ಬಿಗ್ ಬ್ರೇಕಿಂಗ್ ಮೋದಿ ಅಲೆಯಲ್ಲ ಸುನಾಮಿ : ಶಿಕಾರಿಪುರದಲ್ಲಿ ಬಿ.ಎಸ್.ಯಡಿಯೂರಪ್ಪಗೆ ಭರ್ಜರಿ ಗೆಲುವು

ಶಿವಮೊಗ್ಗ : ಶಿಕಾರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರದಲ್ಲಿ 15 ಸಾವಿರ ಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಸಿದ್ದಾರೆ.

ಇದುವರೆಗಿನ ಅಂಕಿ-ಅಂಶಗಳ ಪ್ರಕಾರ ಬಿಜೆಪಿ ಮ್ಯಾಜಿಕ್ ನಂ 113 ರತ್ತ ದಾಪುಗಾಲು ಹಾಕುತ್ತಿದೆ. ಬಿಎಸ್ ವೈ ಸಿಎಂ ಆಗುವ ಕನಸು ನನಸಾಗುವ ಲಕ್ಷಣಗಳು ಕಾಣಿಸುತ್ತಿದೆ. ಸದ್ಯದ ಸ್ಥಿತಿ ನೋಡಿದರೆ ಅತಂತ್ರ ಸರ್ಕಾರವಲ್ಲ, ಸ್ವತಂತ್ರ ಸರ್ಕಾರವಾಗುವ ಸಾಧ್ಯತೆ ದಟ್ಟವಾಗಿದೆ. ಬೆಂಗಳೂರು ನಗರದಲ್ಲಿ ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ.

ಬೆಂಗಳೂರು ನಗರದ 26 ಕ್ಷೇತ್ರಗಳಲ್ಲಿ 15 ಬಿಜೆಪಿ, 9 ಕಾಂಗ್ರೆಸ್, 2 ಜೆಡಿಎಸ್ ಮುನ್ನಡೆ ಸಾಧಿಸಿದೆ. ಉತ್ತರ ಕನ್ನಡದ 6 ಸ್ಥಾನಗಳ ಪೈಕಿ 5 ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಉಡುಪಿಯಲ್ಲಿ 5 ಕ್ಷೇತ್ರಗಳಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ.

ಬಿಜೆಪಿ ಹಿರಿಯ ನಾಯಕ ಸದಾನಂದ ಗೌಡ, ನಾವು ಮ್ಯಾಜಿಕ್ ನಂ ತಲುಪುತ್ತೇವೆ. ಬಿಎಸ್ ವೈ ನೇತೃತ್ವದಲ್ಲಿ ಸರ್ಕಾರ ರಚನೆ ಮಾಡುತ್ತೇವೆ. ಕಾಂಗ್ರೆಸ್ ಮುಕ್ತ ಭಾರತವನ್ನು ನಿರ್ಮಾಣ ಮಾಡುತ್ತೇವೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಅಗತ್ಯ ಬೀಳುವುದಿಲ್ಲ. ನಾವೇ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Post Author: Ravi Yadav