ಭಾರತದ ಸ್ಫೋಟದ ಆರಂಭಿಕ ಬ್ಯಾಟ್ಸ್ಮನ್ ಆಗಿರುವ ರೋಹಿತ್ ಶರ್ಮಾ ರವರು 2018ನೇ ವರ್ಷದ ಅಂತ್ಯದಲ್ಲಿ ತಂದೆ ಯಾಗಿದ್ದರು. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಮೊಟಕುಗೊಳಿಸಿ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದು ಭಾರತಕ್ಕೆ ಆಗಮಿಸಿದ್ದರು. ಪತ್ನಿ ರಿತಿಕಾ ಹಾಗೂ ರೋಹಿತ್ ಶರ್ಮಾ ಅವರಿಗೆ ಮುದ್ದಾದ ಹೆಣ್ಣು ಮಗು ಜನಿಸಿತ್ತು.
ಹಲವಾರು ರೋಹಿತ್ ಶರ್ಮ ಅಭಿಮಾನಿಗಳು ಮಗಳ ಹೆಸರು ಏನಿರಬಹುದು ಎಂದು ಕುತೂಹಲದಿಂದ ಕಾಯುತ್ತಿದ್ದರು. ಈ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಲು ಇತ್ತೀಚೆಗೆ ರೋಹಿತ್ ಶರ್ಮಾ ರವರು ತಮ್ಮ ಪುಟ್ಟ ಮಗಳು ತಮ್ಮ ಕೈಗಳನ್ನು ಹಿಡಿದುಕೊಂಡಿರುವ ಫೋಟೋವನ್ನು ಟ್ವಿಟರ್ ನಲ್ಲಿ ಹಂಚಿಕೊಂಡು ಮನೆಮಾತಾಗಿದ್ದರು.
ಈಗ ಅವರ ಮಾನವರು ತಮ್ಮ ಮಗಳ ಹೆಸರನ್ನು ಬಹಿರಂಗಗೊಳಿಸಿದ್ದು ಟ್ವಿಟರ್ ನಲ್ಲಿ ಈ ಕುರಿತು ಹೇಳಿಕೊಂಡಿದ್ದಾರೆ. ಜೊತೆಗೆ ಫೋಟೋ ಕೂಡ ಹಂಚಿಕೊಂಡಿದ್ದಾರೆ. ತಮ್ಮ ಮಗಳಿಗೆ ಸಮೈರಾ ಎಂದು ಹೆಸರು ಇಟ್ಟಿರುವ ರೋಹಿತ್ ಶರ್ಮಾ ರವರು ಟ್ವಿಟ್ಟರ್ ಖಾತೆಯಲ್ಲಿ ಅಧಿಕೃತವಾಗಿ ಹೆಸರನ್ನು ಪ್ರಕಟಿಸಿದ್ದಾರೆ.
ಇನ್ನು ಜನವರಿ 8ರಂದು ರೋಹಿತ್ ಶರ್ಮಾ ರವರು ಟೀಮ್ ಇಂಡಿಯಾ ತಂಡವನ್ನು ಸೇರಿಕೊಳ್ಳಲಿದ್ದಾರೆ, ಜನವರಿ 12 ರಿಂದ ಆರಂಭವಾಗಲಿರುವ ಏಕದಿನ ಸರಣಿಯಲ್ಲಿ ಭಾರತದ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಲಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.