ಪ್ರಧಾನಿ ಮೋದಿಯವರಿಗೆ ರಕ್ತದಲ್ಲಿ ಪತ್ರ ಬರೆದ ಯುವಕ..!! ಆ ಪತ್ರದಲ್ಲಿ ಏನಿದೆ ಗೊತ್ತಾ..!??

ಪ್ರಧಾನಿ ಮೋದಿಯವರಿಗೆ ರಕ್ತದಲ್ಲಿ ಪತ್ರ ಬರೆದ ಯುವಕ..!! ಆ ಪತ್ರದಲ್ಲಿ ಏನಿದೆ ಗೊತ್ತಾ..!??

0

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ನಿವಾಸಿ ವಿಜಯರಂಜನ ಜೋಶಿ ಪ್ರಧಾನಿಗೆ ರಕ್ತದಲ್ಲಿ ಬರೆದಿರುವ ಯುವಕ. ಸುಮಾರು 10-15 ಸಾವಿರ ಜನಸಂಖ್ಯೆ ಇರುವ ನಾಲತವಾಡ ಪಟ್ಟಣದಲ್ಲಿ ಸರ್ಕಾರಿ ಪ್ರೌಢ ಶಾಲೆ, ಕಾಲೇಜುಗಳು ಯಾವುದೂ ಇಲ್ಲ.

ಈ ಹಿನ್ನೆಲೆ ನಾಲತವಾಡದಲ್ಲಿ ಸರ್ಕಾರಿ ಪ್ರೌಢಶಾಲೆ, ಕಾಲೇಜು ನಿರ್ಮಿಸುವಂತೆ ಶಿಕ್ಷಣ ಇಲಾಖೆಗೆ, ಶಿಕ್ಷಣ ಸಚಿವರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದರೂ ಪ್ರಯೋಜನವಾಗಿಲ್ಲ. ರಾಜ್ಯ ಸರ್ಕಾರ ಸತ್ತು ಶವವಾಗಿದೆ ಎಂದು ಪ್ರಧಾನಿಗೆ ಪತ್ರ ಬರೆದಿದ್ದಾನೆ.

ಜೋಶಿ ನಾಲತವಾಡದಲ್ಲಿ ಸರ್ಕಾರಿ ಪ್ರೌಢಶಾಲೆ ಮತ್ತು ಕಾಲೇಜು ನಿರ್ಮಿಸುವಂತೆ ಶಿಕ್ಷಣ ಇಲಾಖೆಗೆ, ಶಿಕ್ಷಣ ಸಚಿವರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಈಗ ರಾಜ್ಯ ಸರ್ಕಾರ ಸತ್ತು ಶವವಾಗಿದೆ ಎಂದು ಪ್ರಧಾನಿಗೆ ಪತ್ರ ಬರೆಯುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾನೆ.

ಉತ್ತರ ಕರ್ನಾಟಕ ಭಾಗದಲ್ಲಿ ಬಹಳ ವರ್ಷಗಳಿಂದ ಸರ್ಕಾರಿ ಶಾಲಾ-ಕಾಲೇಜುಗಳ ಸಂಖ್ಯೆ ಕಡಿಮೆ ಇವೆ. ಹತ್ತಾರು ಹಳ್ಳಿಗಳಿಂದ ದೂರ ಹೋಗಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗುತ್ತಿಲ್ಲ. ಉತ್ತರ ಕರ್ನಾಕಟಲ್ಲಿ ಬರಗಾಲ, ಬಡತನ ಇರುವುದರಿಂದ ಖಾಸಗಿ ಶಾಲೆಯಲ್ಲಿ ಕಲಿಸುವಷ್ಟು ಶ್ರೀಮಂತರಲ್ಲ ಇಲ್ಲಿನ ಜನರು. ಸರ್ಕಾರಿ ಶಾಲೆ ಇಲ್ಲದೆ, ಶಿಕ್ಷಣ ಸಿಗದ ಕಾರಣ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿದೆ.

ಇದರಿಂದ ನನಗೆ ತುಂಬ ನೋವಾಗಿದೆ, ನೀವಾದರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತೀರಿ ಎಂಬ ನಂಬಿಕೆ ಮೇಲೆ ಪತ್ರ ಬರೆದಿದ್ದೇನೆ ಎಂದು ಯುವಕ ಪತ್ರದಲ್ಲಿ ತಿಳಿಸಿದ್ದಾನೆ.

Photo courtesy: public TV