ಅಮಿತ್ ಶಾ ಭೇಟಿ ಬೆನ್ನಲ್ಲೇ ರಾಜ್ಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ ಮೋದಿ ಸರ್ಕಾರ !

ಅಮಿತ್ ಶಾ ಭೇಟಿ ಬೆನ್ನಲ್ಲೇ ರಾಜ್ಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ ಮೋದಿ ಸರ್ಕಾರ !

ನಮಸ್ಕಾರ ಸ್ನೇಹಿತರೇ, ಕೇವಲ ನೆನ್ನೆಯಷ್ಟೇ ಭಾರತದ ಗೃಹ ಸಚಿವರಾಗಿರುವ ಅಮಿತ್ ಶಾ ರವರು ಕರ್ನಾಟಕಕ್ಕೆ ಭೇಟಿ ನೀಡಿದ್ದರು. ಬೆಂಗಳೂರು ಹಾಗೂ ಹುಬ್ಬಳ್ಳಿ ನಗರಗಳಲ್ಲಿ ನಡೆದ ಸಭೆ ಹಾಗೂ ಸಮಾವೇಶದಲ್ಲಿ ಭಾಗವಹಿಸಿದ ಅಮಿತ್ ಶಾ ರವರ ಭೇಟಿ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಕರ್ನಾಟಕದ ಜನತೆಗೆ ಭರ್ಜರಿ ಗುಡ್ ನ್ಯೂಸ್ ಬಂದಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಇಂದಿನ ಜೀವನ ಚಕ್ರದಲ್ಲಿ ಮಧುಮೇಹ, ರಕ್ತದೊತ್ತಡ, ಮೂತ್ರಪಿಂಡ ಸಮಸ್ಯೆ ಗಳು ಸಾಮಾನ್ಯವಾಗಿವೆ. ಇನ್ನು ಕ್ಯಾನ್ಸರ್ ಹಾಗೂ ಹೃದಯ ಸಂಬಂಧಿತ ಕಾಯಿಲೆಗಳು ಬಂದರೆ ಬಹುತೇಕ ಬಡಜನರು ದಿಕ್ಕೇ ತೋಚದಂತೆ ಚಿಂತೆಯಲ್ಲಿ ಮುಳುಗಿ ತಮ್ಮ ಜೀವನ ಮುಗಿದೇ ಹೋಯಿತು ಎಂದು ಕೊಳ್ಳುತ್ತಾರೆ. ಇನ್ನು ಉಳಿದವರು ತಮ್ಮ ಬಳಿ ಇರುವ ಹಣವನ್ನು ಆಸ್ಪತ್ರೆಗೆ ಇಟ್ಟು ತಮ್ಮ ಜೀವನದ ಗತಿಯನ್ನೇ ಬದಲಾಯಿಸಿಕೊಳ್ಳುತ್ತಾರೆ.

ಹೌದು, ನಗರ ಪ್ರದೇಶಗಳನ್ನು ಹೊರತುಪಡಿಸಿ ಗ್ರಾಮೀಣ ಪ್ರದೇಶಗಳಲ್ಲಿ ಈ ಮೇಲ್ಕಂಡ ಕಾಯಿಲೆಗಳು ಕಂಡು ಬಂದರೆ ಜನತೆ ಚಿಂತೆಯಲ್ಲಿ ತೊಡಗುವುದು ಸರ್ವೇ ಸಾಮಾನ್ಯ. ಇದೇ ಕಾರಣಕ್ಕಾಗಿ ಇದೀಗ ಇಡೀ ಕರ್ನಾಟಕ ರಾಜ್ಯದಲ್ಲಿ ನೂರಾರು ಗ್ರಾಮೀಣ ಪ್ರದೇಶಗಳಲ್ಲಿ ಈಗಾಗಲೇ ಇರುವ ಎನ್ಸಿಡಿ ಕ್ಲಿನಿಕ್ ಗಳ ಜೊತೆ ಇನ್ನೂ 100 ಎನ್ಸಿಡಿ ಕ್ಲಿನಿಕ್ ಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದೇ ವರ್ಷದ ಏಪ್ರಿಲ್ ತಿಂಗಳುಗಳಿಂದ ಕ್ಲಿನಿಕ್ ನಿರ್ಮಾಣದ ಗುರಿ ಆರಂಭವಾಗಲಿದ್ದು ಕೇಂದ್ರ ಸರ್ಕಾರ ಇನ್ನು ಕೆಲವೇ ಕೆಲವು ದಿನಗಳಲ್ಲಿ ಅನುದಾನ ಬಿಡುಗಡೆ ಮಾಡಲಿದೆ. ಈ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಮಧುಮೇಹ, ರಕ್ತದೊತ್ತಡ, ಮೂತ್ರಪಿಂಡ ಸಮಸ್ಯೆ ಸೇರಿದಂತೆ ಕ್ಯಾನ್ಸರ್ ಹಾಗೂ ಹೃದಯ ಸಂಬಂಧಿ ಕಾಯಿಲೆಗಳಿಗೆ ಕೂಡಲೇ ತಪಾಸಣೆ ನಡೆಸಿ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತದೆ.