ಹಿಂದುತ್ವಕ್ಕೆ ದೊಡ್ಡ ಜಯ: ಮಠಗಳು ದತ್ತಿ ಇಲಾಖೆ ವ್ಯಾಪ್ತಿಗೆ ತರುವ ನಿರ್ಧಾರ ಬದಲಿಸಿದ ಸಿದ್ದರಾಮಯ್ಯ ಸರ್ಕಾರ..!!

ಹಿಂದುತ್ವಕ್ಕೆ ದೊಡ್ಡ ಜಯ: ಮಠಗಳು ದತ್ತಿ ಇಲಾಖೆ ವ್ಯಾಪ್ತಿಗೆ ತರುವ ನಿರ್ಧಾರ ಬದಲಿಸಿದ ಸಿದ್ದರಾಮಯ್ಯ ಸರ್ಕಾರ..!!

0

ಹೌದು!! ರಾಜ್ಯದ ಮಠ, ದೇವಸ್ಥಾನ, ಧಾರ್ಮಿಕ ಸಂಸ್ಥೆಗಳೇ ಸಿಎಂ ಸಿದ್ದರಾಮಯ್ಯ ಟಾರ್ಗೆಟ್ ಮಾಡುತ್ತಿದ್ದು, ಸರ್ಕಾರಕ್ಕೆ ಇನ್ನು 3 ತಿಂಗಳ ಅವಧಿ ಇರುವಾಗಲೇ ಆಪರೇಷನ್‍ಗೆ ಕೈ ಹಾಕಿಬಿಟ್ರಾ ಅನ್ನೋ ಮಾತುಗಳು ಕೇಳಿಬರುತ್ತಿವೆ. ಮಠಗಳು, ದೇವಸ್ಥಾನಗಳು, ಧಾರ್ಮಿಕ ಸಂಸ್ಥೆಗಳ ಮೇಲೆ ಸಿದ್ದರಾಮಯ್ಯ ಕಣ್ಣಿಟ್ಟಿದ್ದು, ಇವುಗಳನ್ನು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ತರಲು ಕರಡು ರಚನೆಗೆ ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಈ ಕುರಿತು ಸಾರ್ವಜನಿಕ ಅಭಿಪ್ರಾಯ, ಆಕ್ಷೇಪಣೆಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾತ್ತು.

ಅಷ್ಟಕು ಈ ನಿರ್ಧಾರದ ಬಗ್ಗೆ ಪ್ರತಿಕ್ರಿಯೆ ಹೇಗಿತ್ತು ..!!

ಪೇಜಾವರ ಶ್ರೀ ಪ್ರತಿಕ್ರಿಯೆ..!!

ರಾಜ್ಯದ ಖಾಸಗಿ ಮಠ ಮಂದಿರಗಳನ್ನು ಸರ್ಕಾರೀಕರಣಗೊಳಿಸುವ ಬಗೆಗಿನ ಸರ್ಕಾರದ ನಡೆಗೆ ಉಡುಪಿಯಲ್ಲಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ತಿರುಗೇಟು ನೀಡಿದ್ದಾರೆ. ಉಡುಪಿ ಶ್ರೀಕೃಷ್ಣ ಮಠವನ್ನು ಸರ್ಕಾರ ತನ್ನ ವಶಕ್ಕೆ ಪಡೆಯುವ ಪ್ರಯತ್ನ ಮಾಡಿದರೆ ನಾನು ಮಠದಿಂದ ಹೊರಬರುತ್ತೇನೆ. ಸರಕಾರದ ನೌಕರನಾಗಿ ನಾನು ಮಠದಲ್ಲಿ ಒಂದು ಕ್ಷಣವೂ ಇರಲಾರೆ ಎಂದ ಸಿದ್ದರಾಮಯ್ಯ ಸರ್ಕಾರಕ್ಕೆ ಪ್ರತ್ಯುತ್ತರ ಕೊಟ್ಟಿದ್ದರು.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಇದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ದೇವಾಲಯ- ಮಠಗಳನ್ನು ಸರ್ಕಾರಿಕರಣ ಮಾಡುವ ಚಿಂತನೆ ವಿಪಕ್ಷಗಳ ಹೋರಾಟಕ್ಕೆ ಅಸ್ತ್ರ ಸಿಕ್ಕಂತಾಗುತ್ತದೆ. ಚುನಾವಣಾ ಹೊಸ್ತಿಲಲ್ಲಿ ವಿಪಕ್ಷಗಳು ಇದನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸುವ ಸಾಧ್ಯತೆಯಿದೆ ಎಂದು ಹೇಳಿದರು.

ಸರ್ಕಾರದ ವಿರುದ್ಧ ನಾನು ಹೋರಾಟ ಮಾಡುವುದಿಲ್ಲ. ಸರ್ಕಾರದ ಈ ನಡೆಯ ಬಗ್ಗೆ ಜನರು, ಮಠದ ಭಕ್ತರು ಚಿಂತನೆ ನಡೆಸಲಿ. ಒಂದು ಸರಿಯಾದ ತೀರ್ಮಾನಕ್ಕೆ ಬರಲಿ ಎಂದು ಪೇಜಾವರ ಸ್ವಾಮೀಜಿ ಹೇಳಿದರು.

ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ..!!

ಮಠಗಳನ್ನು ಸರ್ಕಾರದ ಸುರ್ಪದಿಗೆ ಪಡೆಯುವುದಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರೋಧ ವ್ಯಕ್ತಪಡಿಸಿದ್ದರು.

ಶ್ರವಣಬೆಳಗೊಳದಲ್ಲಿ ಮಾತನಾಡಿದ ಅವರು, ಧರ್ಮ ಬೇರೆ. ರಾಜಕಾರಣ ಬೇರೆ. ಎರಡನ್ನು ಒಟ್ಟಿಗೆ ನೋಡಬಾರದು ಎಂದಿದ್ದಾರೆ. ಈ ಬಗ್ಗೆ ನನಗೆ ಖಚಿತ ಮಾಹಿತಿ ಇಲ್ಲ. ಹಾಗೇನಾದ್ರು ಆದ್ರೆ ಅದಕ್ಕೆ ಸ್ಪಷ್ಟವಾಗಿ ವಿರೋಧಿಸುವುದು ನನ್ನ ಅಭಿಪ್ರಾಯ ಅಂತ ಹೇಳಿದ್ದರು.

ಧರ್ಮಕ್ಕೆ ರಾಜಕಾರಣದ ಸೊಂಕು ತಗಲಬಾರದು. ಇದು ತಪ್ಪು. ಎಲ್ಲವನ್ನೂ ರಾಷ್ಟ್ರೀಕರಣ ಮಾಡಲು ಸಾಧ್ಯವಿಲ್ಲ. ಇದು ಒಪ್ಪತಕ್ಕುದ್ದಲ್ಲ. ಇದಕ್ಕೆ ವಿರೋಧಿಸುವ ಮತ್ತು ಪ್ರತಿಭಟನೆ ಮಾಡುವ ಕುರಿತು ಬೇರೆ ರೀತಿ ಪ್ರಯತ್ನ ಮಾಡುತ್ತೇವೆ ಎಂದಿದ್ದರು.

ಜ.29ರಂದು ಸಾರ್ವಜನಿಕ ಪ್ರಕಟಣೆ ಹೊರಡಿಸಿ, 15 ದಿನದೊಳಗಾಗಿ ಸಾರ್ವಜನಿಕ ಅಭಿಪ್ರಾಯ, ಸಲಹೆ ನೀಡುವಂತೆ ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿಲಾಗಿದೆ. ಧಾರ್ಮಿಕ ಸಂಸ್ಥೆಗಳನ್ನು ಧಾರ್ಮಿಕ ದತ್ತಿ ಕಾಯ್ದೆಗೆ ಒಳಪಡಿಸಬೇಕೆ? ಬೇಡವೇ.? ಒಳಪಡಿಸಬೇಕಿದ್ರೆ ಎಷ್ಟರಮಟ್ಟಿಗೆ ಒಳಪಡಿಸಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಅಭಿಪ್ರಾಯ ಕೇಳಿದೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.

ಕೊನೆಗೂ ಮಠಗಳು ದತ್ತಿ ಇಲಾಖೆ ವ್ಯಾಪ್ತಿಗೆ ತರುವ ನಿರ್ಧಾರ ಬದಲಿಸಿದ ಸಿದ್ದರಾಮಯ್ಯ ಸರ್ಕಾರ..!! ಮಠಗಳನ್ನು, ದೇವಾಲಯಗಳನ್ನು ವಶಪಡಿಸಿಕೊಳ್ಳುವ ಸಂಬಂಧ ಸಾರ್ವಜನಿಕ ಅಭಿಪ್ರಾಯ, ಆಕ್ಷೇಪಣೆಗೆ ಧಾರ್ಮಿಕ ದತ್ತಿ ಇಲಾಖೆ 15 ದಿನಗಳ ಕಾಲಾವಕಾಶ ಕೊಟ್ಟು, ಜನವರಿ 29 ರಂದು ಸಾರ್ವಜನಿಕ ಪ್ರಕಟಣೆ ಮಾಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಕೊನೆಗೆ ಎಚ್ಚೆತ್ತು ಹಿಂದೆ ಈಗ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿದಿದೆ. ಸಿಎಂ ಸಿದ್ದರಾಮಯ್ಯ ನಡೆಯನ್ನ ಬಿಜೆಪಿ ನಾಯಕರು ಕಟುವಾಗಿ ಟೀಕಿಸಿದ್ದಾರೆ. ವ್ಯಾಪಕ ಟೀಕೆಯಿಂದ ಎಚ್ಚೆತ್ತ ಸಚಿವ ರುದ್ರಪ್ಪ ಲಮಾಣಿ ಅಂತ ಪ್ರಸ್ತಾವನೆಯೇ ಇಲ್ಲ. ಕೋರ್ಟ್ ನಿರ್ದೇಶನದಂತೆ ನಾವು ಅಭಿಪ್ರಾಯ ಕೇಳಿದ್ದೇವೆ ಎಂದು ಹೇಳಿದ್ದರು.

ಅದೇನೆ ಇರಲಿ ಇದು ಹಿಂದುತ್ವಕ್ಕೆ ದೊಡ್ಡ ಜಯ..!!