ಸಾಮಾಜಿಕ ಜಾಲತಾಣಗಳಲ್ಲಿನ ಜನಪ್ರಿಯತೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಎರಡನೇ ಸ್ಥಾನ..!!

ಸಾಮಾಜಿಕ ಜಾಲತಾಣಗಳಲ್ಲಿನ ಜನಪ್ರಿಯತೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಎರಡನೇ ಸ್ಥಾನಕ್ಕೇರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೊದಲ ಸ್ಥಾನದಲ್ಲಿದ್ದಾರೆ.

ಮಂಗಳವಾರದವರೆಗಿನ ಟ್ವಿಟರ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ 5 ಕೋಟಿ ಅನುಯಾಯಿಗಳನ್ನು ಹೊಂದಿದ್ದಾರೆ. ಅಮಿತ್ ಷಾ ಅವರ ಅನುಯಾಯಿಗಳು ಸಂಖ್ಯೆ 1 ಕೋಟಿ ದಾಟಿದೆ. ದೇಶದಲ್ಲಿ ಈಚಿನ ದಿನಗಳಲ್ಲಿ ನಡೆದಿರುವ ಬಹುತೇಕ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿದೆ.

ಪಕ್ಷದ ಈ ಸಾಧನೆಯ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ತಂತ್ರಗಾರಿಕೆ ಪಾತ್ರ ಬಹುದೊಡ್ಡದು. ಇದು ಸಾಮಾಜಿಕ ಜಾಲತಾಣದಲ್ಲಿ ಅವರ ಜನಪ್ರಿಯತೆ ಹೆಚ್ಚಳಕ್ಕೂ ಕಾರಣವಾಗಿದೆ.

Post Author: Ravi Yadav