ಬೆಳಗಾವಿ ಬಿಜೆಪಿಗೆ ಭಾರಿ ಹಿನ್ನಡೆ, ಸಿಹಿ-ಕಹಿ ಅನುಭವಿಸುತ್ತಿರುವ ಬಿಜೆಪಿ

ಬೆಳಗಾವಿ ಬಿಜೆಪಿಗೆ ಭಾರಿ ಹಿನ್ನಡೆ, ಸಿಹಿ-ಕಹಿ ಅನುಭವಿಸುತ್ತಿರುವ ಬಿಜೆಪಿ

ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆಗೆ ಇನ್ನು ಕೇವಲ 48 ಗಂಟೆಗಳು ಮಾತ್ರ ಬಾಕಿ ಉಳಿದಿವೆ. ಚುನಾವಣೆಗೆ ಇನ್ನು ಕೇವಲ 48 ಗಂಟೆಗಳು ಬಾಕಿ ಉಳಿದಿದ್ದರೂ ಸಹ ಪಕ್ಷಾಂತರ ಗಳು ಮುಂದುವರೆದಿವೆ. ಈ ಬಾರಿಯ ಲೋಕಸಭಾ ಚುನಾವಣೆಯ ಕಾವು ಆರಂಭವಾದ ಕ್ಷಣದಿಂದಲೂ ಪಕ್ಷಾಂತರ ಗಳ ಸಂಖ್ಯೆ ಹೆಚ್ಚಾಗಿಯೇ ಇದೆ, ಅದರಲ್ಲಿಯೂ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ವರ ಸಂಖ್ಯೆ ಬಹಳ ಹೆಚ್ಚಾಗಿತ್ತು ಆದರೆ ಇದೀಗ ಬಿಜೆಪಿ ಪಕ್ಷಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಹಿನ್ನಡೆ ಉಂಟಾಗಿದೆ.

ಕೇವಲ ಕೆಲವೇ ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಹಾಗೂ ಪಕ್ಷದ ವಿರುದ್ಧ ಬಂಡಾಯವೆದ್ದಿರುವ ರಮೇಶ್ ಜಾರಕಿಹೊಳಿ ರವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕಾರ್ಯಕರ್ತರಿಗೆ ಸೂಚಿಸಿ, ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಾಕ್ ನೀಡಿದರು. ಆದರೆ ಈ ಸಂತಸ ಮರೆಮಾಚುವ ಮುನ್ನವೇ ಬಿಜೆಪಿ ಪಕ್ಷಕ್ಕೆ ಇಂದು ದೊಡ್ಡ ಹಿನ್ನಡೆ ಉಂಟಾಗಿದೆ. ಈ ಮಹತ್ವದ ಬೆಳವಣಿಗೆಯಿಂದ ಹಲವಾರು ದಿನಗಳ ಕಾಲ ರಾಜಕೀಯ ಚರ್ಚೆಗೆ ಕಾರಣವಾಗಿದ್ದ ಬೆಳಗಾವಿ ಕ್ಷೇತ್ರವು ಮತ್ತಷ್ಟು ರಂಗೇರಿದೆ.

ಇಂದು ಇದ್ದಕ್ಕಿದ್ದ ಹಾಗೆ ಮಹತ್ವದ ಬೆಳವಣಿಗೆಯಲ್ಲಿ ನೂರ ಐವತ್ತಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಏಕಾಏಕಿ ಬಿಜೆಪಿ ಪಕ್ಷ ತೊರೆದಿದ್ದಾರೆ. ಯಾವ ಕಾರಣಕ್ಕಾಗಿ ಬಿಜೆಪಿ ಪಕ್ಷ ತೊರೆದಿದ್ದಾರೆ ಎಂಬ ಮಾಹಿತಿ ಇನ್ನೂ ಹೊರಬಿದ್ದಿಲ್ಲ, ಆದರೆ ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ನಾಯಕ ಸಚಿವ ಸತೀಶ್ ಜಾರಕಿಹೊಳಿ ರವರ ನೇತೃತ್ವದಲ್ಲಿ ನೂರ ಐವತ್ತಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಇಂದು ಕಾಂಗ್ರೆಸ್ ಪಕ್ಷ ಸೇರಿಕೊಂಡಿದ್ದಾರೆ ಹಾಗೂ ಈಗಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ.

ರಮೇಶ್ ಜಾರಕಿಹೊಳಿ ರವರ ಬೆಂಬಲದಿಂದ ಬಾರಿ ಹುಮ್ಮಸ್ಸು ಪಡೆದುಕೊಂಡಿದ್ದ ಬಿಜೆಪಿ ಪಕ್ಷಕ್ಕೆ ಬಿಜೆಪಿ ಪಕ್ಷದ ಕಾರ್ಯಕರ್ತರ ಈ ನಡೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಚುನಾವಣೆಗೆ ಇನ್ನು ಕೇವಲ 48 ಗಂಟೆಗಳು ಮಾತ್ರ ಬಾಕಿ ಉಳಿದಿರುವ ಕಾರಣ ಕಾರ್ಯಕರ್ತರ ಈ ನಡೆ ಇನ್ನಿಲ್ಲದ ಕುತೂಹಲ ಮೂಡಿಸಿದೆ. ಒಟ್ಟಿನಲ್ಲಿ ಲೋಕಸಭಾ ಚುನಾವಣೆಯು ದಿನೇ ದಿನೇ ಕ್ಷಣಕ್ಕೊಂದು ತಿರುವನ್ನು ಪಡೆದುಕೊಳ್ಳುತ್ತದೆ, ಯಾವ ಅಭ್ಯರ್ಥಿಯೂ ಎಲ್ಲಾ ಸವಾಲುಗಳನ್ನು ಮೆಟ್ಟಿನಿಂತು ಗೆಲುವು ಸಾಧಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