ಸತ್ಯ ತಿಳಿದು ಮಹಾಮೈತ್ರಿ ಯಿಂದ ಹೊರಬಂದ ಬಿಜೆಪಿ: ಕಾರಣವೇನು ಗೊತ್ತಾ??

2019ರ ಲೋಕಸಭಾ ಚುನಾವಣೆ ಪ್ರತಿದಿನವೂ ಇನ್ನಿಲ್ಲದ ಕುತೂಹಲವನ್ನು ಕೆರಳಿಸುತ್ತದೆ. ಒಂದು ದಿನ ಮೈತ್ರಿ ಸೃಷ್ಟಿಯಾದರೆ ಮತ್ತೊಂದು ದಿನ ಮೈತ್ರಿ ಬಿರುಕು ಕೊಳ್ಳುತ್ತಿದೆ. ಸಾಮಾನ್ಯವಾಗಿ ಇಷ್ಟು ದಿವಸ ನಾವು ತೃತೀಯ ರಂಗದಲ್ಲಿ ಬಿರುಕು ಎಂಬ ಮಾತನ್ನು ಕೇಳುತ್ತಿದ್ದೆವು ಆದರೆ ಈಗ ಬಿಜೆಪಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲು ಸಿದ್ಧವಿದ್ದ ಬಿಜೆಡಿ ಪಕ್ಷಕ್ಕೆ ಶಾಕ್ ಎದುರಾಗಿದ್ದು ಬಿಜೆಪಿ ಪಕ್ಷವು ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಿದೆ.

ಕೆಲವು ದಿನಗಳ ಹಿಂದಷ್ಟೇ ಭಾರತೀಯ ಜನತಾ ಪಕ್ಷವು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಒಡಿಶಾ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಡಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿರುವ ಸಚಿವ ಧರ್ಮೇಂದ್ರ ಪ್ರಧಾನ್ ರವರು ಒಡಿಶಾ ರಾಜ್ಯದಲ್ಲಿ ಮುಂಬರುವ ಲೋಕಸಭಾ ಹಾಗು ವಿಧಾನ ಸಭಾ 2 ಚುನಾವಣೆಯಲ್ಲಿ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ಬಿಜೆಪಿ ಪಕ್ಷ ಸ್ಪರ್ಧಿಸಲಿದೆ ಎಂಬ ಘೋಷಣೆ ಹೊರಡಿಸಿದ್ದಾರೆ.

ಅಷ್ಟಕ್ಕೂ ಕಾರಣವೇನು ಗೊತ್ತಾ??

ಅಧಿಕಾರದಲ್ಲಿರುವ ಬಿಜು ಜನತಾದಳ ಸರ್ಕಾರವು ಜನರ ಆಕಾಂಕ್ಷೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಇದನ್ನು ತಿಳಿಯದೆ ಬಿಜೆಪಿ ಪಕ್ಷವು ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಲಾಗಿತ್ತು, ಆದರೆ ಸಂಪೂರ್ಣವಾಗಿ ಸರ್ಕಾರ ವಿಫಲವಾಗಿದೆ ಎಂಬುದನ್ನು ಅರಿತ ಬಿಜೆಪಿ ಪಕ್ಷವು ಬಿಜು ಜನತಾದಳ ಪಕ್ಷವು ಕೇಂದ್ರ ಸರ್ಕಾರದ ಮೇಲೆ ತಪ್ಪನ್ನು ಹೊರಿಸಿ ಜನರ ಕಣ್ಣಿಗೆ ಮಣ್ಣು ಎರಚಿದ್ದಾರೆ ಎಂಬುದನ್ನು ಬಹುಬೇಗನೆ ತಿಳಿದುಕೊಂಡಿದ್ದಾರೆ.

ಮುಖ್ಯಮಂತ್ರಿಗಳ ಆಗಿರುವ ನವೀನ್ ಪಟ್ನಾಯಕ್ ಅವರು ರಾಜ್ಯವನ್ನು ಅಭಿವೃದ್ಧಿಪಡಿಸುವಲ್ಲಿ ವಿಫಲರಾಗಿದ್ದಾರೆ. ಅಷ್ಟೇ ಅಲ್ಲದೇ ರೈತರಿಗೆ ಯಾವುದೇ ಕೊಡುಗೆಗಳನ್ನು ನೀಡದೆ ರೈತ ವಿರೋಧಿ ಸರ್ಕಾರವನ್ನು ನಡೆಸುತ್ತಿದ್ದಾರೆ ಎಂದು ಧರ್ಮೇಂದ್ರ ಪ್ರಧಾನ್ ರವರು ವಿವರಿಸಿದ್ದಾರೆ.

ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಓಡಿಷ ಜನರು ಸಂಪೂರ್ಣ ಆಕರ್ಷಿತರಾಗಿದ್ದಾರೆ ಎಂಬುದು ಗಮನಿಸಬೇಕಾದ ವಿಷಯ ಅಷ್ಟೇ ಅಲ್ಲದೆ ಒಡಿಶಾದಲ್ಲಿ ಈಗ ಮೋದಿ ಅಲೆ ಭರ್ಜರಿಯಾಗಿ ಮುನ್ನುಗ್ಗುತ್ತಿದೆ ಎಂಬುದನ್ನು ಈಗಾಗಲೇ ಬಿಜೆಪಿ ಪಕ್ಷದ ಆಂತರಿಕ ಸಮೀಕ್ಷೆಯಿಂದ ಬಯಲಾಗಿದ್ದು, ಮುಂದಿನ ಲೋಕಸಭಾ ಚುನಾವಣೆಗಳಲ್ಲಿ ಯಾವುದೇ ಸ್ಥಳೀಯ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳದೆ ಏಕಾಂಗಿಯಾಗಿ ಚುನಾವಣೆಯನ್ನು ಎದುರಿಸಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ.

Post Author: Ravi Yadav