ಮೋದಿ ಪ್ರಧಾನಿಯಾಗುವ ಮೊದಲು ಬಿಜೆಪಿಯಲ್ಲಿ ಯಾವೆಲ್ಲ ಹುದ್ದೆಗಳನ್ನು ಅಲಂಕರಿಸಿದ್ದರು ಗೊತ್ತಾ..!??

ಮೋದಿ ಪ್ರಧಾನಿಯಾಗುವ ಮೊದಲು ಬಿಜೆಪಿಯಲ್ಲಿ ಯಾವೆಲ್ಲ ಹುದ್ದೆಗಳನ್ನು ಅಲಂಕರಿಸಿದ್ದರು ಗೊತ್ತಾ..!??

0

ಪ್ರಪಂಚದ ನಾಯಕ ಭಾರತದ ಹೆಮ್ಮೆಯ ಪುತ್ರ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿ ಎಲ್ಲಕ್ಕಿಂತ ಹೆಚ್ಚಾಗಿ ಹಿಂದೂ ಹೃದಯ ಸಾಮ್ರಾಟ್,ಭಾರತ ಭಾಗ್ಯವಿಧಾತ ಶ್ರೀ ನರೇಂದ್ರ ಮೋದಿ. ಭಾರತವನ್ನು ವಿಶ್ವಗುರು ಮಾಡಲು ಹಗಲಿರುಳು ದುಡಿಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಡೆದು ಬಂದ ಹಾದಿ ಹೇಗಿತ್ತು ನೋಡೋಣ ಬನ್ನಿ..!!

ಅಷ್ಟಕು ಪ್ರಧಾನಿ ಮೋದಿ ಅವರ ರಾಜಕೀಯ ಜೀವನ ಹೇಗಿತ್ತು ಗೊತ್ತಾ…!!ಮುಂದೆ ಓದಿ..

1987 ರಲ್ಲಿ ಬಿಜೆಪಿ ಸೇರುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಮೋದಿ ಧುಮುಕಿದರು. ಪಕ್ಷ ಸೇರಿದ ಒಂದು ವರ್ಷದಲ್ಲೇ ಗುಜರಾತ್ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಬಡ್ತಿ ಪಡೆದರು. ಆ ಹೊತ್ತಿಗಾಗಲೆ ಅವರು ಅತ್ಯಂತ ಸಮರ್ಥ ಸಂಘಟನಾಕಾರ ಎಂದು ಎಲ್ಲೆಡೆ ಗುರುತಿಸಿ ಕೊಂಡಿದ್ದರು. ರಾಜಕೀಯವಾಗಿ ಪ್ರಗತಿ ಕಂಡ ಪಕ್ಷದಿಂದ 1990 ರಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಸಾಧ್ಯವಾಯಿತು.

1988 ಮತ್ತು 1995 ನಡುವೆ ಗುಜರಾತಿನಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಮೂಲಕ ನರೇಂದ್ರ ಮೋದಿಯವರು ಮಾಸ್ಟರ್ ತಂತ್ರಗಾರ ಎಂಬ ಹೆಗ್ಗಳಿಕೆಗೆ ಪಾತ್ರ ರಾದರು. ಆ ಅವಧಿಯಲ್ಲಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರಮಟದಲ್ಲಿ ಎರಡು ಮಹತ್ವದ ಕಾರ್ಯಕ್ರಮಗಳನ್ನು ಆಯೋಜಿಸುವ ಜವಾಬ್ದಾರಿ ನೀಡಲಾಯಿತು.

ಎಲ್. ಕೆ. ಅಡ್ವಾಣಿಯವರ ಸೋಮನಾಥದಿಂದ ಅಯೋಧ್ಯಾವರೆಗಿನ ರಥಯಾತ್ರೆ (ಅತಿ ದೊಡ್ಡ ಯಾತ್ರೆ) ಮತ್ತು ದಕ್ಷಿಣದ ತುದಿಯಲ್ಲಿರುವ ಕನ್ಯಾಕುಮಾರಿ(ದಕ್ಷಿಣ ಭಾರತ ತುತ್ತತುದಿ)ಯಿಂದ ಉತ್ತರದ ತುದಿಯಲ್ಲಿರುವ ಕಾಶ್ಮೀರದವರೆಗೆ ಯಾತ್ರೆ ನಡೆಸುವ ಗುರುತರ ಜವಾಬ್ದಾರಿಯನ್ನು ಮೋದಿಯವರು ಹೊತ್ತುಕೊಂಡರು. 1998 ರಲ್ಲಿ ನವದೆಹಲಿಯಲ್ಲಿ ಬಿಜೆಪಿ ಅಧಿಕಾರ ಸ್ಥಾಪನೆಗೆ ಮೋದಿ ನಿಭಾಯಿಸಿದ ಇದೇ ಎರಡು ರಥಯಾತ್ರೆಗಳು ಕಾರಣ ಎನ್ನಲಾಗಿದೆ.

1995 ರಲ್ಲಿ ಅವರು ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕವಾದ ನರೇಂದ್ರ ಮೋದಿ ಅವರಿಗೆ ಭಾರತದ ಐದು ರಾಜ್ಯಗಳ ಉಸ್ತುವಾರಿಯನ್ನು ನೀಡಲಾಯಿತು. 1998 ರಲ್ಲಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಹುದ್ದೆ . 2001ರ ಅಕ್ಟೋಬರ್ ವರೆಗೂ ಈ ಹುದ್ದೆಯನ್ನು ನಿಭಾಯಿಸಿದರು.

