ಬಿಗ್ ಬ್ರೇಕಿಂಗ್: ಬಿ ಸ್ ವೈ ಪ್ರಮಾಣ ವಚನ ಮುಹೂರ್ತ ಫಿಕ್ಸ್ ?

ಬಿಗ್ ಬ್ರೇಕಿಂಗ್: ಬಿ ಸ್ ವೈ ಪ್ರಮಾಣ ವಚನ ಮುಹೂರ್ತ ಫಿಕ್ಸ್?

0

ನಾಳೆ ನಾನು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.

ಇಂದು ಬೆಳಗ್ಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿ.ಎಸ್ ಯಡಿಯೂರಪ್ಪ ಅವರನ್ನು ಶಾಸಕಾಂಗ ಪಕ್ಷದ ನಾಯಕನ್ನಾಗಿ ಆಯ್ಕೆ ಮಾಡಲಾಯಿತು. ಇದೇ ವೇಳೆ ಶಾಸಕಾಂಗ ಪಕ್ಷದ ಸಭೆ ನಂತರ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ಪಕ್ಷಕ್ಕೆ ಇರುವಂತಹ ಶಾಸಕರ ಬೆಂಬಲದೊಂದಿಗೆ ರಾಜಭವನಕ್ಕೆ ತೆರಳಿ  ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ.

ರಾಣೆಬೆನ್ನೂರಿನಿಂದ ಕೆಪಿಜೆಪಿ ಪಕ್ಷದಿಂದ ಆಯ್ಕೆಯಾಗಿರುವ ಆರ್ ಶಂಕರ್ ಅವರು ಸಹ ಬಿಜೆಪಿಗೆ ಬೆಂಬಲ ನೀಡಿದ್ದು, ಯಡಿಯೂರಪ್ಪ ಅವರು ಕೆಪಿಜೆಪಿಯ ಶಂಕರ್ ಸೇರಿದಂತೆ ಒಟ್ಟು 105 ಶಾಸಕರ ಬೆಂಬಲ ಪತ್ರ ನೀಡಿದ್ದಾರೆ. ಮತದಾರ ಮಹಾಪ್ರಭು ನೀಡಿದ ಜನಾದೇಶ ನಮ್ಮ ಬಳಿ ಇದೆ. ನಾವೇ ಸರ್ಕಾರ ರಚಿಸಲು ಅರ್ಹರು ಎಂದು ಹೇಳುತ್ತಿರುವ ಬಿಜೆಪಿ ನಾಯಕರು ರಾಜಭವನಕ್ಕೆ ತೆರಳಿ, ವಜುಭಾಯಿ ವಾಲರನ್ನು ಭೇಟಿ ಮಾಡಿದ್ದಾರೆ.

105 ಶಾಸಕರ ಬೆಂಬಲವಿರುವ ಎರಡು ಪತ್ರಗಳನ್ನು ರಾಜ್ಯಪಾಲರಿಗೆ ಸಲ್ಲಿಕೆ ಮಾಡಿರುವ ಯಡಿಯೂರಪ್ಪ ಅವರು ಸರ್ಕಾರ ರಚನೆಗೆ ಮೊದಲು ಅವಕಾಶ ನೀಡಬೇಕು. ಗುರುವಾರ(ಮೇ 17) ದಂದು ಪ್ರಮಾಣ ವಚನ ಸ್ವೀಕರಿಸಿ, ಒಂದು ವಾರದೊಳಗೆ ಸದನದಲ್ಲಿ ಬಹುಮತ ಸಾಬೀತುಪಡಿಸುವುದಾಗಿ ಕೋರಿದ್ದರು.

ಅಷ್ಟಕ್ಕೂ ಯಾವಾಗ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ನಾಳೆ ಮಧ್ಯಾಹ್ನ 12.30ಕ್ಕೆ ರಾಜ್ಯದ ಮುಖ್ಯಮಂತ್ರಿಯಾಗಿ ಶಿಕಾರಿಪುರ ಶಾಸಕ, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಿಜೆಪಿ ಪಕ್ಷಕ್ಕೆ ಸರ್ಕಾರ ರಚನೆ ಮಾಡುವುದಕ್ಕೆ ರಾಜ್ಯಪಾಲ ವಾಜೂಬಾಯಿ ವಾಲ ಅವರು ಅವಕಾಶ ನೀಡಿದ್ದು, 11 ದಿವಸಗಳ ಒಳಗೆ ಬಹುಮತ ಸಾಬೀತು ಪಡಿಸುವಂತೆ ಹೇಳಿದ್ದಾರೆ ಎನ್ನಲಾಗಿದೆ.

ರಾಜ್ಯಪಾಲರು ಬಿಜೆಪಿ ಶಾಸಕಾಂಗದ ನಾಯಕ ಬಿ.ಎಸ್ ವೈ ಗೆ ನಾಳೆ ಪ್ರಮಾಣ ವಚನಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ ಎನ್ನಲಾಗಿದೆ. ಹೀಗಾಗಿ ಆಗಿ ಬಿಎಸ್ ವೈ ಪ್ರಮಾಣವಚನ ಮಧ್ಯಾಹ್ನ 12.30ಕ್ಕೆ ಬಿಎಸ್ ವೈ ಅವರು ಮುಖ್ಯಮಂತ್ರಿಯಾಗಿ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವುದಕ್ಕೆ ಸಿದ್ದರಾಗಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಬಿಜೆಪಿಗೆ ಮೇ 27ರೊಳಗೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ ಎನ್ನಲಾಗಿದೆ.

Via: http://kannadanewsnow.com/kannada/top-6/bsy-52/