ರಾಜಕೀಯ ನಿವೃತ್ತಿ ಘೋಷಿಸಿದ ಕರ್ನಾಟಕದ ಮತ್ತೊಬ್ಬ ಹಿರಿಯ ರಾಜಕಾರಣಿ !

ಕಳೆದ ಬಾರಿ ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿ ಗೆದ್ದು, ತದನಂತರ ಜೆಡಿಎಸ್ ಪಕ್ಷದ ರಾಜ್ಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು, ಜೆಡಿಎಸ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ ನಂತರ, ಅವರದ್ದೇನೂ ತಪ್ಪಿಲ್ಲ ವಾದರೂ ಈ ರೀತಿಯಾಗಿ ಹೀನಾಯ ಸೋಲು ಕಂಡ ನಂತರ ಪಕ್ಷವು ಹೊಸರೀತಿಯ ನಾಯಕತ್ವವನ್ನು ಬಯಸುತ್ತದೆ ಎಂದು ಹೇಳಿಕೆ ನೀಡಿ ತನ್ನದೇ ಪಕ್ಷದ ನಾಯಕರ ವಿರುದ್ಧ ಹರಿಹಾಯ್ದಿದ್ದ ಹಳ್ಳಿಹಕ್ಕಿ ಎಂದೇ ಖ್ಯಾತಿ ಪಡೆದು ಕೊಂಡಿರುವ ವಿಶ್ವನಾಥ್ ಅವರು ಇದೀಗ ಶಾಕಿಂಗ್ ಸುದ್ದಿಯನ್ನು ಹೊರಹಾಕಿದ್ದಾರೆ. ಇತ್ತೀಚಿಗೆ ಜೆಡಿಎಸ್ ಪಕ್ಷದಿಂದ ಗೆದ್ದು ಬಂದಿದ್ದ ವಿಶ್ವನಾಥ್ ಅವರು, ರಾಜ್ಯ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ ಎಂದು ಮುನಿಸಿಕೊಂಡಿದ್ದರು.

ಹೌದು, ಇವರ ಮುನಿಸು ಅಷ್ಟಕ್ಕೆ ಸುಮ್ಮನಾಗದೆ ಅತೃಪ್ತ ಶಾಸಕರ ಜೊತೆ ಸೇರಿಕೊಂಡು ಕುಮಾರಸ್ವಾಮಿರವರ ಸರ್ಕಾರ ಬೀಳಿಸಿ, ಬಿಜೆಪಿ ಪಕ್ಷ ಅಧಿಕಾರಕ್ಕೆ ಏರುವ ಅವಕಾಶ ಮಾಡಿಕೊಟ್ಟಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಜೆಡಿಎಸ್ ಪಕ್ಷವು, ವಿಶ್ವನಾಥ್ ರವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿತ್ತು. ಇದರ ಬೆನ್ನಲ್ಲೇ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ವಿಶ್ವನಾಥ್ ರವರು ನಾನು ಚುನಾವಣೆ ರಾಜಕೀಯದಿಂದ ನಿವೃತ್ತಿ ಹೊಂದುತ್ತಿದ್ದೇನೆ. ಇನ್ನು ಮುಂದೆ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಾವುದೇ ಸಕ್ರಿಯ ರಾಜಕಾರಣದಲ್ಲಿ ಇನ್ನು ಮುಂದೆ ತಮ್ಮನ್ನು ತಾವು ತೊಡಗಿಸಿ ಕೊಳ್ಳುವುದಿಲ್ಲ ಎಂದು ಸ್ಪಷ್ಟನೆ ನೀಡಿರುವ ವಿಶ್ವನಾಥ್ ರವರು ಮುಂದೇನು ಮಾಡುತ್ತಾರೆ ಎಂಬ ವಿಷಯ ಕುರಿತು ಏನೂ ಮಾತನಾಡಿಲ್ಲ.