ಬಿಗ್ ಬ್ರೇಕಿಂಗ್: ಉಪ ಚುನಾವಣೆಯಲ್ಲಿ ಸುಮಲತಾ ಬೆಂಬಲ ಯಾರಿಗೆ ಗೊತ್ತಾ??

ಕಳೆದ ಆರು ತಿಂಗಳ ಹಿಂದೆ ನಡೆದ ಲೋಕಸಭಾ ಚುನಾವಣೆ ಇಡೀ ವಿಶ್ವದಲ್ಲಿ ಸದ್ದು ಮಾಡಿದ್ದು ಸುಳ್ಳಲ್ಲ. ಭಾರತದ ಮುಂದಿನ ನೂರಾರು ವರ್ಷಗಳ ಭವಿಷ್ಯದ ಚುನಾವಣೆ ಎಂದೇ ಖ್ಯಾತಿ ಪಡೆದುಕೊಂಡು ಇಡೀ ವಿಶ್ವವೇ ಕಾದು ಕುಳಿತಿದ್ದ ಲೋಕಸಭಾ ಚುನಾವಣೆಯಲ್ಲಿ, ಕರ್ನಾಟಕ ರಾಜ್ಯದ ಮಂಡ್ಯ ಲೋಕಸಭಾ ಕ್ಷೇತ್ರ ತನ್ನದೇ ಆದ ವಿದ್ಯಮಾನಗಳಿಂದ ಸದ್ದು ಮಾಡಿತ್ತು. ಘಟಾನು ಘಟಿಗಳು ಸ್ಪರ್ಧೆ ಮಾಡಿದ ಕ್ಷೇತ್ರಗಳಿಗಿಂತ ಇಬ್ಬರು ಹೊಸ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ ಕ್ಷೇತ್ರ ಇಡೀ ದೇಶದಲ್ಲಿ ಸದ್ದು ಮಾಡಿತ್ತು.

ಇದಕ್ಕೆಲ್ಲ ಕಾರಣ ಅಂದಿನ ಮುಖ್ಯಮಂತ್ರಿಗಳ ಮಗ ನಿಖಿಲ್ ಕುಮಾರಸ್ವಾಮಿ ಹಾಗೂ ದಿವಂಗತ ಕನ್ನಡಿಗರ ನೆಚ್ಚಿನ ಅಂಬರೀಶ್ ಅವರ ಪತ್ನಿ ಸುಮಲತಾ ರವರು ಚುನಾವಣಾ ಕಣದಲ್ಲಿ ಸ್ಪರ್ಧೆ ಮಾಡಿದ್ದು. ಒಂದೆಡೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ನಿಖಿಲ್ ಕುಮಾರ್ ರವರನ್ನು ಗೆಲ್ಲಿಸಲು ಇನ್ನಿಲ್ಲದ ತಂತ್ರಗಳನ್ನು ಹೆಣೆಯುತ್ತಿರುವ ಸಂದರ್ಭದಲ್ಲಿ ಸ್ವಾಭಿಮಾನಿ ಮಂಡ್ಯದ ಜನತೆ, ಹಲವಾರು ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಬಿಜೆಪಿ ಪಕ್ಷದ ಬೆಂಬಲವನ್ನು ಪಡೆದುಕೊಂಡು ಸುಮಲತಾ ಅಂಬರೀಶ್ ಅವರು ಭರ್ಜರಿಯಾಗಿ ಗೆದ್ದಿದ್ದರು. ಹೈಕಮಾಂಡ್ ನೇತೃತ್ವದಲ್ಲಿ ನಾಯಕರು ಮೈತ್ರಿ ಮಾಡಿಕೊಂಡರೂ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಒಟ್ಟಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. ಸಿನಿಮೀಯ ರೀತಿಯಲ್ಲಿ ಕೆಲವು ತಂತ್ರಗಳನ್ನು ಹೆಣೆದರೂ ಕೂಡ ಸುಮಲತಾ ಅಂಬರೀಶ್ ರವರನ್ನು ಮಂಡ್ಯ ಜನತೆ ಕೈಬಿಡಲಿಲ್ಲ.

ಇದೀಗ ಇದೇ ಸುಮಲತಾ ರವರು ಉಪ ಚುನಾವಣೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಲು ಅಖಾಡಕ್ಕೆ ಇಳಿಯಲಿದ್ದಾರೆ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಬಹಿರಂಗವಾಗಿ ಬೆಂಬಲ ಸೂಚಿಸಿದ ಕಾರಣ ಹಾಗೂ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅಮಿತ್ ಶಾ ಮತ್ತು ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪನ ವರು ಮನವಿ ಮಾಡಿದ್ದಾರೆ ಎನ್ನಲಾಗುತ್ತಿರುವ ಸಂದರ್ಭದಲ್ಲಿ ಉಪ ಚುನಾವಣೆಯಲ್ಲಿ ಕೆ ಆರ್ ಪೇಟೆ ಹಾಗೂ ಹುಣಸೂರು ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷಕ್ಕೆ ಸುಮಲತಾ ಅಂಬರೀಶ್ ರವರು ಬೆಂಬಲ ನೀಡುತ್ತಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಈ ಮೂಲಕ ಮಂಡ್ಯ ಜಿಲ್ಲೆಯಲ್ಲಿ ತನ್ನ ಅಸ್ತಿತ್ವವನ್ನು ಸ್ಥಾಪಿಸಲು ಬಹಳ ಕಷ್ಟ ಪಡುತ್ತಿದ್ದ ಬಿಜೆಪಿ ಪಕ್ಷಕ್ಕೆ ಹೊಸ ಆಶಾಕಿರಣವೊಂದು ಸಿಕ್ಕಂತಾಗಿದೆ. ಇದರಿಂದ ಉಪ ಚುನಾವಣೆ ಮತ್ತಷ್ಟು ರಂಗೇರಿದೆ.

Facebook Comments

Post Author: Ravi Yadav