ಬಿಗ್ ನ್ಯೂಸ್: ಮತ್ತೊಮ್ಮೆ ವಿಧಾನಸಭಾ ಚುನಾವಣೆ?? ಮೈತ್ರಿ ಸರ್ಕಾರದ ವಿಸರ್ಜನೆ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಜೆಡಿಎಸ್ ನ ಹಿರಿಯ ನಾಯಕ

ಬಿಗ್ ನ್ಯೂಸ್: ಮತ್ತೊಮ್ಮೆ ವಿಧಾನಸಭಾ ಚುನಾವಣೆ?? ಮೈತ್ರಿ ಸರ್ಕಾರದ ವಿಸರ್ಜನೆ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಜೆಡಿಎಸ್ ನ ಹಿರಿಯ ನಾಯಕ

ಕರ್ನಾಟಕದಲ್ಲಿ ಕಳೆದ ಒಂದು ವರ್ಷದ ಹಿಂದೆ ಗದ್ದುಗೆ ಏರಿದ್ದ ಮೈತ್ರಿ ಸರ್ಕಾರದಲ್ಲಿ ಅಂದಿನಿಂದಲೂ ಭಿನ್ನಮತಗಳು ಮಾತ್ರ ನಿಂತಿಲ್ಲ. ಇನ್ನೇನು ಎಲ್ಲ ಭಿನ್ನಮತಗಳು ಶಮನ ಗೊಂಡಿವೆ ಎನ್ನುವಷ್ಟರಲ್ಲಿ ಮತ್ತೊಂದು ದಿಕ್ಕಿನಿಂದ ಭಿನ್ನಮತಗಳು ಭುಗಿಲೇಳುತ್ತಿದೆ. ಪರಿಸ್ಥಿತಿ ಹೀಗಿರುವಾಗ ಲೋಕಸಭಾ ಚುನಾವಣೆಯ ಬಳಿಕ ದೋಸ್ತಿ ಗಳಲ್ಲಿ ಭಿನ್ನಮತ ಮತ್ತಷ್ಟು ಹೆಚ್ಚಾಗಲಿದೆ, ಸರ್ಕಾರ ಉಳಿಯುವುದಿಲ್ಲ ಎಂಬ ಭವಿಷ್ಯಗಳು ಈಗಾಗಲೇ ಹಲವಾರು ಬಾರಿ ರಾಜಕೀಯ ಪಂಡಿತರು, ವಿರೋಧ ಪಕ್ಷದ ನಾಯಕರು ಹಾಗೂ ಮೈತ್ರಿ ಸರ್ಕಾರದ ಕೆಲವು ಶಾಸಕರ ಬಾಯಲ್ಲಿ ಕೇಳಿ ಬಂದಿದೆ. ಇದೀಗ ಮತ್ತೊಮ್ಮೆ ದೋಸ್ತಿ ಗಳಲ್ಲಿ ಭಿನ್ನಮತ ಭುಗಿಲೆದ್ದಿದ್ದು ಜೆಡಿಎಸ್ ಪಕ್ಷದ ಹಿರಿಯ ನಾಯಕ ಬಸವರಾಜ್ ಹೊರಟ್ಟಿ ರವರು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ಪಕ್ಷದ ನಾಯಕರ ಹೇಳಿಕೆಗಳಿಗೆ ಬೇಸತ್ತಿರುವ ಬಸವರಾಜ್ ಹೊರಟ್ಟಿ ರವರು ಕಳೆದ ಒಂದು ತಿಂಗಳಿನಿಂದ ಮುಖ್ಯಮಂತ್ರಿ ಹುದ್ದೆಯ ಚರ್ಚೆ ನಡೆಯುತ್ತಿದೆ. ಜನ ಸಾಮಾನ್ಯರಲ್ಲಿ ಸಾಮಾನ್ಯವಾಗಿ ಇದು ಬೇಸರ ಮೂಡಿಸಿದೆ, ಆಡಳಿತ ಮಾಡುವ ಬಗ್ಗೆ ಗಮನ ಹರಿಸಬೇಕು, ಅದನ್ನು ಬಿಟ್ಟು ಅನಗತ್ಯ ವಿಚಾರಗಳ ಬಗ್ಗೆ ಗಮನ ಹರಿಸಲಾಗುತ್ತಿದೆ. ಈ ರೀತಿಯ ಗೊಂದಲ ಸೃಷ್ಟಿಸುವುದು ಸರಿಯಲ್ಲ. ಎರಡು ಪಕ್ಷಗಳು ಮೈತ್ರಿ ಧರ್ಮವನ್ನು ಪಾಲಿಸಬೇಕು ಇಲ್ಲವಾದಲ್ಲಿ ಸರ್ಕಾರವನ್ನು ವಿಸರ್ಜನೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಒಂದು ವೇಳೆ ಅದೇ ನಡೆದಲ್ಲಿ ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ನಾಲ್ಕನೇ ಬಾರಿ ಆಂತರಿಕ ಗೊಂದಲಗಳಿಂದ ಸಮ್ಮಿಶ್ರ ಸರ್ಕಾರಗಳು ಪತನಗೊಂಡ ಸಾಲಿಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಸರ್ಕಾರ ಸೇರಿಕೊಳ್ಳಲಿದೆ.