ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲು ಮುಂದಾದ ನಿರ್ಮಲಾ ಸೀತಾರಾಮನ್

ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲು ಮುಂದಾದ ನಿರ್ಮಲಾ ಸೀತಾರಾಮನ್

ಇತ್ತೀಚೆಗೆ ಕೇಂದ್ರ ಸರ್ಕಾರವು ಹಿಂದಿ ಹೇರಿಕೆ ಮಾಡಲಾಗುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸಿದರೂ ಸಹ ವಿರೋಧಪಕ್ಷಗಳು ಸ್ಥಳೀಯರಲ್ಲಿ ಇರುವ ಭಾಷಾಪ್ರೇಮವನ್ನು ಬಳಸಿಕೊಂಡು ಬಿಜೆಪಿ ಪಕ್ಷದ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿರುವುದು ಬಹಿರಂಗವಾಗಿ ಉಳಿದಿಲ್ಲ. ಇದರ ಬಗ್ಗೆ ಇತ್ತೀಚೆಗಷ್ಟೇ ನಿರ್ಮಲಾ ಸೀತಾರಾಮನ್ ರವರು ಸ್ಪಷ್ಟ ಸಂದೇಶವನ್ನು ನೀಡಿ, ಕೇಂದ್ರ ಸರ್ಕಾರವು ಯಾವುದೇ ಕಾರಣಕ್ಕೂ ಹಿಂದಿ ಹೇರಿಕೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದೀಗ ಭಾಷಾ ಹೇರಿಕೆಯನ್ನು ಹೊರತುಪಡಿಸಿ, ನಿರ್ಮಲಾ ಸೀತಾರಾಮನ್ ರವರು ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲು ಮುಂದಾಗಿದ್ದಾರೆ. ಈ ಮೂಲಕ ಯಾವುದೇ ಸ್ಥಳೀಯ ಭಾಷೆಗಳ ಅಂತ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗುವುದಿಲ್ಲ ಎಂಬ ಸ್ಪಷ್ಟ ಸಂದೇಶ ಸಾರಿದ್ದಾರೆ. ಅಷ್ಟಕ್ಕೂ ನಿರ್ಮಲಾ ಸೀತಾರಾಮನ್ ಅವರು ಮಾಡಲು ಹೊರಟಿರುವುದು ಏನು ಗೊತ್ತಾ?? ಸಂಪೂರ್ಣ ವಿವರಗಳಿಗಾಗಿ ಕೆಳಗಡೆ ಓದಿ.

ಇತ್ತೀಚೆಗೆ ಇಡೀ ರಾಜ್ಯದಲ್ಲಿ ಬ್ಯಾಂಕ್ ಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡುತ್ತಿಲ್ಲ ಎಂದು ಹಲವಾರು ಸಂಸದರು ಧ್ವನಿಯೆತ್ತಿದ್ದರು. ಸ್ಥಳೀಯ ಕನ್ನಡಿಗರಿಗೆ ಬ್ಯಾಂಕ್ ಗಳಲ್ಲಿ ಉದ್ಯೋಗ ನೀಡುವುದರಿಂದ ಆಗುವ ಅನುಕೂಲಗಳ ಬಗ್ಗೆ ನಿರ್ಮಲಾ ಸೀತಾರಾಮನ್ ರವರಿಗೆ ತಿಳಿಸಿ ಮನವಿ ಮಾಡಿಕೊಂಡಿದ್ದರು. ಮನವಿಗೆ ಕೂಡಲೇ ಸ್ಪಂದಿಸಿದ್ದ ನಿರ್ಮಲ ಸೀತಾರಾಮನ್ ರವರು, ಖಂಡಿತ ಇದರ ಬಗ್ಗೆ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂಬ ಭರವಸೆ ನೀಡಿದ್ದರು. ಇದೀಗ ಇದೇ ವಿಷಯದ ಕುರಿತು ಮೊದಲ ಹೆಜ್ಜೆ ಇಡಲು ಹೊರಟಿರುವ ನಿರ್ಮಲಾ ಸೀತಾರಾಮನ್ ರವರು, ಬ್ಯಾಂಕುಗಳ ನೇಮಕಾತಿ ಪರೀಕ್ಷೆಯಾದ IBPS ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಡುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಇದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿರ್ಮಲಾ ಸೀತಾರಾಮನ್ ರವರು, ಬ್ಯಾಂಕುಗಳಲ್ಲಿ ಸ್ಥಳೀಯರಿಗೆ ಹೆಚ್ಚು ಅವಕಾಶಗಳನ್ನು ನೀಡಲು ಆಯಾ ರಾಜ್ಯಗಳ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಒಂದು ವೇಳೆ ಅದೇ ನಡೆದಲ್ಲಿ ಕರ್ನಾಟಕ ರಾಜ್ಯದ ಬ್ಯಾಂಕುಗಳಲ್ಲಿ ಕನ್ನಡಿಗರನ್ನು ನಾವು ಇನ್ನು ಕೆಲವೇ ಕೆಲವು ತಿಂಗಳುಗಳಲ್ಲಿ ನೋಡಬಹುದಾಗಿದೆ.