ಬಿಗ್ ನ್ಯೂಸ್: ರಾಹುಲ್ ಗೆ ರಾಜೀನಾಮೆ ಪತ್ರ ಕಳುಹಿಸಿದ ಕಾಂಗ್ರೆಸ್ ನ ಹಿರಿಯ ನಾಯಕ

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವೇನೋ ರಚಿಸಿರಬಹುದು, ಆದರೆ ಸಂಪುಟ ವಿಸ್ತರಣೆಯ ವಿಷಯದಲ್ಲಿ ಜಟಾಪಟಿ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಈ ಬೆಳವಣಿಗೆಗಳಿಂದ ಬೇಸತ್ತ ಕಾಂಗ್ರೆಸ್ ನ ಹಿರಿಯ ನಾಯಕ ಪದತ್ಯಾಗ ಮಾಡಿದ್ದಾರೆ.ಸಂಪುಟ ವಿಸ್ತರಣೆಗೆ ಮುಂಚೆಯೇ ಮಾಡಿರುವುದು ಹಲವಾರು ಅನುಮಾನಗಳನ್ನು ಹುಟ್ಟು ಹಾಕಿದೆ.

ಅಷ್ಟಕ್ಕೂ ರಾಜಿನಾಮೆ ಕಾರಣಗಳೇನು? ಮುಳುವಾಯಿತೆ ಜೆಡಿಎಸ್ ಜೊತೆಗಿನ ಮೈತ್ರಿ?

ಹೌದು ಎನ್ನುತ್ತವೆ ಈ ನಾಯಕನ ಮಾತುಗಳು. ರಾಜೀನಾಮೆ ನೀಡಿದ ನಂತರ ಮಾತನಾಡಿದ ಈ ನಾಯಕ ಪಕ್ಷದ ನಾಯಕರಿಗೆ ಸಿದ್ದರಾಮಯ್ಯ, ಪರಮೇಶ್ವರ್ ಮಣೆ ಹಾಕುತ್ತಿಲ್ಲ. ಕಾಂಗ್ರೆಸ್ ನೇತಾರರಿಗಿಂತ ಜೆಡಿಎಸ್ ನಾಯಕರೇ ಹೆಚ್ಚು ಆಪ್ಯಾಯಮಾನ ಮಾಡಿದ್ದಾರೆ ಎಂದು ಕೇಂದ್ರ ಹಾಗೂ ರಾಜ್ಯ ನಾಯಕರ ವಿರುದ್ಧ ಧ್ವನಿ ಎತ್ತಿದ್ದಾರೆ.

ಅಷ್ಟಕ್ಕೂ ರಾಜಿನಾಮೆ ನೀಡಿದ ನಾಯಕ ಯಾರು?

ಮತ್ತ್ಯಾರು ಅಲ್ಲ ಮಾಜಿ ಸಿಎಂ ಸಿದ್ದರಾಮಯ್ಯರವರ ಬಣದಲ್ಲಿ ತಮ್ಮನ್ನು ಗುರುತಿಸಿಕೊಂಡ  ರಾಜ್ಯದ ಹಿರಿಯ ಕಾಂಗ್ರೆಸ್ಸಿನ ನಾಯಕ ಮತ್ತು ಲಿಂಗಾಯತ ಸಮುದಾಯದ ಪ್ರಮುಖ ನಾಯಕ ಎಸ್.ಆರ್. ಪಾಟೀಲ್ ಕಾಂಗ್ರೆಸ್ ನಾಯಕರ ವರ್ತನೆಗೆ ಬೇಸತ್ತು ರಾಜೀನಾಮೆ ನೀಡಿದ್ದು, ರಾಹುಲ್ ಗಾಂಧಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಇವರು ಕಾಂಗ್ರೆಸ್ ಮೇಲ್ಮನೆ ಸದಸ್ಯರಾಗಿದ್ದು, ಈಗ ರಾಜೀನಾಮೆ ಕೊಟ್ಟು ಹೊಸ ಬಾಂಬ್ ಸಿಡಿಸಿದ್ದಾರೆ.

ಪಾಟೀಲ್ ಅವರು ತನ್ನ ಕಾಂಗ್ರೆಸ್ ನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್.ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ನಲ್ಲಿ ಹಿರಿಯ ನಾಯಕರಿಗೆ ಬೆಲೆ ಇಲ್ಲದಂತಾಗಿದೆ. ನಿಷ್ಠಾವಂತ ಮುಖಂಡರಿಗೆ ಕವಡೆ ಕಿಮ್ಮತ್ತಿಲ್ಲ. ಎಂದು ಮಾತುಗಳ ಬಾಣವನ್ನು ಹರಿಬಿಟ್ಟಿದ್ದಾರೆ. ಈಗ ಇವರ ನಡೆ ಕುತೂಹಲ ಕೆರಳಿಸಿದ್ದು ರಾಜ್ಯ ರಾಜಕಾರಣದಲ್ಲಿ ಒಂದು ಹೊಸ ಸಂಚಲನವನ್ನು ಮೂಡಿಸಿದೆ

bjpCongressJDSRaajinaame
Comments (0)
Add Comment