ಕರ್ನಾಟಕ- ಬಿಜೆಪಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಎಷ್ಟು ಸ್ಥಾನ ಗೆಲ್ಲಲಿದೆ ಗೊತ್ತಾ?

ನಿಮಗೆಲ್ಲರಿಗೂ ತಿಳಿದಿರುವ ಹಾಗೆ ನಿನ್ನೆಯಷ್ಟೇ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ರಾಜ್ಯದಲ್ಲೆಡೆ ಭಾರೀ ಸಂಚಲನವನ್ನು ಉಂಟು ಮಾಡಿದೆ. ಜನರು ಮೈತ್ರಿ ಸರ್ಕಾರವನ್ನು ವಿರೋಧಿಸುತ್ತಿರುವುದು ಫಲಿತಾಂಶದಿಂದ ಕಂಡುಬಂದಿದೆ. ಯಾಕೆಂದರೆ ಕಾಂಗ್ರೆಸ್ ಬಹುದೊಡ್ಡ ಪಕ್ಷವಾಗಿ  ಹೊರಹೊಮ್ಮಿದ್ದರೂ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಸಾಧನೆ ಕಳೆದ ಬಾರಿಗೆ ಹೋಲಿಸಿದರೆ ತೀರಾ ಕಡಿಮೆ. ಬಿಜೆಪಿ ಪಕ್ಷವು ಭರ್ಜರಿಯಾಗಿ  ತನ್ನ ಕ್ಷೇತ್ರ ಗಳ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದೆ.

ಹೆಸರಿಗೆ ಕಾಂಗ್ರೆಸ್ ಪಕ್ಷವು ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಜನರ ನೇರ ಬೆಂಬಲ ಬಿಜೆಪಿ ಪಕ್ಷಕ್ಕೆ ಇದೆ ಎಂದರೆ ತಪ್ಪಾಗಲಾರದು. ಇದನ್ನು ಚೆನ್ನಾಗಿ ಅರಿತುಕೊಂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವು  ಹಲವು ಕಡೆ ಲೋಕಸಭಾ ಚುನಾವಣಾ ಮೈತ್ರಿ ಗೆ ಸಿದ್ಧವಾಗುತ್ತಿದೆ.  ಇದನ್ನು ತೀವ್ರವಾಗಿ ಖಂಡಿಸಿರುವ ಬಿಎಸ್ ವೈ ರವರು ವಾಗ್ದಾಳಿ ನಡೆಸಿ ಪಕ್ಷದ ಗುರಿ ಮತ್ತು ಎಷ್ಟು ಕ್ಷೇತ್ರಗಳನ್ನು ಗೆಲ್ಲಲಿದ್ದೇವೆ ಎಂಬುದನ್ನು  ಬಹಿರಂಗವಾಗಿ  ಘೋಷಿಸಿ ನೇರ ಸವಾಲನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಹಾಕಿದ್ದಾರೆ.

ಚುನಾವಣಾ ಫಲಿತಾಂಶ ಬಂದ ನಂತರ ಮಾತನಾಡಿದ ಯಡಿಯೂರಪ್ಪ ನವರು ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಅಸ್ತಿತ್ವವನ್ನು ಕಳೆದುಕೊಂಡಿದೆ. ಲೋಕಸಭೆ ಚುನಾವಣೆ ಫಲಿತಾಂಶಗಳು ಸ್ಥಳೀಯ ಶಾಸಕರು ಮತ್ತು ಕಾಂಗ್ರೆಸ್ ಮತ್ತು ಜೆಡಿ (ಎಸ್) ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲುತ್ತವೆ ಎಂದು ಎಚ್ಡಿಕೆಕೆ ಹೇಳಿದೆ. ಆದಾಗ್ಯೂ, 2007 ರಿಂದ ಮೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶಗಳ ಬಗ್ಗೆ ಯಡಿಯೂರಪ್ಪ ಅವರ ಅಂಕಿಅಂಶಗಳು ಕಣ್ಣಿನಲ್ಲಿ ಮತ್ತೊಂದು ಸತ್ಯವಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರ ಮುಂದೆ ಮಾತನಾಡಿದ ಯಡಿಯೂರಪ್ಪನವರು ಮುಂದಿನ ಲೋಕಸಭಾ ಚುನಾವಣೆಗೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಕರ್ನಾಟಕದಿಂದ ನಾವು 25 ಕ್ಷೇತ್ರಗಳನ್ನು ಮೋದಿ ರವರಿಗೆ ಉಡುಗೊರೆಯಾಗಿ ನೀಡಲಿದ್ದೇವೆ  ಎಂದು ಹೇಳಿದ್ದಾರೆ.

Post Author: Ravi Yadav