ಮತ್ತೊಂದು ವಿಚಾರವಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ದಿನೇಶ್ ಗುಂಡೂರಾವ್ . ಒಮ್ಮೆ ಓದಿ ನಿಮ್ಮ ಅಭಿಪ್ರಾಯ ತಿಳಿಸಿ

ಮತ್ತೊಂದು ವಿಚಾರವಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ದಿನೇಶ್ ಗುಂಡೂರಾವ್ . ಒಮ್ಮೆ ಓದಿ ನಿಮ್ಮ ಅಭಿಪ್ರಾಯ ತಿಳಿಸಿ

ಇಷ್ಟು ದಿವಸ ರಾಜ್ಯ ಸರ್ಕಾರ ಸತ್ತಿದೆ ಎಂದು ಆರೋಪ ಮಾಡುತ್ತಿದ್ದ ಯಡಿಯೂರಪ್ಪನವರು ತಾವು ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಆಡಳಿತ ಶಕ್ತಿಯನ್ನು ಹೆಚ್ಚು ಮಾಡಬೇಕು ಎಂದು ಪಣ ತೊಟ್ಟಂತೆ ಕಾಣುತ್ತಿದೆ. ಈಗಾಗಲೇ ತಾವು ಮುಖ್ಯಮಂತ್ರಿಯಾದ ಮೇಲೆ ಹಲವಾರು ಕಠಿಣ ಆದೇಶಗಳನ್ನು ಹೊರಡಿಸಿರುವ ಬಿಎಸ್ ಯಡಿಯೂರಪ್ಪನವರು ಇದೀಗ ಮತ್ತೊಂದು ಆದೇಶ ಹೊರಡಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಷ್ಟು ದಿವಸ ರಾಜ್ಯದಲ್ಲಿ ಕಡಿಮೆ ಬೆಲೆಗೆ ಆಹಾರ ನೀಡುತ್ತಿದ್ದ ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಯಡಿಯೂರಪ್ಪ ಮುಂದಾಗಲಿದ್ದಾರೆ  ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ. ಮೊದಲಿನಿಂದಲೂ ಸರ್ಕಾರದ ಹಣದಲ್ಲಿ ಸಾಮಾನ್ಯ ಜನರಿಗೆ ಕಡಿಮೆ ಬೆಲೆಯಲ್ಲಿ ಆಹಾರ ವಿತರಣೆ ಮಾಡುತ್ತಿದ್ದ ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಹಲವಾರು ಅಭಿಪ್ರಾಯಗಳು ಕೇಳಿ ಬಂದಿದ್ದವು. ದುಡ್ಡು ನೀಡುತ್ತಿರುವುದು ಸರ್ಕಾರ, ಕ್ಯಾಂಟೀನ್ ಗೆ ಇಂದಿರಾ ಹೆಸರು ಯಾಕೆ ಇಂದು ಹಲವಾರು ಜನ ಪ್ರಶ್ನೆ ಮಾಡುತ್ತಿದ್ದರು.

ಇದೀಗ ಇದೇ ವಿಚಾರವನ್ನು ಮುಂದಿಟ್ಟುಕೊಂಡಿರುವ ಬಿಎಸ್ ಯಡಿಯೂರಪ್ಪನವರು ಇಂದಿರಾ ಕ್ಯಾಂಟೀನ್ ಹೆಸರನ್ನು ಭಾರತದ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅಥವಾ ಇನ್ಯಾರಾದರೂ ದೇಶಕ್ಕಾಗಿ ಹೋರಾಡಿದ ವೀರ ವನಿತೆಯರು ಅಥವಾ ಅನ್ನಪೂರ್ಣ ಕ್ಯಾಂಟೀನ್ ಎಂದು ಹೆಸರಿಡಲು ಚಿಂತನೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ. ಇದೀಗ ಇದೆ ವಿಚಾರವಾಗಿ ಇಂದಿರಾ ಕ್ಯಾಂಟಿನ್’ ಹೆಸರನ್ನು ಅನ್ನಪೂರ್ಣ ಕ್ಯಾಂಟಿನ್ ಎಂದು ಬದಲಾವಣೆ ಮಾಡಲು ಬಿಜೆಪಿ ಸರಕಾರ ಮುಂದಾದರೆ ಅದರ ವಿರುದ್ಧ ಉಗ್ರ ಸ್ವರೂಪದ ಹೋರಾಟ ರೂಪಿಸಲಾಗುತ್ತದೆ, ಯಡಿಯೂರಪ್ಪ ಅಧಿಕಾರ ಸ್ವೀಕಾರ ಮಾಡಿದ ದಿನವೇ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ, ಎಲ್ಲ ಕ್ಯಾಂಟಿನ್‌ಗಳಲ್ಲಿಯೂ ಇಂದಿರಾಗಾಂಧಿ ಅವರ ಭಾವಚಿತ್ರವೂ ಇದೆ. ಬಿಜೆಪಿಯ ಒಬ್ಬ ಮುಖಂಡನ ಮಾತು ಕೇಳಿ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ಮಾಡುವುದಿಲ್ಲ ಎಂಬ ವಿಶ್ವಾಸವಿದೆ, ಆದರೆ ಬದಲಾವಣೆ ಮಾಡಿದರೆ ಹೋರಾಟ ಖಚಿತ ಎಂದರು.