ಬಹು ಕೋಟಿ ವಂಚನೆ ಪ್ರಕರಣದ ಆರೋಪಿ ನೀರವ್ ಮೋದಿಯನ್ನು ಶೀಘ್ರ ಭಾರತಕ್ಕೆ ಕರೆತರುತ್ತೇವೆ- ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್..!!

ಬಹು ಕೋಟಿ ವಂಚನೆ ಪ್ರಕರಣದ ಆರೋಪಿ ನೀರವ್ ಮೋದಿಯನ್ನು ಶೀಘ್ರ ಭಾರತಕ್ಕೆ ಕರೆತರುತ್ತೇವೆ- ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್..!!

0

ಪಂಜಾಬ್ ನ್ಯಾಷನಲ್ ಬ್ಯಾಂಕಿನ ಮುಂಬೈ ಶಾಖೆಯೊಂದರಲ್ಲಿ 11,500 ಕೋಟಿ ರೂ.ಗಳ ವಂಚನೆ ಮತ್ತು ಅಕ್ರಮ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ನೀರವ್ ಆರೋಪಿ.

ಸಿಬಿಐ ಮತ್ತು ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 280 ಕೋಟಿ ರೂ.ಗಳ ಅವ್ಯವಹಾರ ಮಾಡಿರುವ ಆರೋಪದ ಹೊತ್ತಿರುವ ನೀರವ್ ಮೋದಿ.

ನೀರವ್ ಮೋದಿ, ಪತ್ನಿ ಅಮಿ, ಸೋದರ ನಿಶ್ಚಲ್, ಪಾರ್ಟ್ನರ್ ಮೆಹುಲ್ ಚೌಕ್ಸಿ, ಡೈಮಂಡ್ಸ್ ಆರ್ ಯುಎಸ್, ಸೋಲಾರ್ ಎಕ್ಸ್ ಪೋರ್ಟ್ಸ್ ಹಾಗೂ ಸ್ಟೆಲ್ಲಾರ್ ಡೈಮಂಡ್ಸ್ ಸಂಸ್ಥೆ ಮೇಲೆ ಕೇಸು ದಾಖಲಾಗಿದೆ.

ಐಪಿಸಿ ಸೆಕ್ಷನ್ 120 ಬಿ, 420, ಭ್ರಷ್ಟಾಚಾರ ನಿಗ್ರಹ ಕಾಯ್ದೆ, ಮನಿಲಾಂಡ್ರಿಂಗ್ ನಿಯಂತ್ರಣ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಾಗಿದೆ.

ನೀರವ್ ಮೋದಿಯನ್ನು ಶೀಘ್ರ ಭಾರತಕ್ಕೆ ಕರೆತರಲಾಗುವುದು.!!

PNB ಬ್ಯಾಂಕಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಅವರನ್ನು ಸ್ವದೇಶಕ್ಕೆ ಕರೆತರುವುದಾಗಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.ನಮ್ಮ ಸರ್ಕಾರ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಸದಾ ಶ್ರಮಿಸುತ್ತಿದೆ ಎಂದು ಅವರು ಹೇಳಿದರು.

ಖಾಸಗಿ ವಾಹಿನಿಯ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ ಅವರು ಬ್ಯಾಂಕ್‌ಗಳಿಗೆ ವಂಚಿಸಿ ಪರಾರಿಯಾಗಿರುವ ನೀರವ್ ಮೋದಿ ಮತ್ತು ಚೋಕ್ಸಿ ಅವರನ್ನು ಭಾರತಕ್ಕೆ ಕರೆತರುತ್ತೇವೆ. ಇಂತಹ ಪ್ರಕರಣಗಳಿಗೆ ಅವಕಾಶ ನೀಡದೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.ದೇಶಾದ್ಯಂತ ಜಿಎಸ್‌ಟಿ ಜಾರಿಗೆ ತರುವ ಮೂಲಕ ಆರ್ಥಿಕ ಸುಧಾರಣೆಗಳನ್ನು ಅನುಷ್ಠಾನಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಜಿಎಸ್‌ಟಿ ಅನುಷ್ಠಾನಗೊಳಿಸುವ ವೇಳೆ ಸಾಕಷ್ಟು ಸಮಸ್ಯೆಗಳು ಎದುರಾದರೂ ಅದನ್ನು ಕೇಂದ್ರ ಸರ್ಕಾರ ಯಶಸ್ವಿಯಾಗಿ ಜಾರಿಗೆ ತಂದಿದೆ. ಜಿಎಸ್‌ಟಿ ಜಾರಿಯನ್ನು ಮುಂದೂಡುವಂತೆ ಒತ್ತಡ ಬಂದರೂ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ. ಈ ಮೂಲಕ ಇನ್ನಷ್ಟು ಆರ್ಥಿಕ ಸುಧಾರಣಾ ಕ್ರಮಗಳನ್ನು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.ಬ್ಯಾಂಕ್ ಹಗರಣಗಳು ಪ್ರತಿಯೊಬ್ಬರನ್ನು ಎಚ್ಚೆತ್ತು ಕೊಳ್ಳುವಂತೆ ಮಾಡಿದೆ. ಈ ವಂಚನೆ ಪ್ರಕರಣಗಳನ್ನು ಹತ್ತಿಕ್ಕಲು ಪರಾರಿಯಾಗಿರುವ ಆರ್ಥಿಕ ಅಪರಾಧಿಗಳ ಮಸೂದೆಯನ್ನು ಜಾರಿಗೆ ತರಲು ಮುಂದಾಗಿದೆ ಎಂದು ತಿಳಿಸಿದರು.