ಡಿಕೆಶಿಗೆ ಮತ್ತೊಂದು ಬಿಗ್ ಶಾಕ್- ಮೂರು ಪ್ರಕರಣಗಳು ಮತ್ತೆ ಓಪನ್ !! ಛಲ ಬಿಡದ ಐಟಿ

ಕಳೆದ ಕೆಲವು ತಿಂಗಳುಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ನ ಪ್ರಮುಖ ನಾಯಕರಾಗಿರುವ ಡಿಕೆ ಶಿವಕುಮಾರ್ ಅವರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ಐಟಿ ದಾಳಿಯ ವೇಳೆಯಲ್ಲಿ ಅಪಾರ ಪ್ರಮಾಣದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿಯೂ ಮಾಧ್ಯಮಗಳಲ್ಲಿ ಪ್ರಸಾರಗೊಂಡಿತ್ತು. ಕೆಲವು ಮಾಧ್ಯಮಗಳು ಡಿಕೆಶಿ ರವರ ರಾಜಕೀಯ ಭವಿಷ್ಯ ಮುಗಿದೆ ಹೋಯಿತು ಎಂದು ಪ್ರಸಾರ ಮಾಡಿದ್ದನ್ನು ಸಹ ನಾವು ಕಂಡಿದ್ದೇವೆ. ಆದರೆ ಡಿಕೆ ಶಿವಕುಮಾರ್ ಅವರ ಮೇಲೆ ಐಟಿ ದಾಳಿ ಪ್ರಕರಣದ ಮೇಲಿನ ಆರೋಪವನ್ನು ಸಂಸದರು ಹಾಗೂ ಶಾಸಕರ ವಿಶೇಷ ನ್ಯಾಯಾಲಯ ನಿರಾಕರಿಸಿತ್ತು. ಮೂರು ಪ್ರಕರಣಗಳಲ್ಲಿ ಡಿಕೆಶಿ ರವರಿಗೆ ಕ್ಲೀನ್ ಚಿಟ್ ನೀಡಿತ್ತು.ಇದರಿಂದ ಡಿಕೆಶಿ ರವರಿಗೆ ಬಿಗ್ ರಿಲೀಫ್ ಸಿಕ್ಕಿದೆ ಎಂಬ ಮಾತು ಕೇಳಿ ಬಂದಿತ್ತು.

ಆದರೆ ಭಾರತೀಯ ಆದಾಯ ತೆರಿಗೆ ಇಲಾಖೆ ಛಲ ಬಿಡುವಂತೆ ಕಾಣುತ್ತಿಲ್ಲ. ಡಿಕೆ ಶಿವಕುಮಾರ್ ಅವರ ವಿರುದ್ಧ ಮತ್ತೊಂದು ದಿಟ್ಟ ಹೆಜ್ಜೆಯನ್ನು ಇಟ್ಟಿರುವ ಐಟಿ ಇಲಾಖೆಯು ನೇರವಾಗಿ ಹೈಕೋರ್ಟ್ ಕದ ತಟ್ಟಿದೆ. ಕೆಳ ನ್ಯಾಯಾಲಯದ ಆದೇಶವನ್ನು ರದ್ದು ಪಡಿಸಲು ಮನವಿ ಮಾಡಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಎಲ್ಲಾ ಮೂರು ಪ್ರಕರಣಗಳ ವಿಚಾರಣೆ ಮುಂದುವರಿಕೆ ಮಾಡಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದಿಂದ ಮುಕ್ತ ಗೊಂಡೆ ಎಂದು ರಿಲೀಫ್ ಆಗಿದ್ದ ಡಿಕೆ ಶಿವಕುಮಾರ್ ಅವರು ಇದೀಗ ಹೈ ಕೋರ್ಟ್ ಮುಂದೆ ಹಾಜರಾಗಬೇಕಾದ ಪರಿಸ್ಥಿತಿ ಎದುರಾಗಿದೆ. ಒಂದು ವೇಳೆ ಹೈಕೋರ್ಟ್ ಈ ಮೂರು ಪ್ರಕರಣಗಳನ್ನು ಮರು ತನಿಖೆಗೆ ಆದೇಶ ನೀಡಿದ ಡಿಕೆಶಿ ರವರಿಗೆ ಮತ್ತಷ್ಟು ಸವಾಲುಗಳು ಎದುರಾಗುವುದು ಖಚಿತ.

Post Author: Ravi Yadav