ಕಾಂಗ್ರೆಸ್ಸಿಗರ ಮೇಲೆ ಬಹುದೊಡ್ಡ ಆರೋಪ ಮಾಡಿದ ಯೋಗಿ

ಜಾತಿ ಮತದ ಹೆಸರಿನಲ್ಲಿ ಸಮಾಜ ವಿಭಜನೆ ಸೇರಿದಂತೆ ಜಿಹಾದಿಗಳಿಗೆ ಬೆಂಬಲ, ವ್ಯಾಪಕ ಭ್ರಷ್ಟಾಚಾರ ಹಾಗೂ ಕೃಷಿಕ ಸಮುದಾಯ ನಿರ್ಲಕ್ಷ್ಯ ಮಾಡಿರುವಂಥ ರಾಜ್ಯ ಕಾಂಗ್ರೆಸ್ ಸರಕಾರದ ಅವನತಿ ಸನ್ನಿಹಿತ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ  ಯೋಗಿ ಆದಿತ್ಯನಾಥ್ ಭವಿಷ್ಯ ನುಡಿದಿದ್ದಾರೆ.

ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತಿದೆ. ಆದರೂ ಇದರ ವಿರುದ್ಧ ಯಾವುದೇ ಕಾನೂನು ಕ್ರಮವನ್ನು ಕೈಗೊಂಡಿಲ್ಲ.

ಕರ್ನಾಟಕ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ, ಅದೇ ಉತ್ತರ ಪ್ರದೇಶದಲ್ಲಿ ಕಾನೂನು ನಮ್ಮ ಹಿಡಿತದಲ್ಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದರು.

ಅವರು ವಿಕಾಸಾಶ್ರಮ ಮೈದಾನದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಮಾಡುವಲ್ಲಿ ವಿಫಲಗೊಂಡಿದೆ ಎಂದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಿಹಾದಿಗಳನ್ನು ಬೆಳೆಸುವಲ್ಲಿ ಪ್ರಯತ್ನಿಸುತ್ತಿದೆ. ಆದರೆ ಉತ್ತರ ಪ್ರದೇಶದಲ್ಲಿ ಜಿಹಾದಿಗಳನ್ನ ಹತ್ತಿಕ್ಕುವ ಕೆಲಸ ಮಾಡುತ್ತಿದ್ದೇವೆ ಎಂದು ಈ ವೇಳೆ ಹೇಳಿದರು.

ನಗರದಲ್ಲಿ ನಡೆದ ಬಿಜೆಪಿ ಬಹಿರಂಗ ಸಂಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಎಟಿಎಂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರಕಾರ ಮತ್ತಷ್ಟು ಲೂಟಿ ಹೊಡೆಯುವುದನ್ನು ತಪ್ಪಿಸಲು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲೇ ಬೇಕು ಎಂದು ಕರೆ ನೀಡಿದರು.

ಸಮಾರಂಭದಲ್ಲಿ ಸಚಿವ ಅನಂತಕುಮಾರ ಹೆಗಡೆ, ಅಭ್ಯರ್ಥಿಗಳಾದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿ. ಎಸ್ ಪಾಟೀಲ ಸೇರಿದಂತೆ ಹಲವರು ಇದ್ದರು.

ಇವರ ಮಾತಿಗೆ ನಿಮ್ಮ ಅಭಿಪ್ರಾಯ ತಿಳಿಸಿ

Post Author: Ravi Yadav