ತೇಜಸ್ವಿ ಸೂರ್ಯ ಬೇಡಿಕೆಯನ್ನು ಈಡೇರಿಸಿದ ಅಮಿತ್ ಶಾ ! ಐತಿಹಾಸಿಕ ನಿರ್ಧಾರದ ಕಠಿಣ ನಿಲುವು ಪ್ರಕಟಣೆ.

ತೇಜಸ್ವಿ ಸೂರ್ಯ ಬೇಡಿಕೆಯನ್ನು ಈಡೇರಿಸಿದ ಅಮಿತ್ ಶಾ ! ಐತಿಹಾಸಿಕ ನಿರ್ಧಾರದ ಕಠಿಣ ನಿಲುವು ಪ್ರಕಟಣೆ.

ಕಳೆದ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿ ಪಕ್ಷವು ಭಾರತ ದೇಶದಲ್ಲಿ ಭಾರತೀಯರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಲು, ಬೇರೆ ದೇಶಗಳಿಂದ ಅಕ್ರಮವಾಗಿ ಬಂದು ಭಾರತದಲ್ಲಿ ನೆಲೆಸಿರುವ ವಿದೇಶಿಯರನ್ನು ಗಡಿಪಾರು ಮಾಡುವುದಾಗಿ ಭರವಸೆ ನೀಡಿತ್ತು. ಇಷ್ಟು ದಿವಸ ಅಸ್ಸಾಂ ರಾಜ್ಯದಂತೆ, ಪಕ್ಷಿಮ ಬಂಗಾಳ ಹಾಗೂ ಇನ್ನಿತರ ರಾಜ್ಯಗಳಲ್ಲಿ ಜಾರಿಯಾಗುತ್ತದೆ ಎಂದು ಎಲ್ಲರೂ ಊಹೆ ಮಾಡಿದರು. ಖುದ್ದು ಕರ್ನಾಟಕ ರಾಜ್ಯದ ಯುವ ಸಂಸದ ತೇಜಸ್ವಿ ಸೂರ್ಯ ರವರು ಸಹ, ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕೆಲವೇ ಕೆಲವು ದಿನಗಳ ಹಿಂದೆ ಸಂಸತ್ತಿನಲ್ಲಿ ಮಾತನಾಡುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ಪ್ರಜೆಗಳನ್ನು ಗಡಿಪಾರು ಮಾಡಲು ಆದೇಶ ಹೊರಡಿಸಬೇಕು ಎಂದು ಅಮಿತ್ ಶಾ ರವರ ಬಳಿ ಮನವಿ ಮಾಡಿಕೊಂಡಿದ್ದರು. ಇದೇ ವಿಚಾರವಾಗಿ ಇದೀಗ ಅಮಿತ್ ಶಾ ರವರು ಭಾರತದ ಮಟ್ಟಕ್ಕೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡು ಎಲ್ಲರಿಗೂ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

ಹೌದು ಇದೀಗ ಕೇಂದ್ರ ಸರ್ಕಾರವು ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ ಎಂಬ ಯೋಜನೆಯಡಿಯಲ್ಲಿ ಇಡೀ ದೇಶದ ಯಾವುದೇ ಭಾಗದಲ್ಲಿ ಅಕ್ರಮ ವಲಸಿಗರು ವಾಸ್ತವ್ಯ ಹೂಡಿದ್ದರೆ, ಅಂಥವರನ್ನು ಗುರುತಿಸಿ ಅಂತರಾಷ್ಟ್ರೀಯ ಕಾನೂನಿನ ಪ್ರಕಾರ ಗಡಿಪಾರು ಮಾಡುವುದಾಗಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ರವರು ಬುಧವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. ಸಮಾಜವಾದಿ ಪಕ್ಷದ ಸಂಸದ ಜಾವೇದ್ ಅಲಿ ಖಾನ್ ರವರು ಅಸ್ಸಾಮ್ ರಾಜ್ಯದಲ್ಲಿ ಜಾರಿಯಲ್ಲಿರುವ ಯೋಜನೆಯನ್ನು ಉಳಿದ ರಾಜ್ಯದಲ್ಲಿ ಜಾರಿಗೆ ತರುತ್ತಿರಿಯೇ ಎಂದು ಕೇಳಿದ ತಕ್ಷಣವೇ ಅಮಿತ್ ಶಾ ರವರು ತಮ್ಮ ನಿಲುವನ್ನು ಪ್ರಕಟನೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಗೃಹಖಾತೆ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರವರು ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವ ರೋಹಿಂಗ್ಯ ಜನಾಂಗದ ಸಂಪೂರ್ಣ ಮಾಹಿತಿಯನ್ನು ಕಲೆಹಾಕಲಾಗುತ್ತಿರುವುದಾಗಿ ಕೆಲವೇ ದಿನಗಳಲ್ಲಿ ಸಂಪೂರ್ಣ ವರದಿ ಕೇಂದ್ರಕ್ಕೆ ಕಳುಹಿಸಿಕೊಡುವುದಾಗಿ ತಿಳಿಸಿದ್ದಾರೆ.