ಯಶ್ ಸಂಜಯ್ ದತ್ ಸೇರಿದಂತೆ ಕೆಜಿಎಫ್-2 ಕಲಾವಿದರು ಪಡೆದಿರುವ ಸಂಭಾವನೆ ಎಷ್ಟು ಗೊತ್ತಾ?? ಇವರ ಸಂಭಾವನೆಯಲ್ಲೇ ಹೊಸ ಸಿನಿಮಾವನ್ನು ನಿರ್ಮಿಸಬಹುದು??

ಯಶ್ ಸಂಜಯ್ ದತ್ ಸೇರಿದಂತೆ ಕೆಜಿಎಫ್-2 ಕಲಾವಿದರು ಪಡೆದಿರುವ ಸಂಭಾವನೆ ಎಷ್ಟು ಗೊತ್ತಾ?? ಇವರ ಸಂಭಾವನೆಯಲ್ಲೇ ಹೊಸ ಸಿನಿಮಾವನ್ನು ನಿರ್ಮಿಸಬಹುದು??

ನಮಸ್ಕಾರ ಸ್ನೇಹಿತರೇ ಇತ್ತೀಚಿನ ದಿನಗಳಲ್ಲಿ ಇಡೀ ಭಾರತೀಯ ಚಿತ್ರರಂಗದಲ್ಲಿ ಕೇಳಿಬರುತ್ತಿರುವ ಒಂದೇ ಒಂದು ಹೆಸರೆಂದರೆ ಅದು ನಮ್ಮ ಕನ್ನಡ ಚಿತ್ರರಂಗದ ಹೆಮ್ಮೆಯ ಚಿತ್ರ ಕೆಜಿಎಫ್ ಚಾಪ್ಟರ್ 2. ಇದೇ ಏಪ್ರಿಲ್ 14ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಕೆಜಿಎಫ್ ಚಾಪ್ಟರ್ 2 ಚಿತ್ರ ಬಿಡುಗಡೆಯಾಗಲು ಸಜ್ಜಾಗಿ ನಿಂತಿದೆ.

ಈಗಾಗಲೇ ನಿಮಗೆಲ್ಲ ತಿಳಿದಿರುವಂತೆ ಕೆಜಿಎಫ್ ಚಾಪ್ಟರ್ 2 ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಇರುವಂತಹ ಎಲ್ಲಾ ದಾಖಲೆಗಳನ್ನು ಈಗಾಗಲೇ ಈ ಟ್ರೈಲರ್ ಅಳಿಸಿಹಾಕಿದೆ. ಚಿತ್ರದ ಕುರಿತಂತೆ ಈಗಾಗಲೇ ಪ್ರೇಕ್ಷಕರಲ್ಲಿ ನಿರೀಕ್ಷೆಯನ್ನುವುದು ಇನ್ನಷ್ಟು ಹೆಚ್ಚಾಗಿದೆ. ನೀನು ಚಿತ್ರ ಬಿಡುಗಡೆಯಾಗಲಿಲ್ಲ ಕೆಲವೇ ಕೆಲವು ದಿನಗಳು ಮಾತ್ರ ಬಾಕಿ ಉಳಿದಿದೆ. ಹೀಗಾಗಿ ಚಿತ್ರದ ಕುರಿತಂತೆ ಕೆಲವೊಂದು ಇಂಟರೆಸ್ಟಿಂಗ್ ವಿಚಾರಗಳ ಕುರಿತಂತೆ ಹೇಳಲು ಹೊರಟಿದ್ದೇವೆ.

ಹೌದು ಚಿತ್ರದಲ್ಲಿ ನಟಿಸಿರುವ ನಟರ ಹಾಗೂ ನಿರ್ದೇಶಕರ ಸಂಭಾವನೆ ಕುರಿತಂತೆ ಸವಿವರವಾಗಿ ನಿಮಗೆ ಹೇಳಲು ಹೊರಟಿದ್ದೇವೆ. ಹಾಗಿದ್ದರೆ ಯಾರು ಎಷ್ಟು ಸಂಭಾವನೆ ಪಡೆದುಕೊಂಡಿದ್ದಾರೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಮೊದಲಿಗೆ ಚಿತ್ರದ ನಾಯಕನ ಕುರಿತಂತೆ ಮಾತನಾಡೋಣ ಬನ್ನಿ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ಈ ಸಿನಿಮಾಗೆ ಹಲವಾರು ವರ್ಷಗಳನ್ನು ಮೀಸಲಿಟ್ಟಿದ್ದಾರೆ. ಕೆಜಿಎಫ್ ಚಾಪ್ಟರ್ 2 ಚಿತ್ರ ಅವರಿಗೆ ಖಂಡಿತವಾಗಿ ಗೇಮ್ ಚೇಂಜರ್ ಆಗಿ ಕಾಣಿಸಿಕೊಳ್ಳಲಿದೆ. ಇನ್ನು ಕೆಜಿಎಫ್ ಚಾಪ್ಟರ್ 2 ಚಿತ್ರಕ್ಕೆ ರಾಕಿಂಗ್ ಸ್ಟಾರ್ ಯಶ್ ರವರು ಬರೋಬ್ಬರಿ 25 ರಿಂದ 27 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ರಾಕಿಂಗ್ ಸ್ಟಾರ್ ಯಶ್ ರವರ ಸಂಭಾವನೆಯನ್ನಾದರೂ ನೀವು ಅಂದಾಜು ಮಾಡಬಹುದಾಗಿದೆ. ಆದರೆ ಚಿತ್ರದ ನಿರ್ದೇಶಕ ನಾಗಿರುವ ಪ್ರಶಾಂತ್ ನೀಲ್ ರವರ ಸಂಭಾವನೆಯನ್ನು ಅಂದಾಜು ಮಾಡಲು ಕೂಡ ನಿಮಗೆ ಸಾಧ್ಯವಿಲ್ಲ. ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಅತ್ಯಂತ ಹೆಚ್ಚು ಸಂಭಾವನೆ ಪಡೆದಿರುವ ನಿರ್ದೇಶಕರಾಗಿ ಕಾಣಿಸಿಕೊಂಡಿದ್ದಾರೆ. ಹೌದು ಪ್ರಶಾಂತ ನೀಲ್ ರವರು ಬರೋಬ್ಬರಿ 15 ರಿಂದ 20 ಕೋಟಿ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

