ಸಿಂಧಿಯಾ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಬಿಗ್ ಶಾಕ್ ನೀಡಲು ಮುಂದಾದ ಇತರ ಪಕ್ಷದ ಶಾಸಕರು ! ನಡೆಯುತ್ತಿರುವುದಾದರೂ ಏನು ಗೊತ್ತಾ??

ಸಿಂಧಿಯಾ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಬಿಗ್ ಶಾಕ್ ನೀಡಲು ಮುಂದಾದ ಇತರ ಪಕ್ಷದ ಶಾಸಕರು ! ನಡೆಯುತ್ತಿರುವುದಾದರೂ ಏನು ಗೊತ್ತಾ??

ನಮಸ್ಕಾರ ಸ್ನೇಹಿತರೇ ಇದೀಗ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರ ಸಾಲಿನಲ್ಲಿ ಮುಂಚೂಣಿಯಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ರವರು ತಮ್ಮದೇ ಆದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೇಸರಗೊಂಡು ರಾಜೀನಾಮೆ ಸಲ್ಲಿಸಿದ್ದಾರೆ.

ಒಂದು ಕಡೆ ಆಪರೇಷನ್ ಕಮಲ ನಡೆಯುತ್ತಿದೆ ಎಂಬ ಆರೋಪ ಕೇಳಿ ಬರುತ್ತಿರುವ ಸಂದರ್ಭದಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ರವರು ಕಾಂಗ್ರೆಸ್ ಪಕ್ಷ ಯೋಜನೆಯಂತೆ ಸಾಲಮನ್ನ ಮಾಡಲಿಲ್ಲ ,ಯಾವುದೇ ಅಭಿವೃದ್ಧಿ ಕೆಲಸ ಮಾಡಲಿಲ್ಲ. ಅಷ್ಟೇ ಯಾಕೆ ಮಧ್ಯಪ್ರದೇಶ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ. ಆದಕಾರಣ ನಾನು ಕಾಂಗ್ರೆಸ್ ಪಕ್ಷ ತೊರೆಯುತ್ತಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿ ಬಿಜೆಪಿ ಪಕ್ಷಕ್ಕೆ ವಲಸೆ ಹೋಗುತ್ತಿದ್ದಾರೆ. ಇದರ ಬೆನ್ನಲ್ಲೇ ಅವರ ಬೆಂಬಲಿಗರ ಶಾಸಕರು ಕೂಡ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರಿಕೊಳ್ಳುವುದು ಬಹುತೇಕ ಖಚಿತವಾಗಿದೆ.

ಈ ಎಲ್ಲಾ ವಿದ್ಯಮಾನಗಳ ನಡುವೆ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಮಧ್ಯಪ್ರದೇಶ ರಾಜ್ಯದಲ್ಲಿ ಬಹುಮತ ಇಲ್ಲದಿದ್ದಾಗ ಬಿಎಸ್ಪಿ ಹಾಗೂ ಎಸ್ಪಿ ಶಾಸಕರು ಕಮಲನಾಥ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿ ಸರ್ಕಾರ ರಚನೆಯಲ್ಲಿ ಕೈ ಜೋಡಿಸಿದ್ದರು. ಆದರೆ ಇದ್ದಕ್ಕಿದ್ದ ಹಾಗೆ ನಡೆದ ಮಹತ್ವದ ಬೆಳವಣಿಗೆಯಲ್ಲಿ ಬಿಎಸ್ಪಿ ಪಕ್ಷದ ಇಬ್ಬರು ಶಾಸಕರು ಹಾಗೂ ಎಸ್ಪಿ ಪಕ್ಷದ ಒಬ್ಬ ಶಾಸಕ ಬಿಜೆಪಿ ಪಕ್ಷದ ನಾಯಕ ಶಿವರಾಜ್ ಸಿಂಗ್ ಚೌಹಾನ್ ರವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿರುವ ಶಿವರಾಜ್ ಸಿಂಗ್ ಚೌಹಾನ್ ರವರು ಇದು ಕೇವಲ ಔಪಚಾರಿಕ ಭೇಟಿ ಎಂದು ಹೇಳಿದ್ದಾರೆ. ಆದರೆ ಇಷ್ಟು ದಿವಸ ಇರೋದು ಔಪಚಾರಿಕ ಭೇಟಿ ಈಗ ಯಾಕೆ ಎಂಬುದು ಪ್ರಶ್ನೆಯಾಗಿ ಉಳಿದಿದೆ.