ರಾಜಕೀಯ ಲಾಭದ ಮೈತ್ರಿಗೆ ಮತ್ತೆ ಬಲಿಯಾಗುತ್ತದೆಯೇ ಕರ್ನಾಟಕ?

ರಾಜಕೀಯ ಲಾಭದ ಮೈತ್ರಿಗೆ ಮತ್ತೆ ಬಲಿಯಾಗುತ್ತದೆಯೇ ಕರ್ನಾಟಕ?

0

ರಾಜ್ಯ ಕಾಂಗ್ರೆಸ್​ನಲ್ಲಿ ಇತ್ತೀಚಿನ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳಿಂದ ಬೇಸತ್ತಿರುವ ಜೆಡಿಎಸ್​ ವರಿಷ್ಠ ಮಾಜಿ ಪ್ರಧಾನ ಮಂತ್ರಿ ಎಚ್​.ಡಿ. ದೇವೇಗೌಡ ಅವರು ಕಾಂಗ್ರೆಸ್​ ಹೈಕಮಾಂಡ್​ಗೆ ಸ್ಪಷ್ಟ ಸಂದೇಶ ರವಾನಿಸಿದ್ದು, ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ ಎನ್ನಲಾಗಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ ಅವರೊಂದಿಗೆ ಮಾತನಾಡಿದ್ದ ದೇವೇಗೌಡರು ಸರ್ಕಾರ ಸಮಸ್ಯೆ ಇಲ್ಲದೆ ನಡೆಯುವುದಾದರೆ ಮಾತ್ರ ಆಡಳಿತ ನಡೆಸೋಣ. ನಿಮಗೆ ಮೈತ್ರಿಯನ್ನು ನಿಭಾಯಿಸುವುದು ಕಷ್ಟವಾಗಿದ್ದರೆ ಸ್ಪಷ್ಟವಾಗಿ ಹೇಳಿಬಿಡಿ. ಮೈತ್ರಿ ಸಾಧ್ಯವಿಲ್ಲವಾದರೆ ಅವರವರ ದಾರಿ ಅವರವರದ್ದು. ಜತೆಗೆ ನಮ್ಮ ಸಹಕಾರಕ್ಕಾಗಿ ಬಿಜೆಪಿ ನಾಯಕರು ಕಾಯುತ್ತಿದ್ದಾರೆ ಎಂದು ಗೌಡರು ತಿಳಿಸಿದ್ದರು ಎಂದು ತಿಳಿದು ಬಂದಿದೆ.

ದೇವೇಗೌಡರ ಈ ಹೇಳಿಕೆಯನ್ನು ನೋಡಿದರೆ ಜೆಡಿಎಸ್ ಪಕ್ಷವು ಬಿಜೆಪಿ ಪಕ್ಷದ ಜೊತೆ ಸೇರಿಕೊಳ್ಳಲು ಆಸಕ್ತಿ ತೋರಿದಂತೆ ಕಾಣುತ್ತಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಇದಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು ಇದು ಜನಾದೇಶವಲ್ಲ ಎಂಬುದು ಜನರ ಅಭಿಪ್ರಾಯವಾಗಿದೆ.

ಸ್ವತಹ ಬಿಜೆಪಿ ಪಕ್ಷದ ಬೆಂಬಲಿಗರು ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು ಹಲವಾರು ಜನ ಬಿಜೆಪಿ ನಾಯಕರನ್ನು ಮೈತ್ರಿ ಮಾಡಿಕೊಳ್ಳದಂತೆ ಒತ್ತಾಯಿಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.