ರಾಷ್ಟ್ರ ಮಟ್ಟದಲ್ಲಿ ನರೇಂದ್ರ ಮೋದಿಯವರು ಕರ್ತವ್ಯ ನಿಭಾಯಿಸುತ್ತಿದ್ದಾಗ, ಅತ್ಯಂತ ಸೂಕ್ಷ್ಮ ಮತ್ತು ಪ್ರಮುಖ ರಾಜ್ಯವಾದ ಜಮ್ಮು ಮತ್ತು ಕಾಶ್ಮೀರ, ಮತ್ತು ಅಷ್ಟೇ ಸೂಕ್ಷ್ಮವಾಗಿದ್ದ ಈಶಾನ್ಯ ರಾಜ್ಯಗಳು ಸೇರಿದಂತೆ ಅನೇಕ ರಾಜ್ಯಗಳಲ್ಲಿನ ಪಕ್ಷದ ವ್ಯವಹಾರ ಉಸ್ತುವಾರಿಯನ್ನು ವಹಿಸಲಾಯಿತು. ಅನೇಕ ರಾಜ್ಯಗಳಲ್ಲಿ ಪಕ್ಷದ ಸಂಘಟನಾ ವ್ಯವಸ್ಥೆಯನ್ನು ಪುನರಾಚಿಸಿ ಪಕ್ಷದ ಬಲವರ್ಧನೆಗೆ ಮೋದಿ ಕಾರಣರಾದರು.

 

ರಾಷ್ಟ್ರಮಟ್ಟದಲ್ಲಿ ಕಾರ್ಯನಿರ್ವಹಿಸುವಾಗ ನರೇಂದ್ರ ಮೋದಿ ಅವರು ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಅನೇಕ ಸಂದರ್ಭಗಳಲ್ಲಿ ಮಹತ್ವದ ಪಾತ್ರ ವಹಿಸಿದರು. ಈ ಅವಧಿಯಲ್ಲಿ ಮೋದಿ ಅವರು ವಿಶ್ವದಾದ್ಯಂತ ಪ್ರವಾಸ ಮಾಡಿ ವಿವಿಧ ದೇಶದ ಪ್ರಮುಖ ನಾಯಕರನ್ನು ಭೇಟಿ ಮಾಡಿದರು. ಈ ಪ್ರವಾಸ ಅನುಭವ ಹೊಸ ಜಾಗತಿಕ ದೃಷ್ಟಿಕೋನ ಬೆಳೆಸಿಕೊಳ್ಳಲು ಸಹಕಾರಿಯಾಯಿತು.

ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿ..!!

2001 ಅಕ್ಟೋಬರ್ ನಲ್ಲಿ ಗುಜರಾತ್ ಸರಕಾರವನ್ನು ಮುನ್ನಡೆಸಬೇಕೆಂದು ಅವರಿಗೆ ಪಕ್ಷದ ವರಿಷ್ಠರಿಂದ ಕರೆ ಬಂದಿತು. ಮೋದಿ ಅವರ ಸರಕಾರ ಅಕ್ಟೋಬರ್ 8, 2001 ರಂದು ಅಧಿಕಾರವಹಿಸಿಕೊಂಡರು.

ಮೋದಿ ಭಾರತದ ಪ್ರಧಾನಿಯಾಗಿ…!!

2014 ಏಪ್ರಿಲ್-ಮೇ ತಿಂಗಳುಗಳಲ್ಲಿ ಭಾರತದ ಲೋಕಸಭೆಗೆ ಜರುಗಿದ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ “ಭಾರತೀಯ ಜನತಾಪಕ್ಷ” ನಿಚ್ಚಳ ಬಹುಮತ ಪಡೆದಿದೆ. ನರೇಂದ್ರ ಮೋದಿಯವರನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಭಾರತದ ಪ್ರಧಾನ ಮಂತ್ರಿಯಾಗಿ ನೇಮಿಸಿದ್ದರು. ದಿನಾಂಕ 26-05-2014 ರಂದು ಅವರು ಭಾರತದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಭಾರತದ 15 ನೆಯ ಪ್ರಧಾನ ಮಂತ್ರಿಯಾಗಿದ್ದಾರೆ. ಪ್ರಧಾನ ಮಂತ್ರಿಯಾದ ದಿನದಂದೇ ಮೊದಲ ಸಂಪುಟ ಸಭೆ ಕರೆದಿದ್ದಾರೆ.

ಇಷ್ಟು ಕಷ್ಟಪಟ್ಟು ತಮ್ಮ ರಾಜಕೀಯ ಜೀವನದಲ್ಲಿ ಇಂದು ದೊಡ್ಡ ಸ್ಥಾನವನ್ನು ಅಲಂಕರಿಸಿದವರು ಮೋದಿ‌ಜಿ. ಯಾವುದೇ ರಾಜಕೀಯ ಕುಟುಂಬದ ಹಿನ್ನೆಲೆ ಇಲ್ಲದೆ ಸ್ವಂತ ಪರಿಶ್ರಮದಿಂದ ಈ ಸ್ಥಾನಕ್ಕೆ ಬಂದಿದ್ದಾರೆ ಮೋದಿಜಿ. ಅವರು ಪ್ರತಿಯೊಂದು ಕ್ಷಣದಲ್ಲಿ ದೇಶದ ಏಳಿಗೆ ಮಾಡಬೇಕೆಂಬ ಆ ಪ್ರಾಮಾಣಿಕತೆಯೇ ಇಂದು ಅವರಿಗೆ ಪ್ರಧಾನಿಯಾಗಲು ಕಾರಣವಾಗಿದೆ.