ಇನ್ನು ಚಿತ್ರದ ನಾಯಕ ನಟಿಯಾಗಿ ಕಾಣಿಸಿಕೊಂಡಿರುವ ಕರಾವಳಿ ಮೂಲದ ಬೆಡಗಿ ಶ್ರೀನಿಧಿ ಶೆಟ್ಟಿಯವರು ಮೂರರಿಂದ ನಾಲ್ಕು ಕೋಟಿ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ರಮೇಶ್ ಏನಂದರೆ ಪ್ರಧಾನಮಂತ್ರಿಯ ಪಾತ್ರವನ್ನು ನಿರ್ವಹಿಸಿರುವ ಬಾಲಿವುಡ್ ಬೆಡಗಿ ರವೀನ ತಂಡನ್ ರವರು ಈ ಚಿತ್ರದಲ್ಲಿ ನಟಿಸುವುದಕ್ಕೆ ಆಗಿ ಒಂದರಿಂದ ಎರಡು ಕೋಟಿ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದಾರೆ.

ಚಿತ್ರದಲ್ಲಿ ನಟೋರಿಯಸ್ ವಿಲನ್ ಪಾತ್ರ ಅಧೀರನ ಪಾತ್ರದಲ್ಲಿ ಬಾಲಿವುಡ್ ಚಿತ್ರರಂಗದ ಸಂಜು ಬಾಬಾ ಕಾಣಿಸಿಕೊಂಡಿದ್ದಾರೆ. ಈ ಪಾತ್ರ ಕೆಜಿಎಫ್ ಚಾಪ್ಟರ್ 2 ರಲ್ಲಿ ಪ್ರಮುಖವಾಗಿದ್ದು ಈ ಪಾತ್ರಕ್ಕಾಗಿ ಸಂಜಯ್ ದತ್ ಅವರು ಬರೋಬ್ಬರಿ 9 ರಿಂದ 10 ಕೋಟಿ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದಾರೆ. ಮಾಳವಿಕಾ ಅವಿನಾಶ್ ಅವರು ತಮ್ಮ ಪಾತ್ರಕ್ಕಾಗಿ 60 ರಿಂದ 62 ಲಕ್ಷ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಪ್ರಕಾಶ್ ರೈ ರವರು ಬರೋಬ್ಬರಿ 80 ರಿಂದ 82 ಲಕ್ಷ ರೂಪಾಯಿ ಪಡೆದುಕೊಂಡಿದ್ದಾರೆ. ಇನ್ನು ಮೊದಲ ಭಾಗದಲ್ಲಿ ಆನಂದ್ ಇಂಗಳಿಗೆ ಪಾತ್ರವನ್ನು ನಿರ್ವಹಿಸಿದ ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ರವರು ಬರೋಬ್ಬರಿ 50 ಲಕ್ಷ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದಾರೆ ಎಂಬುದು ಈಗ ತಿಳಿದುಬಂದಿದೆ.

ಚಿತ್ರದ ನಟರ ಬಜೆಟ್ ಇಷ್ಟೊಂದು ಕೋಟಿ ಇರಬೇಕಾದರೆ ಇನ್ನು ಚಿತ್ರದ ಬಜೆಟ್ ಎಷ್ಟು ಕೋಟಿಯಲ್ಲಿ ಮೂಡಿಬಂದಿರಬಹುದು ನೀವೇ ಅಂದಾಜು ಹಾಕಿಕೊಳ್ಳಿ. ಚಿತ್ರ ಇದೇ ಏಪ್ರಿಲ್ 14ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದು ಖಂಡಿತವಾಗಿ ಈ ಚಿತ್ರ ಕನ್ನಡ ಚಿತ್ರರಂಗದ ಹೆಮ್ಮೆ ಗೌರವವನ್ನು ಇನ್ನಷ್ಟು ವಿಸ್ತರಿಸಬಹುದು ಎನ್ನುವುದಾಗಿ ಎಲ್ಲರೂ ನಿರೀಕ್ಷಿಸಿದ್ದಾರೆ. ಕೆಜಿಎಫ್ ಚಾಪ್ಟರ್ 2 ಚಿತ್ರದ ಕುರಿತಂತೆ ನಿಮ್ಮ ನಿರೀಕ್ಷೆಗಳನ್ನು ತಪ್ಪದೇ ನಮ್ಮ ಕಾಮೆಂಟ್ ಬಾಕ್ಸ್ ಅಲ್ಲಿ ಕಾಮೆಂಟ್ ಮಾಡುವ ಮೂಲಕ ಶೇರ್ ಮಾಡಿಕೊಳ್ಳಿ.