ಶೋಭಕ್ಕ ಗೆಲುವು ಫಿಕ್ಸ್, ಕ್ಷಣಕ್ಕೊಂದು ಭಿನ್ನಮತ- ಅಳಿವಿನ ಅಂಚಿನಲ್ಲಿ ದೋಸ್ತಿ ಗಳು

ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವು ಚುನಾವಣೆ ಮೈತ್ರಿಯನ್ನು ಮಾಡಿಕೊಂಡು ಬಿಜೆಪಿಯನ್ನು ಸೋಲಿಸುವ ಯೋಜನೆಯನ್ನು ರೂಪಿಸಿದ ಕ್ಷಣದಿಂದಲೂ ಸಹ ಬಿಜೆಪಿ ಸೋಲಿಸುವುದನ್ನು ಬಿಡಿ ಬದಲಾಗಿ ತಮ್ಮ ಕ್ಷೇತ್ರಗಳನ್ನು ಸಹ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂಬ ಭಯ ಈಗ ಆರಂಭವಾಗಿದೆ. ಕೇವಲ ಮೈತ್ರಿಯನ್ನು ಉಳಿಸಿಕೊಳ್ಳುವ ಕಾರಣಕ್ಕಾಗಿ ಜೆಡಿಎಸ್ ಪಕ್ಷಕ್ಕೆ 8 ಕ್ಷೇತ್ರಗಳನ್ನು ಬಿಟ್ಟು ಕೊಟ್ಟಿದ್ದ ಕಾಂಗ್ರೆಸ್ ಪಕ್ಷವು ಈಗ ಹೈರಾಣಾಗಿ ಕುಳಿತಿದೆ.

ಹಲವಾರು ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷದ ಅಸ್ತಿತ್ವವೇ ಇಲ್ಲದ ಕಾರಣ ಒಂದು ವೇಳೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಸ್ಪರ್ಧಿಸದೇ ಇದ್ದಲ್ಲಿ, ಆ ಕ್ಷೇತ್ರಗಳು ಇನ್ನು ಜೀವನಪರ್ಯಂತ ಬಿಜೆಪಿ ಪಕ್ಷದ ಪಾಲಾಗಲಿದೆ ಎಂಬ ಸಂದೇಶ ಎಲ್ಲರಿಗೂ ಈಗಾಗಲೇ ಸಿಕ್ಕಿದೆ. ಯಾಕೆಂದರೆ ಹಲವಾರು ನಾಯಕರು ಈಗಾಗಲೇ ಪಕ್ಷಾಂತರ ಗಳ ಮೂಲಕ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ, ಇನ್ನು ಕೆಲವರು ಕಾಂಗ್ರೆಸ್ ಪಕ್ಷ ತೊರೆದು ಬಂಡಾಯ ಅಭ್ಯರ್ಥಿಯಾಗಿ ತಮ್ಮನ್ನು ತಾವು ಗುರುತಿಸಿಕೊಂಡು ಕಣಕ್ಕಿಳಿಯಲು ಸಿದ್ಧರಾಗಿದ್ದಾರೆ.

ಮಂಡ್ಯ, ಹಾಸನ, ಉತ್ತರಕನ್ನಡ ಹೀಗೆ ಸೇರಿದಂತೆ ಇನ್ನೂ ಹಲವಾರು ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಟ್ಟ ಕಾರಣ ಈ ಎಲ್ಲಾ ಜಿಲ್ಲೆಗಳಲ್ಲಿ ಕಾಂಗ್ರೆಸ್ನ ಅಂತ್ಯ ಖಚಿತ ಎಂದು ಹೇಳಲಾಗುತ್ತಿದೆ. ಇನ್ನು ಅಸ್ತಿತ್ವವೇ ಇಲ್ಲದ ಜೆಡಿಎಸ್ ಪಕ್ಷವು ಬಿಜೆಪಿಯನ್ನು ಸೋಲಿಸುವುದು ಅಸಾಧ್ಯದ ಮಾತಾಗಿದೆ, ಇದೇ ಸಾಲಿಗೆ ಮತ್ತೊಂದು ಕ್ಷೇತ್ರ ಇಂದು ಸೇರ್ಪಡೆಯಾಗಿದ್ದು, ಬಿಜೆಪಿಯ ಹಿಂದೂ ಫೈರ್ ಬ್ರಾಂಡ್ ಎಂದೇ ಖ್ಯಾತಿ ಪಡೆದು ಕೊಂಡಿರುವ ಶೋಭಾ ಕರಂದ್ಲಾಜೆ ರವರು ಉಡುಪಿ ಹಾಗೂ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಹಳ ಸುಲಭವಾಗಿ ಗೆದ್ದು ಬೀಗಲಿದ್ದಾರೆ ಎಂಬ ಮಾಹಿತಿ ಕೇಳಿ ಬರುತ್ತಿದೆ.

narendra_modi_prime_minister_presentation_indium_106405_2048x1152

ಯಾಕೆಂದರೆ ಮೈತ್ರಿ ಧರ್ಮದಂತೆ ಉಡುಪಿ ಹಾಗೂ ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಲಾಗಿದೆ. ಮೊದಲಿನಿಂದಲೂ ಠೇವಣಿ ಕಳೆದುಕೊಳ್ಳುತ್ತಿದ್ದ ಜೆಡಿಎಸ್ ಪಕ್ಷವು ಈ ಬಾರಿ ಸೂಕ್ತ ಅಭ್ಯರ್ಥಿ ಸಿಗದ ಕಾರಣ ಪ್ರಮೋದ್ ಮಧ್ವರಾಜ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಆದರೆ ಇದರಿಂದ ಬೇಸರಗೊಂಡಿರುವ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅಮೃತ ಶೆಣೈ ರವರು ಸಿಡಿದೆದ್ದಿದ್ದಾರೆ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಇದರಿಂದ ಕಾಂಗ್ರೆಸ್ ಮತಗಳು ವಿಭಜನೆಗೊಂಡು ಉಡುಪಿ ಹಾಗೂ ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ರವರು ಬಹಳ ಸುಲಭವಾಗಿ ಗೆಲುವು ದಾಖಲಿಸಿ ಮತ್ತೊಮ್ಮೆ ಸಂಸದರಾಗಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

Post Author: Ravi Yadav