ಜಾಮೀನು ಹಿಂದೆ ಬಿದ್ದ ಡಿ ಕೆ ಶಿ: ಡಿಕೆಶಿ ಜೈಲಿಗೆ??

ಕರ್ನಾಟಕದ ಹಿರಿಯ ಕಾಂಗ್ರೆಸ್ ಪಕ್ಷದ ರಾಜಕೀಯ ನಾಯಕರಾಗಿರುವ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ತಲೆನೋವು ಎದುರಾಗಿದೆ. ಮೊದಲೇ ಪಕ್ಷದಲ್ಲಿ ಹೊಂದಾಣಿಕೆ ಇಲ್ಲದ ಕಾರಣ ಸರ್ಕಾರ ಯಾವುದೇ ಕ್ಷಣದಲ್ಲಾದರೂ ಆತಂಕಗಳು ಎದುರಾಗುತ್ತಿರುವ ವೇಳೆಯಲ್ಲಿ ಡಿಕೆ ಶಿವಕುಮಾರ್ ಅವರು ಬಂಧನವಾಗುವ ಸಾಧ್ಯತೆಗಳು ಹೆಚ್ಚಾಗಿದೆ.

ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿರುವ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಟ್ರಬಲ್ ಎದುರಾಗಿದ್ದು, ಮತ್ತೊಂದು ಪ್ರಕರಣದಲ್ಲಿ ಡಿಕೆ ಶಿವಕುಮಾರ್ ರವರು ಭಾಗಿಯಾಗಿದ್ದಾರೆ ಎಂದು ಸಚಿವ ಡಿಕೆ ಶಿವಕುಮಾರ್ ಅವರು ಸೇರಿದಂತೆ ಐದು ಮಂದಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ ಹಾಗೂ ಈ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಬಂಧನ ಭೀತಿಯಲ್ಲಿರುವ ಡಿಕೆ ಶಿವಕುಮಾರ್, ಸಚಿನ್ ನಾರಾಯಣ್, ಆಂಜನೇಯ, ಸುನಿಲ್ ಶರ್ಮಾ ಹಾಗೂ ರಾಜೇಂದ್ರ ರವರಿಗೆ  ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಲಾಗಿದ್ದು ಎಐಸಿಸಿಗೆ ಹಣ ಪಾವತಿ ಹಾಗೂ  ಹವಾಲಾ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದಾಯ ತೆರಿಗೆ ದಾಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿರುವುದರಿಂದ ಡಿಕೆಶಿ ರವರಿಗೆ ಬಂಧನ ಭೀತಿ ಎದುರಾಗಿದೆ.

ಈ ಪ್ರಕರಣ ಅಕ್ರಮ ಹಣ ವರ್ಗಾವಣೆ ಅಡಿಯಲ್ಲಿ ದಾಖಲಾಗಿರುವುದರಿಂದ ಡಿಕೆ ಶಿವಕುಮಾರ್ ರವರು ಬಂಧನವಾಗುವ ಸಾಧ್ಯತೆಗಳು ಹೆಚ್ಚಾಗಿದ್ದು ಇಂದು ದೆಹಲಿಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಗಳು ಕಂಡು ಬಂದಿವೆ. ಯಾವ ಕ್ಷಣದಲ್ಲಿ ಬೇಕಾದರೂ ಡಿಕೆಶಿ ರವರು ಬಂಧನವಾಗುವ ಸಾಧ್ಯತೆ ಕಾಣಸಿಗುತ್ತಿದ್ದು ಆದಷ್ಟು ಬೇಗ ದೆಹಲಿಗೆ ತೆರಳಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ ಎಂಬ ಮಾತುಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿವೆ.

Post Author: Ravi Yadav