ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಜುಗರ ! CAA ವಿರುದ್ಧ ಪಕ್ಷ ಅಪಪ್ರಚಾರ ಮಾಡಿದೆ ಎಂದು ಒಪ್ಪಿಕೊಂಡ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಬೆಂಬಲಿಗರು ಮಾಡಿದ್ದೇನು ಗೊತ್ತಾ??

ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಜುಗರ ! CAA ವಿರುದ್ಧ ಪಕ್ಷ ಅಪಪ್ರಚಾರ ಮಾಡಿದೆ ಎಂದು ಒಪ್ಪಿಕೊಂಡ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಬೆಂಬಲಿಗರು ಮಾಡಿದ್ದೇನು ಗೊತ್ತಾ??

ನಮಸ್ಕಾರ ಸ್ನೇಹಿತರೇ, ಇದೀಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಸ್ಪಷ್ಟನೆ ನೀಡಿದಂತೆ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆಗಳು ಸೇರಿದಂತೆ ಹಲವಾರು ಕಾಯ್ದೆಗಳನ್ನು ಈಗಾಗಲೇ ಜಾರಿಗೆ ತಂದಿದೆ. ಬಹುತೇಕ ಕಾಯ್ದೆಗಳ ವಿರುದ್ಧ ಕಾಂಗ್ರೆಸ್ ಪಕ್ಷ ಹೋರಾಟಕ್ಕೆ ಇಳಿದಿದೆ.

ಅದರಲ್ಲಿಯೂ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ಆರ್ಸಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸಿ ಇಡೀ ದೇಶಾದ್ಯಂತ ಚರ್ಚೆ ಮಾಡುವಂತೆ ಕಾಂಗ್ರೆಸ್ ಪಕ್ಷ ದೇಶದ ಹಲವಾರು ರಾಜ್ಯಗಳನ್ನು ಈ ಕಾಯ್ದೆಗಳ ವಿರುದ್ಧ ಒಗ್ಗೂಡಿಸಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ಆರ್ಸಿ ಯೋಜನೆಗಳಿಂದ ಮೂಲ ಭಾರತೀಯರಿಗೆ ತೊಂದರೆಯಾಗುತ್ತದೆ ಎಂದು ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ಪಕ್ಷವು ಅದರಲ್ಲಿಯೂ ಅಲ್ಪಸಂಖ್ಯಾತರನ್ನು ಗುರಿಯಾಗಿರಿಸಿಕೊಂಡು ಹಲವಾರು ಪ್ರಚೋದಿತ ಹೇಳಿಕೆಗಳನ್ನು ನೀಡುತ್ತಿದೆ. ಹೀಗಿರುವಾಗ ತನ್ನ ಪಕ್ಷ ತಪ್ಪು ಮಾಡಿದೆ ಎಂದು ಒಪ್ಪಿಕೊಂಡಿರುವ ಕಾಂಗ್ರೆಸ್ ಪಕ್ಷದ ನಾಯಕರು ಕಠಿಣ ನಿರ್ಧಾರವನ್ನು ತೆಗೆದು ಕೊಂಡಿದ್ದಾರೆ. ಹೌದು ಅದರಲ್ಲಿಯೂ ಬಲಿಷ್ಠ ನಾಯಕರು ಈ ರೀತಿ ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಬಾರಿ ಮುಜುಗರ ಉಂಟು ಮಾಡಿದೆ.

ಹೌದು, ಕಾಂಗ್ರೆಸ್ ಪಕ್ಷವು ಪೌರತ್ವ ತಿದ್ದುಪಡಿ ಹಾಗೂ ಎನ್ಆರ್ಸಿ ಮಸೂದೆಗಳ ಬಗ್ಗೆ ಅಪಪ್ರಚಾರ ಮಾಡಿದೆ, ಪೌರತ್ವ ತಿದ್ದುಪಡಿ ವಿಚಾರದಲ್ಲಿ ಅಲ್ಪಸಂಖ್ಯಾತರಲ್ಲಿ ಗೊಂದಲ ಸೃಷ್ಟಿಸಿ, ದಾರಿ ತಪ್ಪಿಸಲು ಪ್ರಯತ್ನಪಡುತ್ತಿದೆ. ಈ ಕಾಯ್ದೆಗಳ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಕೈಗೊಂಡ ತಪ್ಪು ನಿಲುವನ್ನು ನಾವು ಸ್ಪಷ್ಟವಾಗಿ ವಿರೋಧ ಮಾಡುತ್ತಿದ್ದೇವೆ, ಪ್ರತಿಪಕ್ಷ ಸ್ಥಾನದಲ್ಲಿ ಕುಳಿತಿರುವ ನಾವು ವಿಮರ್ಶಾತ್ಮಕವಾಗಿ ಇರಬೇಕು ಮತ್ತು ಕೇವಲ ವಿರೋಧ ಮಾಡುವ ಉದ್ದೇಶದಿಂದ ಪ್ರತಿಯೊಂದನ್ನು ವಿರೋಧ ಮಾಡುವ ಅಗತ್ಯ ಇಲ್ಲ ಎಂದು ಹೇಳಿಕೆ ನೀಡಿರುವ ಪಣಜಿ ಕಾಂಗ್ರೆಸ್ ಬ್ಲಾಕ್ ಸಮಿತಿ ಅಧ್ಯಕ್ಷ ಪ್ರಸಾದ್ ಅಮೊಂಕರ್, ಉತ್ತರ ಗೋವಾದ ಅಲ್ಪಸಂಖ್ಯಾತರ ಸೆಲ್ ಮುಖ್ಯಸ್ಥ ಜಾವೀದ್ ಶೇಕ್, ಬ್ಲಾಕ್ ಸಮಿತಿ ಕಾರ್ಯದರ್ಶಿ ದಿನೇಶ್ ಕುಬಲ್ ಮತ್ತು ಮಾಜಿ ಯುವ ನಾಯಕ ಶಿವರಾಜ್ ತರ್ಕರ್ ರವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷ ಬಾರಿ ಮುಜುಗರಕ್ಕೆ ಒಳಗಾಗಿದ್ದು, ಇದೀಗ ದೇಶದ ಎಲ್ಲೆಡೆ ಇದೇ ಸುದ್ದಿ ಹರಿದಾಡುತ್ತಿದೆ.