ನ್ಯೂಜಿಲೆಂಡ್ ವಿರುದ್ಧದ ಟಿ-20 ಸರಣಿಗೆ ಭಾರತ ತಂಡ ಪ್ರಕಟಣೆ ! ಬಿಸಿಸಿಐ ವಿರುದ್ಧ ಕಿಡಿಕಾರಿದ ಜನರು ! ಯಾಕೆ ಗೊತ್ತಾ?

ನಮಸ್ಕಾರ ಸ್ನೇಹಿತರೇ, ಇದೀಗ ಶ್ರೀಲಂಕಾ ತಂಡದ ವಿರುದ್ಧ ಭರ್ಜರಿ ಸರಣಿ ಜಯ ಗಳಿಸಿರುವ ಭಾರತ ತಂಡವು ಇಂದಿನಿಂದ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ತದ ನಂತರ ಮರು ದಿನ ನ್ಯೂಜಿಲೆಂಡ್ ತಂಡದ ವಿರುದ್ಧ ಟಿ-ಟ್ವೆಂಟಿ ಸರಣಿಗಾಗಿ ನ್ಯೂಜಿಲೆಂಡ್ ತೆರಳಲಿರುವ ಭಾರತ ಕ್ರಿಕೆಟ್ ತಂಡವನ್ನು ಬಿಸಿಸಿಐ ಸಂಸ್ಥೆಯು ಘೋಷಣೆ ಮಾಡಿದೆ. ಆರಂಭಿಕ ಆಟಗಾರ ರೋಹಿತ್ ಶರ್ಮ ಮತ್ತೆ ತಂಡಕ್ಕೆ ವಾಪಸ್ಸಾದರೇ ಹಲವಾರು ತಿಂಗಳುಗಳಿಂದ ಭಾರತ ತಂಡದಲ್ಲಿದ್ದರೂ ಕೇವಲ ಒಂದು ಪಂದ್ಯದಲ್ಲಿ ಅವಕಾಶ ಪಡೆದ ಸಂಜು ಸಾಮ್ಸನ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

ಇದರ ವಿರುದ್ಧ ನೆಟ್ಟಿಗರ ಆಕ್ರೋಶ ವ್ಯಕ್ತಪಡಿಸಿ ಸಂಜು ಸಾಮ್ಸನ್ ರವರನ್ನು ಟಿ20 ತಂಡಕ್ಕೆ ಆಯ್ಕೆ ಮಾಡ ಬೇಕಾಗಿತ್ತು ಎಂದು ವಾದ ಮಂಡಿಸಿದ್ದಾರೆ. ಉಳಿದಂತೆ ತಂಡ ಇಂತಿದೆ. ವಿರಾಟ್ ಕೊಹ್ಲಿ (ನಾಯಕ), ರಿಷಬ್ ಪಂತ್, ಕೆ ಎಲ್ ರಾಹುಲ್, ರೋಹಿತ್ ಶರ್ಮ (ಉಪ ನಾಯಕ), ಶ್ರೇಯಸ್ ಅಯ್ಯರ್, ಶಿಖರ್ ಧವನ್, ಮನೀಶ್ ಪಾಂಡೆ, ಶಿವಂ ದುಬೆ, ಕುಲದೀಪ್ ಯಾದವ್, ಯುಜುವೇಂದ್ರ ಚಹಲ್, ವಾಶಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ರವೀಂದ್ರ ಜಡೇಜಾ ಹಾಗೂ ಶಾರ್ದೂಲ್ ಠಾಕೂರ್ ರವರು ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸಂಜು ಸಾಮ್ಸನ್ ರವರು ತಂಡಕ್ಕೆ ಆಯ್ಕಯಾಗದಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ ಆದ ಕಾರಣದಿಂದ ಕೆಲವರು ಬಿಸಿಸಿಐ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Facebook Comments

Post Author: Ravi Yadav