ಪ್ರಮೋದ್ ಮಧ್ವರಾಜ್ ಕೈ ಕೊಟ್ಟ ಕಾಂಗ್ರೆಸ್- ಶೋಭಾ ಕರಂದ್ಲಾಜೆ ಅವರಿಗೆ ಮತ್ತೊಂದು ಸಿಹಿ ಸುದ್ದಿ

ತನ್ನ ಅಸ್ತಿತ್ವದ ಇಲ್ಲದ ಉಡುಪಿ ಹಾಗೂ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಹುಡುಕಾಟಕ್ಕಾಗಿ ಅಲೆದು ಸುಸ್ತಾಗಿದ್ದಾಗ, ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಯಾಗಿ ಕಾಯುತ್ತಿದ್ದ ಪ್ರಮೋದ್ ಮಧ್ವರಾಜ್ ಅವರು ಕಣ್ಣಿಗೆ ಬಿದ್ದಿದ್ದರು. ಯಾವ ಪಕ್ಷದಿಂದ ಲಾದರೂ ಟಿಕೆಟ್ ಸಿಕ್ಕಲಿ ಎಂದು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷಕ್ಕೆ ಹಾರಿ ಟಿಕೆಟ್ ಪಡೆದಿದ್ದ ಪ್ರಮೋದ್ ಮಧ್ವರಾಜ್ ರವರಿಗೆ ಶಾಕ್ ಉಂಟಾಗಿದೆ.

ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಜೆಡಿಎಸ್ ಪಕ್ಷವು ಉಡುಪಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನವನ್ನು ಸಹ ಗೆದ್ದಿಲ್ಲ, ಇನ್ನು ಬಿಜೆಪಿ ಪಕ್ಷಕ್ಕೆ ಪೈಪೋಟಿ ನೀಡುವ ಪಕ್ಷವೆಂದರೆ ಅದು ಕಾಂಗ್ರೆಸ್ ಮಾತ್ರ, ಇಂತಹ ಸಮಯದಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ಪಕ್ಷದ ಪಾಲಾದ ಕಾರಣ ಆ ಪಕ್ಷಕ್ಕೆ ಜಿಗಿದಿದ್ದ ಪ್ರಮೋದ್ ಮಧ್ವರಾಜ್ ರವರಿಗೆ ಇನ್ನಿಲ್ಲದ ಸವಾಲುಗಳು ಎದುರಾಗುತ್ತಿವೆ. ಎಲ್ಲ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷಕ್ಕೆ ಕೈ ನೀಡುತ್ತಿರುವ ಕಾಂಗ್ರೆಸ್ ಪಕ್ಷವು ಉಡುಪಿ ಹಾಗೂ ಚಿಕ್ಕಮಗಳೂರು ಕ್ಷೇತ್ರದಲ್ಲಿಯೂ ಸಹ ಕೈ ಕೊಟ್ಟಿದೆ.

ಹೌದು ಜೆಡಿಎಸ್ ಸೇರಿದ ಕಾರಣ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವವನ್ನು ಕಳೆದುಕೊಂಡಿರುವ ಪ್ರಮೋದ್ ಮಧ್ವರಾಜ್ ಅವರ ಜೊತೆ ಪ್ರಚಾರಕ್ಕೆ ಹೋಗುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಿಂದೇಟು ಹಾಕುತ್ತಿದ್ದಾರೆ. ಇಷ್ಟು ಸಾಲದು ಎಂಬಂತೆ ಕಾಂಗ್ರೆಸ್ ನ ಹಿರಿಯ ನಾಯಕರನ್ನು ಹಲವಾರು ಬಾರಿ ಸಂಪರ್ಕಿಸಿದರು ಯಾರೊಬ್ಬರೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ರವರ ಪ್ರಚಾರಕ್ಕೆ ಬರಲು ಒಪ್ಪುತ್ತಿಲ್ಲ.

ಆದಕಾರಣ ಒಬ್ಬಂಟಿಯಾಗಿರುವ ಪ್ರಮೋದ್ ಮಧ್ವರಾಜ್ ಅವರ ಸ್ಥಿತಿ ಬಿಜೆಪಿ ಪಕ್ಷಕ್ಕೆ ಪ್ಲಸ್ ಪಾಯಿಂಟ್ ಎನಿಸಿಕೊಂಡಿದೆ. ಈಗಾಗಲೇ ಸುಲಭ ಗೆಲುವನ್ನು ದಾಖಲಿಸುವ ಹಾದಿಯಲ್ಲಿ ಮುನ್ನುಗ್ಗುತ್ತಿರುವ ಶೋಭಾ ಕರಂದ್ಲಾಜೆ ರವರು ಒಂದು ವೇಳೆ ದೋಸ್ತಿಗಳ ಭಿನ್ನಮತ ಹೀಗೆ ಮುಂದುವರೆದಲ್ಲಿ ದಾಖಲೆಯ ಜಯ ಗಳಿಸಲಿದ್ದಾರೆ ಎಂದು ರಾಜಕೀಯ ಪಂಡಿತರು ಅಭಿಪ್ರಾಯ ಪಟ್ಟಿದ್ದಾರೆ. ಮಂಡ್ಯ ಹಾಸನ ಬೆಂಗಳೂರು ಉತ್ತರ ಹಾಗೂ ತುಮಕೂರು ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಕೈ ನೀಡಿದ್ದ ಕಾಂಗ್ರೆಸ್ ನಾಯಕರು ಈಗ ಉಡುಪಿ ಹಾಗೂ ಚಿಕ್ಕಮಗಳೂರು ಕ್ಷೇತ್ರದಲ್ಲೂ ಸಹ ಕೈ ನೀಡಿದ್ದಾರೆ.

Post Author: Ravi Yadav