರ್ಧೆ ಮಾಡಿದಾಗ, ಬೆರಳೆಣಿಕೆಯ ಕ್ಷೇತ್ರಗಳನ್ನು ಗೆದ್ದು ನೂರಾರು ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದ್ದ ಕಹಿ ಘಟನೆಯನ್ನು ಶಿವಸೇನಾ ಪಕ್ಷ ಮರೆತು ಇದೀಗ ಮತ್ತೊಮ್ಮೆ ಎನ್ಡಿಎ ಮೈತ್ರಿಕೂಟದಿಂದ ಹೊರಬಂದು ಸರ್ಕಾರ ರಚನೆಗೆ ರಾಜ್ಯಪಾಲರ ಬಳಿ ಅವಕಾಶ ನೀಡುವಂತೆ ಮನವಿ ಮಾಡಿದೆ.

ಕಾಂಗ್ರೆಸ್ ಪಕ್ಷ ಬಾಹ್ಯ ಬೆಂಬಲ ನೀಡುತ್ತದೆ ಎಂದು ಘೋಷಣೆ ಮಾಡಿದ ಬಳಿಕ, ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿತ್ತು. ಆದರೆ ಇದೀಗ ಮಹಾರಾಷ್ಟ್ರ ಅಖಾಡಕ್ಕೆ ಮಲ್ಲಿಕಾರ್ಜುನ ಖರ್ಗೆ ರವರು ಎಂಟ್ರಿಕೊಟ್ಟಿದ್ದು, ಶಿವಸೇನಾ ಪಕ್ಷದ ಸಿದ್ದಾಂತಗಳು ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ವಿರುದ್ಧವಿರುವ ಕಾರಣ ಮತ್ತೊಮ್ಮೆ ಸೋನಿಯಾ ಗಾಂಧಿ ರವರ ಜೊತೆ ನಾನು ಚರ್ಚೆ ಮಾಡಿ ಮಹಾರಾಷ್ಟ್ರ ರಾಜ್ಯದಲ್ಲಿ ಬೆಂಬಲ ಬಾಹ್ಯ ಬೆಂಬಲ ನೀಡಬೇಕೋ ಅಥವಾ ಬೇಡವೋ ಎಂದು ನಿರ್ಧಾರ ಮಾಡುವುದಾಗಿ ಘೋಷಿಸಿದ್ದಾರೆ. ಕೆಲವು ಕಾಂಗ್ರೆಸ್ ಶಾಸಕರು ನಾವು ಶಿವಸೇನಾ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೇ, ನಾವು ಹಲವಾರು ಸಮುದಾಯಗಳ ಬೆಂಬಲವನ್ನು ಕಳೆದುಕೊಳ್ಳಲಿದ್ದೇವೆ ಎಂಬ ಆತಂಕ ವ್ಯಕ್ತಪಡಿಸಿರುವ ಕಾರಣ ಮಲ್ಲಿಕಾರ್ಜುನ ಖರ್ಗೆ ರವರು ನಿರ್ಧಾರವನ್ನು ಅತಂತ್ರ ಸ್ಥಿತಿಯಲ್ಲಿ ಇಟ್ಟು ಸೋನಿಯಾ ಗಾಂಧಿ ಅವರ ಜೊತೆ ಮಾತುಕತೆ ನಡೆಸಲು ಮುಂದಾಗಿದ್ದಾರೆ.