ಡಿಕೆಶಿಗೆ ಹೊಸ ಜವಾಬ್ದಾರಿ ನೀಡಿದ ಬಿಎಸ್ ವೈ- ಅಚ್ಚರಿಯಾದರೂ ಸತ್ಯ

ಡಿಕೆಶಿಗೆ ಹೊಸ ಜವಾಬ್ದಾರಿ ನೀಡಿದ ಬಿಎಸ್ ವೈ- ಅಚ್ಚರಿಯಾದರೂ ಸತ್ಯ

ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಯಡಿಯೂರಪ್ಪನವರು ಮುಂದಿನ ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಮುಖ್ಯಮಂತ್ರಿ ಯಾಗುತ್ತೇನೆ ಎಂದು ಬಹಳ ವಿಶ್ವಾಸವನ್ನು ಇಟ್ಟುಕೊಂಡಂತೆ ಕಾಣುತ್ತಿದೆ. ನೂರಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದರೂ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ವಿಫಲವಾಗಿದ್ದ ಬಿಜೆಪಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಬಿ ಎಸ್ ಯಡಿಯೂರಪ್ಪನವರು ಹಾಗೂ ಹಲವಾರು ಬಿಜೆಪಿ ಪಕ್ಷದ ಹಿರಿಯ ನಾಯಕರು ಅಭಿಪ್ರಾಯ ಪಡುತ್ತಿರುವುದು ನಿಮಗೆಲ್ಲರಿಗೂ ತಿಳಿದಿರುವ ವಿಷಯ. ಇದೀಗ ಒಂದು ಹೆಜ್ಜೆ ಮುಂದೆ ಹೋಗಿರುವ ಯಡಿಯೂರಪ್ಪನವರು ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಅವರಿಗೆ ಹೊಸ ಜವಾಬ್ದಾರಿ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ ನವರು ರಾಷ್ಟ್ರ ರಾಜಕಾರಣಕ್ಕೆ ನಾನು ಹೋಗುವುದಿಲ್ಲ. ಹೈಕಮಾಂಡ್ ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಸ್ಥಾನ ನೀಡಿದರು ನಾನು ಅದನ್ನು ತಿರಸ್ಕರಿಸಿ ರಾಜ್ಯದ ರಾಜಕಾರಣದಲ್ಲಿ ಪಕ್ಷವನ್ನು ಮತ್ತಷ್ಟು ಬಲಗೊಳಿಸಲು ಹೋರಾಡುತ್ತೇನೆ. ಮೈತ್ರಿ ಸರ್ಕಾರ ಮೇ 23 ನೇ ತಾರೀಖಿನಂದು ನೂರಕ್ಕೆ ನೂರರಷ್ಟು ಪತನಗೊಳ್ಳಲಿದೆ. ನಮ್ಮ ಬಳಿ ಈಗಾಗಲೇ 104+3+2 ಒಟ್ಟು 109 ಶಾಸಕರ ಬಲವಿದೆ. ( ಉಪ ಚುನಾವಣೆಯ ಕ್ಷೇತ್ರಗಳನ್ನು ಸೇರಿಸಿ) ಇನ್ನು ಲೋಕಸಭಾ ಚುನಾವಣೆಯಲ್ಲಿ 22 ಕ್ಷೇತ್ರಗಳನ್ನು ಗೆದ್ದ ನಂತರ ಮೈತ್ರಿ ಸರ್ಕಾರ ಪತನಗೊಳ್ಳಲಿದೆ ಆದಕಾರಣ ದೋಸ್ತಿ ಸರ್ಕಾರದ ಪ್ರಮುಖ ನಾಯಕ ಸಚಿವ ಡಿಕೆ ಶಿವಕುಮಾರ್ ಅವರು ನನ್ನ ಮುಖ್ಯಮಂತ್ರಿಯ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಮಾಡಲಿ ಎಂದು ಟಾಂಗ್ ನೀಡಿದ್ದಾರೆ.