ಸೂಪರ್ ಸ್ಟಾರ್ ರಜನಿ ರಾಜಕೀಯಕ್ಕೆ ಬರ್ತಾರಂತೆ..!!ಹೊಸ ಪಕ್ಷ ಘೋಷಣೆ ಸಾಧ್ಯತೆ.

ತಮಿಳು ಸೂಪರ್‌ಸ್ಟಾರ್‌‌ ರಜನಿಕಾಂತ್ ಅವರ ರಾಜಕೀಯ ಪ್ರವೇಶದ ಬಗೆಗಿನ ಊಹಾಪೋಹಕ್ಕೆ ಕೊನೆಗೂ ತೆರೆ ಬಿದ್ದಿದೆ. ತಮ್ಮ ರಾಜಕೀಯ ಪ್ರವೇಶದ ಬಗ್ಗೆ ತಲೈವಾ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಚೆನ್ನೈನ ರಾಘವೇಂದ್ರ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿರುವ ರಜನಿಕಾಂತ್‌‌, ಸ್ವಂತ ಪಕ್ಷವನ್ನು ಸ್ಥಾಪಿಸುತ್ತಿರುವುದಾಗಿ ತಿಳಿಸಿದ್ದಾರೆ.

Rajinikanth

“ದೇಶದಲ್ಲಿ ಪ್ರಜಾಪ್ರಭುತ್ವ ಉಳಿಸಬೇಕಾಗಿರುವ ಕಾರಣ, ತಮಿಳರಿಗಾಗಿ ನನ್ನ ಹೋರಾಟ ಮುಂದುವರೆಸುವುದಾಗಿ ಅವರು ಹೇಳಿದ್ದಾರೆ. ಪಕ್ಷದ ಹೆಸರು ಮುಂದಿನ ದಿನಗಳಲ್ಲಿ ಬಹಿರಂಗಗೊಳಿಸುವುದಾಗಿ ಅವರು ತಿಳಿಸಿದ್ದಾರೆ”.

ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ರಜನಿಕಾಂತ್, ಕಳೆದ ಒಂದು ವರ್ಷದಿಂದ ತಮಿಳುನಾಡು ಜನತೆ ಅತ್ಯಂತ ಕೆಟ್ಟ ರಾಜಕೀಯವನ್ನು ನೋಡಿದ್ದಾರೆ. ಕಳೆದೊಂದು ವರ್ಷಗಳ ಬೆಳವಣಿಗೆಯಿಂದ ಜನ ರೋಸಿಹೋಗಿದ್ದಾರೆ. ರಾಜ್ಯದಲ್ಲಿ ರಾಜಕೀಯ ಭ್ರಷ್ಟಾಚಾರವನ್ನು ತಡೆಯಬೇಕಿದೆ.

ರಾಜ್ಯದಲ್ಲಿ ಪ್ರಜಾಪ್ರಭುತ್ವ ಗಂಭೀರ ಸ್ಥಿತಿಯಲ್ಲಿದ್ದು, ಪ್ರಜಾಪ್ರಭುತ್ವವನ್ನು ಉಳಿಸಬೇಕಿದೆ. ಜಾತಿ ಮತ ಭೇದವಿಲ್ಲದ ಎಲ್ಲರನ್ನೂ ಸಮಾನವಾಗಿ ಕಾಣುವ ಪಕ್ಷ ತಮ್ಮದು. ನನ್ನ ಪಕ್ಷದಲ್ಲಿ ಅಕ್ಷರಸ್ಥರು, ಅನಕ್ಷರಸ್ಥರು ಎಲ್ಲರೂ ಇರುತ್ತಾರೆ ಎಂದು ಹೇಳಿದರು. ಅಂತೆಯೇ ಜನರೇ ನನ್ನ ಶಕ್ತಿಯಾಗಿದ್ದು, ನನ್ನ ಎಲ್ಲ ನಿರ್ಧಾರಗಳಿಗೂ ಜನ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸ ನನ್ನಲ್ಲಿದೆ.

Rajinikanth

ನನ್ನ ಜನರ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ಹೆಸರು ಹಣಕ್ಕಾಗಿ ರಾಜಕೀಯ ಪ್ರವೇಶ ಮಾಡುತ್ತಿಲ್ಲ. ಉತ್ತಮ ಕೆಲಸ ಉತ್ತಮ ಯೋಚನೆ, ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ಪ್ರಜಾಪ್ರಭುತ್ವಕ್ಕಾಗಿ ನನ್ನ ಪಕ್ಷ ಕಾರ್ಯ ನಿರ್ವಹಿಸಲಿದೆ. ತಮಿಳುನಾಡಿನ ಎಲ್ಲ 234ಕ್ಷೇತ್ರಗಳಲ್ಲೂ ತಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡುವುದಾಗಿ ತಿಳಿಸಿರುವ ರಜನಿ, ನಿಮ್ಮೆಲ್ಲರ ಸಹಕಾರ ನನಗೆ ಅಗತ್ಯವಾಗಿ ಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

Rajinikanth

ಸಿನಿಮಾ ರಂಗದಲ್ಲಿ ಸೂಪರ್ ಸ್ಟಾರ್ ಆಗಿ ಮೆರೆದ ರಜನಿಕಾಂತ ರಾಜಕೀಯದಲ್ಲಿ ಯಶಸು ಕಾಣಲಿ ಎಂದು ಹಾರೈಸೋಣ.

Post Author: