ಎಸ್ಸೆಸ್ಸೆಲ್ಸಿ, ಪಿಯುಸಿ ಫಲಿತಾಂಶ ದಿನಾಂಕ ಘೋಷಣೆ..!!

ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಮುಕ್ತಾಯಗೊಂಡಿದೆ, ಮೇ 7 ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಇಂಟರ್ ನೆಟ್ ನಲ್ಲಿ ಪ್ರಕಟಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.

ಮೇ 8ರಂದು ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಏಪ್ರಿಲ್ ಕೊನೆಯ ವಾರದಲ್ಲಿ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಸೇಠ್ ಹೇಳಿದರು.

ಈ ಬಾರಿ ಅತೀ ಹೆಚ್ಚು ಫಲಿತಾಂಶ ಬರಲಿದೆ ಎಂಬ ನಿರೀಕ್ಷೆ ಇದೆ. ಮೇ 8 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಕೀ ಉತ್ತರ ಪ್ರಕಟವಾಗಲ್ಲಿದೆ. ಪರೀಕ್ಷಾ ಸುಧಾರಣಾ ಕ್ರಮ ತೃಪ್ತಿ ತಂದಿದೆ ಎಂದು ಹೇಳಿದರು.

Post Author: Ravi Yadav