ಹಾಸನ ಕಾಂಗ್ರೆಸ್ಗೆ ಬಿಗ್ ಶಾಕ್, ಸಾಮೂಹಿಕ ರಾಜೀನಾಮೆ ನೀಡಿದ ಕಾಂಗ್ರೆಸ್ ನಾಯಕರು

ಹಾಸನ ಕಾಂಗ್ರೆಸ್ಗೆ ಬಿಗ್ ಶಾಕ್, ಸಾಮೂಹಿಕ ರಾಜೀನಾಮೆ ನೀಡಿದ ಕಾಂಗ್ರೆಸ್ ನಾಯಕರು

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪಕ್ಷಗಳಲ್ಲಿ ಭಿನ್ನಮತಗಳು ಸ್ಫೋಟಗೊಳ್ಳುತ್ತೀವೆ. ಇನ್ನೇನು ಲೋಕಸಭಾ ಚುನಾವಣೆಗೆ ಕೆಲವೇ ಕೆಲವು ದಿನಗಳು ಇರುವಾಗ ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಾಕ್ ಎದುರಾಗಿದೆ. ಮಂಜೂ ರವರು ಪಕ್ಷ ತೊರೆದು ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ ನಂತರ ಕಾಂಗ್ರೆಸ್ ಪಕ್ಷದ ಅದೃಷ್ಟ ಯಾಕೋ ಚೆನ್ನಾಗಿ ಇದ್ದಂತೆ ಕಾಣುತ್ತಿಲ್ಲ, ದಿನಕ್ಕೊಬ್ಬರಂತೆ ಪಕ್ಷ ತೊರೆದು ರಾಜೀನಾಮೆ ನೀಡುತ್ತಿದ್ದಾರೆ. ಆದರೆ ಇಂದು ಸಾಮೂಹಿಕವಾಗಿ ಹಲವಾರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಮೂಲಕ ಬಿಗ್ ಶಾಕ್ ನೀಡಿದ್ದಾರೆ.ಒಂದು ವೇಳೆ ಈ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮಂಜು ರವರಿಗೆ ಬೆಂಬಲ ನೀಡಿದ್ದಲ್ಲಿ ಹಾಸನ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವು ಮತ್ತಷ್ಟು ನೆಲೆಯೂರಲು ಇದೆ ಎಂಬುದು ರಾಜಕೀಯ ಪಂಡಿತರ ಅಭಿಪ್ರಾಯವಾಗಿದೆ.

DUCC ಉಪಾಧ್ಯಕ್ಷ ಹಾಗೂ ಇತರೆ ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅರಕಲಗೂಡು ಘಟಕದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಇತ್ತೀಚಿನ ನಡೆಗಳಿಂದ ಬೇಸತ್ತು ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ. ಇತ್ತೀಚೆಗಷ್ಟೇ ಮಂತರ್ ಗೌಡ ರವರನ್ನು ಕಾಂಗ್ರೆಸ್ ಪಕ್ಷವು ವಜಾಗೊಳಿಸಿತ್ತು, ಇದರಿಂದ ಬೇಸತ್ತು ರಾಜೀನಾಮೆ ನೀಡಿರುವುದಾಗಿ ಘೋಷಿಸಿಕೊಂಡಿರುವ ಕಾಂಗ್ರೆಸ್ ನಾಯಕರು ಮುಂದೆ ಈ ಮಂಜು ರವರಿಗೆ ಬೆಂಬಲ ನೀಡುವ ಸಾಧ್ಯತೆಗಳು ಹೆಚ್ಚಾಗಿವೆ. ಜೆಡಿಎಸ್ ಪಕ್ಷವನ್ನು ಬೆಂಬಲಿಸಲು ಸಾದ್ಯವಾಗದೆ ಈ ರೀತಿಯ ನಿರ್ಧಾರ ಕೈಗೊಂಡಿರಬಹುದು ಎಂಬುದು ರಾಜಕೀಯ ಪಂಡಿತರ ಅಭಿಪ್ರಾಯವಾಗಿದೆ.ಕಾರಣ ಏನೇ ಇರಲಿ ಇದರ ಪರಿಣಾಮ ನೇರವಾಗಿ ಪ್ರಜ್ವಲ್ ರೇವಣ್ಣ ರವರ ಸ್ಪರ್ದೆಯಮೇಲೆ ಬೀಳಲಿದೆ ಎಂಬುವುದರಲ್ಲಿ ಎರಡು ಮಾತಿಲ್ಲ