ಹೊಸ ಬಾಂಬ್ ಸಿಡಿಸಿದ ದೇವೇಗೌಡರು! ಬಿಜೆಪಿ ಫುಲ್ ಖುಷ್ !

ಹೊಸ ಬಾಂಬ್ ಸಿಡಿಸಿದ ದೇವೇಗೌಡರು! ಬಿಜೆಪಿ ಫುಲ್ ಖುಷ್ !

ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ, ಸರ್ಕಾರ ಭದ್ರವಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಹಲವಾರು ಬಾರಿ ಆಪರೇಷನ್ ಕಮಲ ನಡೆಯುತ್ತಿವೆ ಎಂಬ ಮಾತುಗಳು ಕೇಳಿ ಬಂದರೂ ಸಹ, ಯಾವೊಬ್ಬ ಶಾಸಕನೂ ಜೆಡಿಎಸ್ ಅಥವಾ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬಿಜೆಪಿ ಪಕ್ಷ ಇದುವರೆಗೂ ಸೇರ್ಪಡೆಗೊಂಡಿಲ್ಲ. ಇನ್ನು ಕಾಂಗ್ರೆಸ್ ಪಕ್ಷವು ಜೆಡಿಎಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಸಂಪುಟ ವಿಸ್ತರಣೆ ಯಾದ ಕ್ಷಣದಿಂದಲೂ, ಬಂಡಾಯ ಶಾಸಕನಾಗಿ ಗುರುತಿಸಿಕೊಂಡಿರುವ ರಮೇಶ್ ಜಾರಕಿಹೊಳಿ ರವರು ಸಹ ಬಿಜೆಪಿ ಪಕ್ಷ ಸೇರಿಕೊಳ್ಳದೇ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ನಡೆದುಕೊಳ್ಳುತ್ತಿದ್ದಾರೆ. ತೆರೆಮರೆಯಲ್ಲಿ ಈಗಲೂ ಸಹ ಆಪರೇಷನ್ ಕಮಲ ನಡೆಯುತ್ತಿದೆ ಎಂದು ದೋಸ್ತಿಗಳು ಆರೋಪ ಮಾಡುತ್ತಿದ್ದಾರೆ ಆದರೆ ಅದ್ಯಾವುದಕ್ಕೂ ಸಾಕ್ಷಿಗಳಿಲ್ಲ.

ಈ ಎಲ್ಲಾ ವಿದ್ಯಮಾನಗಳನ್ನು ಗಮನಿಸಿದ ಸಾಮಾನ್ಯ ಜನ ಇತ್ತೀಚೆಗೆ ಮೈತ್ರಿ ಸರ್ಕಾರ ಭದ್ರವಾಗಿದೆ ಎಂದು ಅಂದುಕೊಂಡಿದ್ದರು. ಆದರೆ ಇದೀಗ ಜೆಡಿಎಸ್ ಪಕ್ಷದ ಎಚ್ ಡಿ ದೇವೇಗೌಡ ರವರು ವಿಶ್ವನಾಥ್ ರವರನ್ನು ಭೇಟಿಯಾದ ಸಂದರ್ಭದಲ್ಲಿ, ಇದೀಗ ಕರ್ನಾಟಕ ರಾಜ್ಯವು ಮಧ್ಯಂತರ ಚುನಾವಣೆಯನ್ನು ಎದುರಿಸಬೇಕಾದ ಸಂದರ್ಭ ಬಂದಿದೆ. ಈ ರೀತಿಯ ಸಂದರ್ಭದಲ್ಲಿ ನೀವು ರಾಜ್ಯಾಧ್ಯಕ್ಷ ಪಟ್ಟಕ್ಕೆ ರಾಜೀನಾಮೆ ನೀಡುವುದು ಸೂಕ್ತವಲ್ಲ, ಆದ್ದರಿಂದ ಮಧ್ಯಂತರ ಚುನಾವಣೆ ಮುಗಿಯುವವರೆಗಾದರೂ ನೀವು ಜೆಡಿಎಸ್ ಪಕ್ಷದ ರಾಜ್ಯ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಈ ಸುದ್ದಿ ಕೇಳಿದ ತಕ್ಷಣ ಬಿಜೆಪಿ ಪಕ್ಷವು ಫುಲ್ ಖುಷಿ ಆಗಿದೆ, ಯಾಕೆಂದರೆ ಕೆಲವು ವರದಿಗಳ ಪ್ರಕಾರ ಒಂದು ವೇಳೆ ಇದೀಗ ಕರ್ನಾಟಕ ರಾಜ್ಯದಲ್ಲಿ ಮಧ್ಯಂತರ ನಡೆದಲ್ಲಿ ಬಿಜೆಪಿ ಪಕ್ಷವು 160ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಖಚಿತ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಸಾಕ್ಷಿ ಎಂದರೆ ಕೆಲವೇ ಕೆಲವು ದಿನಗಳ ಹಿಂದೆ ನಡೆದ ಲೋಕಸಭಾ ಚುನಾವಣೆ.