ಸಿಎಂ ತವರಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ: ಮೈತ್ರಿಯಿಂದ ಬೇಸತ್ತು ಬಿಜೆಪಿ ಸೇರಿದ ನಾಯಕರು

ನಿಮಗೆಲ್ಲರಿಗೂ ತಿಳಿದಿರುವ ಹಾಗೆ ರಾಮನಗರ ಈಗ ಅಕ್ಷರಸಹ ರಣರಂಗವಾಗಿದೆ. ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿ ರುವುದು ಜೆಡಿಎಸ್ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿಸಿದರೆ, ರಾಮನಗರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಟ್ಟಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದ ನಾಯಕರು ಅಸಮಾಧಾನಗೊಂಡಿದ್ದಾರೆ.

[do_widget id=et_ads-2]

ರಾಮನಗರದಲ್ಲಿ ಹಲವು ವಿದ್ಯಮಾನಗಳು ನಡೆಯುತ್ತಿವೆ, ಮೊದಲು ದೇವೇಗೌಡರ ನಿರ್ಧಾರದ ವಿರುದ್ಧ ಮೊಟ್ಟಮೊದಲ ಬಾರಿಗೆ ಜೆಡಿಎಸ್ ಕಾರ್ಯಕರ್ತರು ಅಪಸ್ವರ ಎತ್ತಿದ್ದರು ಇಷ್ಟೇ ಅಲ್ಲದೆ ಡಿಕೆಶಿ ಬೆಂಬಲಿಗರಾದ ಚಂದ್ರಶೇಖರ್ ರವರು ಬಿಜೆಪಿ ಸೇರುವುದಾಗಿ ಬೆದರಿಕೆ ಒಡ್ಡಿದ್ದರು.

[do_widget id=et_ads-3]

ಆದರೆ ಆದರೆ ಈಗ ಹೇಳಿದ ಕೆಲಸವನ್ನು ಮಾಡಿ ತೋರಿಸಿರುವ ಚಂದ್ರಶೇಖರ್ ರವರು ತಮ್ಮ ಬಾರಿ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷ ಸೇರಿಕೊಂಡಿದ್ದಾರೆ. ಇಷ್ಟೇ ಅಲ್ಲದೆ ಕಾಂಗ್ರೆಸ್ ಪಕ್ಷದ ಪ್ರಮುಖ 25 ನಾಯಕರು ಮೈತ್ರಿ ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದು ಬಿಜೆಪಿ ಪಕ್ಷಕ್ಕೆ ತಮ್ಮ ಬೆಂಬಲ ಘೋಷಿಸಿದ್ದು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸಲು ಇದ್ದೇವೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

[do_widget id=et_ads-4]

ಇದರ ಮೂಲಕ ರಾಮನಗರದಲ್ಲಿ ನಡೆಯುತ್ತಿರುವ ಕುಟುಂಬ ರಾಜಕಾರಣ ಮತ್ತು ಜಾತಿ ರಾಜಕಾರಣವನ್ನು ತೊಲಗಿಸಬೇಕು ಎಂಬುದು ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯ ಎದ್ದಿರುವ ನಾಯಕರ ಮೂಲ ಉದ್ದೇಶವಾಗಿದೆ ಎಂಬುದು ತಿಳಿದು ಬಂದಿದೆ.

[do_widget id=et_ads-5]

ಈ ಮೂಲಕ ಬಿಜೆಪಿ ಪಕ್ಷಕ್ಕೆ ರಾಮನಗರದಲ್ಲಿ ತನ್ನ ನೆಲೆಯನ್ನು ಕಂಡುಕೊಳ್ಳಲು ಅವಕಾಶ ಸಿಕ್ಕಂತಾಗಿದೆ. ಈ ಅವಕಾಶವನ್ನು ಉಪಯೋಗಿಸಿಕೊಳ್ಳಲು ನಿರ್ಧರಿಸಿರುವ ಯಡಿಯೂರಪ್ಪನವರು ಖಂಡಿತವಾಗಿಯೂ ನಾವು ರಾಮನಗರದಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[do_widget id=et_ads-6]

Post Author: Ravi Yadav