ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಟವಲ್ ಹಾಕಿದ ಹಿಂದೂ ಫೈರ್ ಬ್ರಾಂಡ್

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಟವಲ್ ಹಾಕಿದ ಹಿಂದೂ ಫೈರ್ ಬ್ರಾಂಡ್

ರಾಜ್ಯದಲ್ಲಿ ಮುಂದಿನ ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಬಿಎಸ್ ಯಡಿಯೂರಪ್ಪನವರ ಮುಖ್ಯಮಂತ್ರಿಗಳಾಗಲಿದ್ದಾರೆ ಎಂಬ ಸುದ್ದಿ ಬಾರಿ ವೇಗವಾಗಿ ಹರಿದಾಡುತ್ತಿದೆ. ಇದೇ ನಿಟ್ಟಿನಲ್ಲಿ ಪಕ್ಷವನ್ನು ಮತ್ತಷ್ಟು ಬಲಗೊಳಿಸುವ ನಿರ್ಧಾರ ಹೈಕಮಾಂಡ್ ಮಾಡಬಹುದು, ಆದಕಾರಣ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಸೀಮಿತಗೊಳಿಸಿ ರಾಜ್ಯಾಧ್ಯಕ್ಷ ಸ್ಥಾನವನ್ನು ಮತ್ತೊಬ್ಬರಿಗೆ ನೀಡಿ, ಇಡೀ ಕರ್ನಾಟಕದಲ್ಲಿ ಕೇಸರಿ ಹರಳಿಸುವ ಕೆಲಸ ನೀಡಬಹುದು ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಿ ಎಸ್ ಯಡಿಯೂರಪ್ಪ ನವರು ಸಹ ಹೈಕಮಾಂಡ್ ತೆಗೆದುಕೊಂಡ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ತಮ್ಮ ಅಭಿಪ್ರಾಯವನ್ನು ಹೊರಹಾಕಿದ್ದಾರೆ.

ಈ ಎಲ್ಲಾ ಹೇಳಿಕೆಗಳು ಹೊರಬಂದ ತಕ್ಷಣ ರಾಜ್ಯಾಧ್ಯಕ್ಷ ಹುದ್ದೆಗೆ ಭಾರಿ ಪೈಪೋಟಿ ಈಗಾಗಲೇ ಆರಂಭವಾಗಿದೆ. ಬಿಜೆಪಿ ಪಕ್ಷದ ಭದ್ರಕೋಟೆ ಎನಿಸಿಕೊಂಡಿರುವ ಉತ್ತರ ಕರ್ನಾಟಕದಿಂದ ಈಗ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಒಬ್ಬರು ತಮ್ಮ ನೇರ ಮಾತುಗಳ ಮೂಲಕ ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿ ಹಿಂದೂ ಫೈರ್ ಬ್ರಾಂಡ್ ಎಂದು ಖ್ಯಾತಿ ಪಡೆದು ಕೊಂಡಿರುವ ಬಸವನಗೌಡ ಪಾಟೀಲ್ ಯತ್ನಾಳ್ ಮಾಧ್ಯಮಗಳೊಂದಿಗೆ ಮಾತನಾಡಿ ಉತ್ತರ ಕರ್ನಾಟಕದವರಿಗೆ ಈ ಬಾರಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂಬುದು ನನ್ನ ಅಭಿಪ್ರಾಯ. ಉತ್ತರ ಕರ್ನಾಟಕ ಯಾವಾಗಲೂ ಬಿಜೆಪಿ ಪಕ್ಷದ ಭದ್ರಕೋಟೆ ಎನಿಸಿಕೊಂಡಿದೆ, ಬಿಜೆಪಿಯಿಂದ ಅತಿ ಹೆಚ್ಚು ಶಾಸಕರು ಬರುವುದು ಉತ್ತರ ಕರ್ನಾಟಕದಿಂದ ಹಾಗಾಗಿ ಉತ್ತರ ಕರ್ನಾಟಕದಿಂದ ನನ್ನನ್ನು ಆರಿಸಿ ರಾಜ್ಯಾಧ್ಯಕ್ಷ ಜವಾಬ್ದಾರಿ ನೀಡಿದರೆ ನಿಭಾಯಿಸಲು ಸಿದ್ಧ ಎಂದು ಹೇಳಿಕೆ ನೀಡಿದ್ದಾರೆ. ಒಟ್ಟಿನಲ್ಲಿ ಬಿಜೆಪಿ ಪಕ್ಷದ ಹೈಕಮಾಂಡ್ ನಿಂದ ಇನ್ನೂ ಯಾವುದೇ ಅಧಿಕೃತ ಸುದ್ದಿ ಮಾತ್ರ ಹೊರಬಿದ್ದಿಲ್ಲ ಆದರೆ ಈಗಾಗಲೇ ಪೈಪೋಟಿ ಮಾತ್ರ ಆರಂಭವಾಗಿದೆ.