ಕಾಂಗ್ರೆಸ್ಗೆ ಮರ್ಮಾಘಾತ: ಬಿಜೆಪಿ ಸೇರಿದ ವಿರೋಧಪಕ್ಷದ ನಾಯಕ

ಕಾಂಗ್ರೆಸ್ಗೆ ಮರ್ಮಾಘಾತ: ಬಿಜೆಪಿ ಸೇರಿದ ವಿರೋಧಪಕ್ಷದ ನಾಯಕ

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪಕ್ಷಾಂತರ ಗಳು ಹೆಚ್ಚಾಗುತ್ತಿವೆ. ಕಾಂಗ್ರೆಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್ ಪಕ್ಷದಿಂದ ವಲಸೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ ಕೇವಲ 44 ಲೋಕಸಭಾ ಸೀಟುಗಳನ್ನು ಹೊಂದಿರುವ ಕಾಂಗ್ರೆಸ್ ಪಕ್ಷವು ತನ್ನ ಅಸ್ತಿತ್ವಕ್ಕಾಗಿ ಹೋರಾಡುತ್ತಿದೆ. ಇಂತಹ ಸಮಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಲವಾರು ಹಿರಿಯ ನಾಯಕರು ಶಾಕ್ ಗಳ ಮೇಲೆ ಶಾಕ್ ಗಳನ್ನು ನೀಡುತ್ತಿದ್ದಾರೆ.

ಈಗಾಗಲೇ ಹಲವಾರು ದೊಡ್ಡ ಪಕ್ಷಗಳು ಕಾಂಗ್ರೆಸ್ ಪಕ್ಷದ ಮೈತ್ರಿಯನ್ನು ಈಗಾಗಲೇ ಕಳಚಿಕೊಂಡು ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಇನ್ನು ಕಾಂಗ್ರೆಸ್ ಪಕ್ಷವು ಬೇರೆ ವಿಧಿಯಿಲ್ಲದೆ ಚಿಕ್ಕಪುಟ್ಟ ಪಕ್ಷಗಳೊಂದಿಗೆ ಮೈತ್ರಿಯನ್ನು ಮಾಡಿಕೊಂಡು ನರೇಂದ್ರ ಮೋದಿಯವರ ಅಲೆಯನ್ನು ತಡೆಯುವ ಪ್ರಯತ್ನ ಮಾಡುತ್ತಿದೆ. ಇಂತಹ ಸಮಯದಲ್ಲಿ ಬಿಜೆಪಿ ಪಕ್ಷದ ಭದ್ರಕೋಟೆ ಎನಿಸಿಕೊಂಡಿರುವ ಮಹಾರಾಷ್ಟ್ರದಲ್ಲಿ ಕಳೆದ ಚುನಾವಣೆಯಲ್ಲಿ ಗೆದ್ದಿದ್ದ ಕೆಲವೇ ಕೆಲವು ಸೀಟುಗಳನ್ನು ಕಾಂಗ್ರೆಸ್ ಪಕ್ಷವು ಕಳೆದುಕೊಳ್ಳುವ ಎಲ್ಲ ಲಕ್ಷಣಗಳು ಕಾಣಸಿಗುತ್ತವೆ.

ಮೊನ್ನೆಯಷ್ಟೇ ಮಹಾರಾಷ್ಟ್ರದ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತಿರುವ ನಾಯಕನ ಮಗ ನರೇಂದ್ರ ಮೋದಿ ರವರ ಕಾರ್ಯವೈಖರಿಯನ್ನು ಮೆಚ್ಚಿ ಕೊಂಡು, ಬಿಜೆಪಿ ಪಕ್ಷಕ್ಕೆ ಸೇರಿಕೊಂಡಿದ್ದರು. ಲೋಕಸಭಾ ಚುನಾವಣೆಯಲ್ಲಿ ಕೇವಲ ನಾಲ್ಕು ಸೀಟುಗಳನ್ನು ಗೆದ್ದಿದ್ದ ಕಾಂಗ್ರೆಸ್ ಪಕ್ಷಕ್ಕೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿತ್ತು. ನರೇಂದ್ರ ಮೋದಿ ರವರ ಕಾರ್ಯವೈಖರಿಯನ್ನು ಮೆಚ್ಚಿ ಕೊಂಡು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರವರ ನೇತೃತ್ವದಲ್ಲಿ ಸುಜಯ್ ವಿಖೆ ಪಾಟೀಲ್ ರವರು ಬಿಜೆಪಿ ಪಕ್ಷ ಸೇರಿಕೊಂಡಿದ್ದರು.

ಇನ್ನು ಇಂದು ಮಹಾರಾಷ್ಟ್ರದ ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಇಂದಿನ ವಿರೋಧ ಪಕ್ಷದ ನಾಯಕ ರಾಧಾಕೃಷ್ಣರವರು ತಮ್ಮ ಕಾಂಗ್ರೆಸ್ ಪಕ್ಷದ ಎಲ್ಲಾ ಸ್ಥಾನಮಾನಗಳಿಗೆ ರಾಜೀನಾಮೆ ನೀಡಿದ್ದಾರೆ ಮತ್ತು ನರೇಂದ್ರ ಮೋದಿ ಅವರಿಗೆ ನನ್ನ ಬೆಂಬಲ ಎಂದು ಘೋಷಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ಗಿರೀಶ್ ಮಹಾಜನ್ ರವರು ಇದು ಕೇವಲ ಇನ್ನೂ ಆರಂಭ ಮುಂಬರುವ ದಿನದಲ್ಲಿ ಹಲವಾರು ಕಾಂಗ್ರೆಸ್ ನಾಯಕರು ಬಿಜೆಪಿ ಪಕ್ಷ ಸೇರಿಕೊಳ್ಳಲಿದ್ದಾರೆ ಮತ್ತು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷ ಅವನತಿ ಹೊಂದಲಿದೆ ಎಂದು ಭವಿಷ್ಯ ನುಡಿದಿದ್ದಾರೆ.