ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸುವಂತಹ ಕಠಿಣ ನಿರ್ಧಾರ ತೆಗೆದುಕೊಂಡ ಬಿಜೆಪಿ ಹೈಕಮಾಂಡ್ ! ಸ್ಪಷ್ಟ ಸಂದೇಶ ರವಾನೆ ಮಾಡಿ ಹೇಳಿದ್ದೇನು ಗೊತ್ತಾ??

ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸುವಂತಹ ಕಠಿಣ ನಿರ್ಧಾರ ತೆಗೆದುಕೊಂಡ ಬಿಜೆಪಿ ಹೈಕಮಾಂಡ್ ! ಸ್ಪಷ್ಟ ಸಂದೇಶ ರವಾನೆ ಮಾಡಿ ಹೇಳಿದ್ದೇನು ಗೊತ್ತಾ??

ನಮಸ್ಕಾರ ಸ್ನೇಹಿತರೇ, ಇದೀಗ ಬಿಜೆಪಿ ಪಕ್ಷ ಉಪ ಚುನಾವಣೆ ಯಲ್ಲಿ ಗೆದ್ದು ಬಂದಿರುವ ಎಲ್ಲಾ ಶಾಸಕರಿಗೆ ಸಚಿವ ಸ್ಥಾನ ನೀಡುತ್ತೇವೆ ಎಂದು ಖಚಿತಪಡಿಸಿದೆ. ಹೌದು, ಚುನಾವಣೆಗೂ ಮುನ್ನವೇ ಬಿಜೆಪಿ ಪಕ್ಷವು ಒಪ್ಪಿಕೊಂಡಂತೆ ತನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಈಗಾಗಲೇ ತಿಳಿಸಿದೆ.

ಸೋತಿರುವ ಮಾಜಿ ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಈಗಾಗಲೇ ಹಲವಾರು ಸುತ್ತಿನ ಚರ್ಚೆಗಳು ನಡೆದಿವೆ ಆದರೆ ಖಚಿತ ಮಾಹಿತಿ ಎಲ್ಲಿಯೂ ಸಿಕ್ಕಿಲ್ಲ. ಇದರ ಬೆನ್ನಲ್ಲೇ ವಾಲ್ಮೀಕಿ ಸಮುದಾಯವು ರಾಜ್ಯ ಸರ್ಕಾರದ ಮುಂದೆ ಹಲವಾರು ಬೇಡಿಕೆಗಳನ್ನು ಇಟ್ಟು ವಾಲ್ಮೀಕಿ ಸಮುದಾಯ ದಿಂದ ಯಾರಾದರೂ ಒಬ್ಬರಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಿ ಮೀಸಲಾತಿ ಹೆಚ್ಚಳ ಮಾಡಬೇಕು ಎಂದು ರಾಜ್ಯ ಸರ್ಕಾರದ ಮೇಲೆ ಒತ್ತಡ ಏರುತ್ತಿದೆ. ರಮೇಶ್ ಜಾರಕಿಹೊಳಿ ರವರು ಯಾವ ಖಾತೆ ಯಾದರೂ ನನಗೆ ಸಾಕು ಎಂದು ಹೇಳಿಕೆ ನೀಡಿದ್ದರೇ, ಮತ್ತೊಂದೆಡೆ ಶ್ರೀರಾಮುಲು ರವರು ಆರೋಗ್ಯ ಖಾತೆಯನ್ನು ಹೊಂದಿದ್ದರೂ ಕೂಡ ನಾನು ಉಪ ಮುಖ್ಯಮಂತ್ರಿ ಯಾಗಬೇಕು ಎಂದು ಜನರು ಬಯಸುತ್ತಿದ್ದಾರೆ. ಆದ ಕಾರಣ ವಾಲ್ಮೀಕಿ ಸಮುದಾಯದಿಂದ ಯಾರಾದರೂ ಒಬ್ಬರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ ಎಂದು ಈಗಾಗಲೇ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಎಲ್ಲಾ ಹೇಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದ ಬಿಜೆಪಿ ಹೈಕಮಾಂಡ್ ಇನ್ನೇನು ಕೆಲವೇ ದಿನಗಳಲ್ಲಿ ನೂತನ ಸಚಿವ ಸಂಪುಟ ವಿಸ್ತರಣೆಯಾಗಲಿದೆ.

ಆದರೆ ಈ ಸಚಿವ ಸಂಪುಟ ವಿಸ್ತರಣೆಯ ಭಾಗವಾಗಿ ಮತ್ತೊಬ್ಬರನ್ನು ಉಪಮುಖ್ಯಮಂತ್ರಿ ಮಾಡಲಾಗುವುದಿಲ್ಲ ಎಂದು ಸ್ಪಷ್ಟವಾಗಿ ಬಿಎಸ್ ಯಡಿಯೂರಪ್ಪ ನವರಿಗೆ ಸಂದೇಶ ರವಾನಿಸಿದೆ. ಇದೇ ಮಾತನ್ನು ಇದೀಗ ಖಚಿತ ಪಡಿಸಿರುವ ಬಿಎಸ್ ಯಡಿಯೂರಪ್ಪನವರು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮತ್ತೊಂದು ಉಪ ಮುಖ್ಯಮಂತ್ರಿ ಸ್ಥಾನವನ್ನು ಸೃಷ್ಟಿ ಮಾಡಲಾಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಾತನ್ನು ಮುಂದುವರೆಸಿ ಬಿಜೆಪಿ ಪಕ್ಷದ ಹೈಕಮಾಂಡ್ ಜೊತೆ ಚರ್ಚಿಸಿ ಎರಡು-ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದೇವೆ, ಕೆಲವರು ಪದತ್ಯಾಗ ಮಾಡುವಂತೆ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಬಹುದು ಎಂದು ಹೇಳಿಕೆ ನೀಡಿದ್ದಾರೆ. ಒಟ್ಟಿನಲ್ಲಿ ಇದೀಗ ಬಿಜೆಪಿ ಪಕ್ಷದ ಹೈಕಮಾಂಡ್ ನ ನಿರ್ಧಾರದಿಂದ ರಾಜ್ಯ ಸರ್ಕಾರವು ವಾಲ್ಮೀಕಿ ಸಮುದಾಯದ ಕೆಂಗಣ್ಣಿಗೆ ಗುರಿಯಾಗಲಿದೆ ಎನ್ನಲಾಗಿದೆ. ಇನ್ನು ಈಗಾಗಲೇ ಹೇಳಿದಂತೆ ಉಪಮುಖ್ಯಮಂತ್ರಿ ಸ್ಥಾನ ಸಿಗದೇ ಹೋದರೆ 15ಕ್ಕೂ ಹೆಚ್ಚು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ವಾಲ್ಮೀಕಿ ಸಮುದಾಯದ ಸ್ವಾಮೀಜಿಯೊಬ್ಬರು ಕೆಲವೇ ದಿನಗಳ ಹಿಂದೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು. ಒಂದು ವೇಳೆ ಅದೇ ನಡೆದಲ್ಲಿ ಮತ್ತೊಮ್ಮೆ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಕಾಣಿಸಿಕೊಳ್ಳಲಿದೆ.