ಕಾಂಗ್ರೆಸ್ ಗೆ ಬಿಗ್ ಶಾಕ್: ಮತ್ತೊಂದು ಬೃಹತ್ ರಾಜ್ಯವಾಗಲಿದೆಯೇ ಕಾಂಗ್ರೆಸ್ ಮುಕ್ತ ?? ಅಳಿವಿನಂಚಿನತ್ತ ರಾಷ್ಟ್ರೀಯ ಪಕ್ಷ

ಒಂದು ಕಾಲದಲ್ಲಿ ವಿಶ್ವದಲ್ಲಿಯೇ ಅತಿ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡು ಅಧಿಕಾರಕ್ಕೇರಿದ ರಾಷ್ಟ್ರೀಯ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕಾಂಗ್ರೆಸ್ ಪಕ್ಷವು ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದೆ. ಕಳೆದ ಬಾರಿಯಂತೆ ಈ ಬಾರಿಯೂ ಹತ್ತಕ್ಕೂ ಹೆಚ್ಚು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಈಗಾಗಲೇ ಕಡಿಮೆ ಸೀಟುಗಳ ಸಂಖ್ಯೆಯಿಂದ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳುವ ಅರ್ಹತೆಯನ್ನು ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷವು ಇದೀಗ ಅಳಿದು ಉಳಿದುಕೊಂಡಿರುವ ಕೆಲವೇ ಕೆಲವು ರಾಜ್ಯಗಳಲ್ಲಿ ಅವನತಿಯತ್ತ ಸಾಗುತ್ತಿದೆ. ಹೌದು ಕಾಂಗ್ರೆಸ್ ಪಕ್ಷದ ಅಸ್ತಿತ್ವ ಕೆಲವೇ ಕೆಲವು ರಾಜ್ಯಗಳಲ್ಲಿ ಕೊಂಚ ಉಳಿದುಕೊಂಡಿದೆ. ಆದರೆ ಫಲಿತಾಂಶದ ನಂತರ ಆ ರಾಜ್ಯಗಳನ್ನು ಕಳೆದುಕೊಳ್ಳುವತ್ತಾ ಕಾಂಗ್ರೆಸ್ ಪಕ್ಷವು ಸಾಗುತ್ತಿದೆ.

ಹಲವು ರಾಜ್ಯಗಳಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಪಕ್ಷ ಪರದಾಡುತ್ತಿದೆ. ಹೀಗಿರುವಾಗ ಬರೋಬ್ಬರಿ ನಲವತ್ತಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳನ್ನು ತನ್ನ ತೆಕ್ಕೆಯಲ್ಲಿ ಇಟ್ಟುಕೊಂಡಿರುವ ಮಹಾರಾಷ್ಟ್ರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅವನತಿಯತ್ತ ಸಾಗುತ್ತಿದೆ. ಕಳೆದ ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ಕೆಲವು ದಿನಗಳು ಇರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಪ್ರತಿಪಕ್ಷ ನಾಯಕನ ಮಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಎಲ್ಲರ ಹುಬ್ಬೇರಿಸಿದ್ದರು. ಇದೀಗ ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ಮುಖಂಡ ರಾಧಾಕೃಷ್ಣ ವಿಖೆ ಪಾಟೀಲ್ರವರು ಸಹ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದಾರೆ.

ಹೌದು ಇತ್ತೀಚೆಗೆ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲನ್ನು ಕಂಡ ನಂತರ ಮಹಾರಾಷ್ಟ್ರದ ಕಾಂಗ್ರೆಸ್ನ ಪ್ರತಿಪಕ್ಷ ನಾಯಕರಾಗಿದ್ದ ರಾಧಾಕೃಷ್ಣ ಪಾಟೀಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ಮಗನ ಹಾದಿಯಲ್ಲಿ ಮುನ್ನಡೆಯಲು ನಿರ್ಧರಿಸಿರುವ ರಾಧಾಕೃಷ್ಣ ಪಾಟೀಲ್ ರವರು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳಲು ನಿರ್ಧಾರ ಮಾಡಿದ್ದಾರೆ. ಅಷ್ಟೇ ಅಲ್ಲದೆ ತಾವೊಬ್ಬರೇ ಬಿಜೆಪಿ ಪಕ್ಷಕ್ಕೆ ಸೇರಿಕೊಳ್ಳದೆ, ತಮ್ಮ ಕನಿಷ್ಠ 10 ಮಂದಿ ಕಾಂಗ್ರೆಸ್ ಪಕ್ಷದ ಶಾಸಕರ ಬೆಂಬಲದೊಂದಿಗೆ ಬಿಜೆಪಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ. ಇನ್ನೂ ಲಕ್ಷಾಂತರ ಕಾರ್ಯಕರ್ತರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರಿಕೊಳ್ಳುವುದು ಇದೀಗ ಖಚಿತವಾಗಿದೆ.

ಇನ್ನು ಕೆಲವೇ ಕೆಲವು ತಿಂಗಳುಗಳಲ್ಲಿ ಮಹಾರಾಷ್ಟ್ರ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಮಹಾರಾಷ್ಟ್ರ ರಾಜ್ಯದಲ್ಲಿ ಬಿಜೆಪಿ ಪಕ್ಷದ ಹವಾ ಎಷ್ಟಿದೆ ಎಂಬುದನ್ನು ನಿಮಗೆ ತಿಳಿಸುವ ಅವಶ್ಯಕತೆ ಇಲ್ಲ. ಹೀಗಿರುವಾಗ ಪ್ರತಿಪಕ್ಷ ನಾಯಕನೇ ಬಿಜೆಪಿ ಪಕ್ಷಕ್ಕೆ ಸೇರಿಕೊಂಡಿರುವ ಕಾರಣ ಕಾಂಗ್ರೆಸ್ ಪಕ್ಷವು ಮಹಾರಾಷ್ಟ್ರ ರಾಜ್ಯದಲ್ಲಿ ಬಹುತೇಕ ಅಂತ್ಯವನ್ನು ಕಾಣಲಿದೆ. ಈಗಾಗಲೇ ಬಿಜೆಪಿ ಹಾಗೂ ಶಿವಸೇನಾ ಪಕ್ಷಗಳು ಚುನಾವಣಾ ಪೂರ್ವ ಮೈತ್ರಿಯನ್ನು ಮಾಡಿಕೊಂಡು ಕಣಕ್ಕಿಳಿಯುವುದು ನಿಶ್ಚಿತವಾಗಿದೆ, ಹೀಗಿರುವಾಗ ಪ್ರತಿಪಕ್ಷ ನಾಯಕನಾಗಿ ನಡೆಯಿಂದ ಕಾಂಗ್ರೆಸ್ ಪಕ್ಷದ ಬಲ ಮತ್ತಷ್ಟು ಕುಂಠಿತವಾಗುವುದು ಖಚಿತವಾಗಿದೆ. ಒಟ್ಟಿನಲ್ಲಿ ಬಿಜೆಪಿ ಪಕ್ಷದ ಅಲೆ ಹೀಗೆ ಮುಂದುವರೆದರೆ ಇನ್ನೂ ಕೆಲವೇ ಕೆಲವು ವರ್ಷಗಳಲ್ಲಿ ಬಿಜೆಪಿ ಪಕ್ಷದ ಕನಸಾದ ಕಾಂಗ್ರೆಸ್ ಮುಕ್ತ ಭಾರತವನ್ನು ಕಂಡರೂ ಅಚ್ಚರಿಪಡುವಂತಿಲ್ಲ.

bjpCongressKannada NewsKarunaada VaaniMaharaastra